Chikmagalur: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ
Team Udayavani, Oct 18, 2023, 2:14 PM IST
ಚಿಕ್ಕಮಗಳೂರು : ಜಿಲ್ಲೆಯ ಕಾಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಮಂಜುನಾಥ( 38) ಮೃತ ದುದೈವಿ.
ಮಂಜುನಾಥ ತನ್ನ ತಂದೆಗೆ ಸೇರಿದ 2 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ, ಇತ್ತೀಚೆಗೆ ಸೂರ್ಯಕಾಂತಿ, ನೆಲಗಡಲೆ, ಈರುಳ್ಳಿ ಬೆಳೆಯಲು ವಿವಿಧ ಬ್ಯಾಂಕ್ ಹಾಗೂ ಫೈನಾನ್ಸ್ ಮತ್ತಿತರ ಕಡೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಬೆಳೆ ಸರಿಯಾಗಿ ಬರದ ಕಾರಣ ಮನನೊಂದು ಅವರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನ ಪತ್ನಿ ರೇಣುಕಮ್ಮ ನೀಡಿದ ದೂರಿನ ಆಧಾರದಲ್ಲಿ ಯಗಟಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೀರೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಶವಪರೀಕ್ಷೆ ನಡೆಸಿ ವರದಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್ಕೌಂಟರ್ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.