ಚಿಕ್ಕಮಗಳೂರು: ಬಿರುಗಾಳಿ ಸಹಿತ ಮಳೆಗೆ ತತ್ತರಿಸಿದ ಜನತೆ, ಹೆಬ್ಬಾಳೆ ಸೇತುವೆ ಮುಳುಗಡೆ ಆತಂಕ
Team Udayavani, Aug 5, 2020, 11:31 AM IST
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಗೆ ಜನತೆ ತತ್ತರಿಸಿ ಹೋಗಿದ್ದು, ಹ್ಯಾಂಡ್ ಪೋಸ್ಟ್, ಮುತ್ತಿಗೆಪುರ, ಅಣಜೂರಿನಲ್ಲಿ ಮರಗಳು ಧರೆಗುರುಳಿವೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಗ್ರಾಮದ ಹಲವೆಡೆ ಮರಗಳು ರಸ್ತೆಗುರುಳಿದ ಪರಿಣಾಮ, ವಿದ್ಯುತ್ ಕಂಬಗಳು ಕೂಡ ಧರಾಶಾಯಿಯಾಗಿವೆ. ಬಿರುಗಾಳಿ ಸಹಿತ ಮಳೆಯಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ವರುಣನ ಅಬ್ಬರಕ್ಕೆ ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಕಳೆದ ರಾತ್ರಿ ಒಂದು ಬಾರಿ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಮಾತ್ರವಲ್ಲದೆ ಸೇತುವೆ ಮೇಲೆ ಮರದ ದಿಣ್ಣೆಗಳು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
ಇದೀಗ ಭದ್ರಾ ನೀರು ಸೇತುವೆಗೆ ಅಪ್ಪಳಿಸುತ್ತಿದ್ದು, ಮುಳುಗಡೆಯಾಗಲು ಒಂದು ಅಡಿಯಷ್ಟೆ ಬಾಕಿಯಿದೆ. ಸೇತುವೆ ಮಳುಗಡೆಯಾದರೆ ಹೊರನಾಡು – ಕಳಸ ಸಂಪರ್ಕ ಸಂಪೂರ್ಣ ಕಡಿವಾಗಲಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.