ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸರ್ವ ಸನ್ನದ್ಧ

ಜಿಲ್ಲೆಯ 58 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ 13,924 ವಿದ್ಯಾರ್ಥಿಗಳು

Team Udayavani, Jun 24, 2020, 1:11 PM IST

24-June-09

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಜೂ.25ರಿಂದ ಜು.4ರ ವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಕೋವಿಡ್  ಭೀತಿಯ ನಡುವೆ ಜಿಲ್ಲೆಯಲ್ಲಿ 13,924 ವಿದ್ಯಾರ್ಥಿಗಳು 58 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತವಾಗಿ ಸಿದ್ಧಪಡಿಸಲಾಗಿದೆ.

32 ಸರ್ಕಾರಿ ಶಾಲೆಗಳ ಪರೀಕ್ಷಾ ಕೇಂದ್ರ, 7ಅನುದಾನಿತ ಪ್ರೌಢಶಾಲೆಗಳ ಪರೀಕ್ಷಾ ಕೇಂದ್ರ ಹಾಗೂ 19 ಅನುದಾನರಹಿತ ಪರೀಕ್ಷಾ ಸೇರಿದಂತೆ 58 ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾದ್ಯಂತ ತೆರೆಯಲಾಗಿದೆ. 2 ಕೇಂದ್ರಗಳಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, 9 ಕೇಂದ್ರಗಳಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, 27ಕೇಂದ್ರಗಳಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ 20 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಹಾಗೂ ನಗರ ವ್ಯಾಪ್ತಿಯಲ್ಲಿ 23 ಮತ್ತು ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ 35 ಕೇಂದ್ರಗಳನ್ನು ತೆರೆಯಲಾಗಿದೆ. 58 ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಕೋವಿಡ್  ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಗಳನ್ನು ರಾಸಾಯನಿಕ ಬಳಸಿ ಶುಚಿಗೊಳಿಸಲಾಗಿದೆ. ಜಿಲ್ಲೆಯ 58 ಪರೀಕ್ಷಾ ಕೇಂದ್ರಗಳಲ್ಲಿ 746 ಕೊಠಡಿ ಮೇಲ್ವಿಚಾರಕರು, 58 ಕಸ್ಟೋಡಿಯನ್‌ಗಳು, ಸ್ಥಾನಿಕ ಜಾಗೃತದಳ, ಮುಖ್ಯ ಅಧೀಕ್ಷಕರು, ಮೊಬೈಲ್‌ ಸ್ವಾಧೀನಾಧಿಕಾರಿಗಳು, ಅಂತರ ಇಲಾಖಾ ವೀಕ್ಷಕರು, 8ಬ್ಲಾಕ್‌ ನೋಡಲ್‌ ಅಧಿಕಾರಿಗಳು, 5 ಜಿಲ್ಲಾ ಜಾಗೃತ ದಳದ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸಲಿದೆ.

ಸ್ಕೌಟ್ಸ್‌ ಮತ್ತು ಗೈಡ್ಸ್‌ ಘಟಕದಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ 4 ಜನ ಸ್ವಯಂ ಸೇವಕರನ್ನು ನೇಮಿಸಲಾಗಿದೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆಗೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸಹಾಯಕ ಸಿಬ್ಬಂದಿಯನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಎನ್‌-95 ಮಾಸ್ಕ್ ಗಳನ್ನು  ಈಗಾಗಲೇ ವಿತರಣೆ ಮಾಡಲಾಗಿದೆ. ಪರೀಕ್ಷಾ  ಕೇಂದ್ರದ ಸುತ್ತಮುತ್ತ 200 ಮೀ. ಪ್ರದೇಶವನ್ನು ನಿಷೇತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಕೋವಿಡ್ ಸೋಂಕು ಭೀತಿ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಯಲು ಬೇಕಾದ ಸಕಲ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ.

ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ಒಳಪಡಿಸಲು ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಯಲ್ಲಿ ದೇಹದ ಉಷ್ಣತೆ ಹೆಚ್ಚಿರುವರು, ಜ್ವರ, ಶೀತ, ಕೆಮ್ಮಿನಿಂತಹ ಲಕ್ಷಣವುಳ್ಳ ಮಕ್ಕಳು ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಇರುವ ಸ್ಥಳದಲ್ಲೇ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ನೀಡಿರುವುದರಿಂದ ವಲಸೆ ಕಾರ್ಮಿಕರು, ವಸತಿ ಶಾಲೆ ವಿದ್ಯಾರ್ಥಿಗಳು ಪರೀಕ್ಷಾ  ಕೇಂದ್ರವನ್ನು ಬಲಿಸಿಕೊಂಡಿರುವ ಹೊರ ಜಿಲ್ಲೆಯ 553 ವಿದ್ಯಾರ್ಥಿಗಳು ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲಿದ್ದಾರೆ. ಹಾಗೆಯೇ ಜಿಲ್ಲೆಯ 502 ವಿದ್ಯಾರ್ಥಿಗಳು ಹೊರ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಜಿಲ್ಲೆಯಲ್ಲಿ ತೆರೆಯಲಾಗಿರುವ 58 ಪರೀಕ್ಷಾ ಕೇಂದ್ರಗಳಲ್ಲೂ ಸೋಂಕು ನಿವಾರಕ ಬಳಸಿ ಕೊಠಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮಾಸ್ಕ್ಗಳನ್ನು ವಿತರಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಿದ್ಧತೆ ಹಾಗೂ ಪರೀಕ್ಷಾ  ಕೇಂದ್ರದ ಪ್ರತಿ ಕೊಠಡಿಯಲ್ಲೂ ಸ್ಯಾನಿಟೈಸರ್‌ ಇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಒಂದು ಮೀಟರ್‌ ಅಂತರದಲ್ಲಿ ಡೆಸ್ಕ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತ್ಯೇಕ ಕೊಠಡಿಗಳಲ್ಲಿ ಆರು ಅಡಿ ಸಂತರ ಕಾಪಾಡಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೊಠಡಿ, ಶೌಚಾಲಯಗಳನ್ನು ಬೇರೆ ಇಲಾಖೆಗಳ ಸಹಕಾರ ಪಡೆದುಕೊಂಡು ಸ್ಯಾನಿಟೈಸರ್‌ ಮಾಡಿಸಲಾಗಿದೆ.

ಪ್ರತಿ ಪರೀಕ್ಷೆ ಮುಗಿದ ನಂತರ ಕೊಠಡಿ ಶುಚಿಗೊಳಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ ವಿದ್ಯಾರ್ಥಿಗೆ 2 ಕಾಟನ್‌ ಮಾಸ್ಕ್ ಗಳ  ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ 50 ಎನ್‌-95 ಮಾಸ್ಕ್ ಗಳನ್ನು  ಕಾಯ್ದಿರಿಸಿಕೊಳ್ಳುವ ವ್ಯವಸ್ಥೆಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಪ್ರತಿ ತಾಲೂಕಿಗೊಂದರಂತೆ ತುರ್ತು ಚಿಕಿತ್ಸ ವಾಹನವನ್ನು ಕಾಯ್ದಿರಿಸಲಾಗಿದೆ. ಪರೀಕ್ಷಾ  ಕೇಂದ್ರಗಳಲ್ಲಿ ಪೋಷಕರ ದಟ್ಟಣೆ ನಿಯಂತ್ರಿಸಲು ಧ್ವನಿವರ್ಧಕ ಮೂಲಕ ಪರೀಕ್ಷೆಗೂ ಮೊದಲು ಮಾಹಿತಿ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕೆರೆತರಲು 60 ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಎಸ್‌ಆರ್‌ಟಿಸಿ ರೂಟ್‌ ಬಸ್‌ಗಳಲ್ಲಿ ವಿದ್ಯಾರ್ಥಿ ಪ್ರಯಾಣ ಮಾಡಿದರೆ ವಿದ್ಯಾರ್ಥಿ ಬಳಿಯಿರುವ ಪ್ರವೇಶ ಪತ್ರವನ್ನು ತೊರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣ ಬೆಳೆಸಬಹುದಾಗಿದೆ. 86 ಖಾಸಗಿ ಬಸ್‌ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಜಿಲ್ಲೆಯ 130 ಮಾರ್ಗಗಳಲ್ಲಿ 432 ಪಿಕ್‌ಅಪ್‌ ಕೇಂದ್ರಗಳನ್ನು ಗುರುತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಒಟ್ಟಾರೆ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಮರ್ಥವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೋವಿಡ್ ಸೋಂಕಿನ ಸಂಕಷ್ಟ ಕಾಲದಲ್ಲಿ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳು ಯಾವುದೇ ಆತಂಕ ಪಡದೇ ಮನೆಯಿಂದ ಹೊರಡುವಾಗ ಇಲಾಖೆಯಿಂದ ನೀಡಿರುವ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಧೈರ್ಯವಾಗಿ ಪರೀಕ್ಷೆ ಬರೆಯಲು ಮುಂದಾಗಬೇಕು. ಜಿಲ್ಲಾಡಳಿತ ಜೂ.25 ರಿಂದ ಜು.04 ರ ವರೆಗೆ ನಡೆಯಲಿರುವ ಪರೀಕ್ಷೆಯ ಪರೀಕ್ಷಾ ಕೆಂದ್ರಗಳಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.
ಡಾ| ಬಗಾದಿ ಗೌತಮ್‌,
ಜಿಲ್ಲಾಧಿಕಾರಿ

ಸರ್ಕಾರದ ನಿರ್ದೇಶನದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಜಿಲ್ಲಾದ್ಯಂತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಬೇಕಾಗುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ.
ಸಿ.ನಂಜಯ್ಯ,
ಡಿಡಿಪಿಐ(ಆಡಳಿತ)

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.