ಮಾತೃಭಾಷೆ ಜತನದಿಂದ ಕಾಪಾಡಿಕೊಳ್ಳಿ

ಜಿಲ್ಲಾ ಪಂಚಾಯತ್‌ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ ಸಲಹೆ

Team Udayavani, Mar 7, 2020, 6:03 PM IST

7-March-28

ಚಿಕ್ಕಮಗಳೂರು: ಕನ್ನಡಿಗರು ಮಾತೃ ಭಾಷೆಯನ್ನು ಜತನದಿಂದ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್‌ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ ತಿಳಿಸಿದರು.

ನಗರದ ಜಯನಗರ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಏರ್ಪಡಿಸಿದ್ದ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ ಮತ್ತು ಲೀಲಮ್ಮ ಲೋಕಪ್ಪಗೌಡ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾವಿರಾರು ವರ್ಷಗಳ ಇತಿಹಾಸವಿರುವ ಅತ್ಯಂತ ಶ್ರೀಮಂತ ಭಾಷೆ. ಅನೇಕ ಕಲಾವಿದರು, ಸಾಹಿತಿಗಳು, ಕವಿಗಳು ಉಳಿಸಿ ಬೆಳೆಸಿದ್ದಾರೆ. ಕನ್ನಡವೇ ನಮ್ಮ ಉಸಿರು, ಅದು ನಾಶವಾದರೆ ನಮ್ಮ ಸಂಸ್ಕೃತಿ ನಾಶವಾಗುತ್ತದೆ. ಆಗ ನಾವು ನಮ್ಮತನ ಕಳೆದುಕೊಂಡು ಜಗತ್ತಿನೆದುರು ಒಂಟಿಯಾಗಿ ನಿಲ್ಲಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕನ್ನಡಿಗರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಪರಿಸ್ಥಿತಿ ಕೈ ಮೀರುವ ಮುನ್ನ ನಾಡಿನ ನೆಲ, ಜಲ ಮತ್ತು ಭಾಷೆಯ ರಕ್ಷಣೆಗೆ ಮುಂದಾಗಬೇಕು ಎಂದರು. ಧರ್ಮ ಮತ್ತು ಸಂಸ್ಕೃತಿ ಬೆಳವಣಿಗೆಯಲ್ಲಿ ಸಾಹಿತ್ಯದ ಪಾತ್ರ ವಿಷಯ ಕುರಿತು ಉಪನ್ಯಾಸ ನೀಡಿದ ಸಾಹಿತಿ ಬಿ.ತಿಪ್ಪೇರುದ್ರಪ್ಪ, ಸಂಸ್ಕೃತಿ ಎಂದರೆ ಭಾಷೆ. ಅದು ಉಳಿದರೆ ಸಾಹಿತ್ಯ ಸಂಸ್ಕೃತಿ ಉಳಿಯುತ್ತದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕುಂದೂರು ಅಶೋಕ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರವನ್ನು ಅಳವಡಿಸಿಕೊಂಡರೆ ಉತ್ತಮ ಮನ್ಯುಷರಾಗಬಹುದು ಎಂದು ಹೇಳಿದರು. ಐಡಿಎಸ್‌ಜಿ ಕಾಲೇಜಿನ ಪ್ರಾಧ್ಯಾಪಕ ಡಾ| ಎಚ್‌.ಎಂ.ಮಹೇಶ್‌ ಸಂಸ್ಕಾರ ರೂಪಿಸುವಲ್ಲಿ ಸಾಹಿತ್ಯದ ಪಾತ್ರ ವಿಷಯ ಕುರಿತು ಉಪನ್ಯಾಸ ನೀಡಿದರು.

ಉದ್ಯಮಿ ವೈ.ಕೆ.ರಾಜಾನಾಯ್ಕ, ನ್ಯಾಯವಾದಿ ವಿಶ್ವನಾಥ್‌, ವಿದ್ಯಾರ್ಥಿ ನಿಲಯದ ಪಾಲಕ ಪ್ರಶಾಂತ್‌ ಉಪಸ್ಥಿತರಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ಡಿ.ಎಂ.ಮಂಜುನಾಥಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಚಂದ್ರಯ್ಯ ಸ್ವಾಗತಿಸಿದರು. ವಿದ್ಯಾರ್ಥಿ ನಿಲಯದ ಹಿರಿಯ ಪಾಲಕ ಕುಮಾರಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.