ಜಿಲ್ಲೆಯ ಮೂವರಿಗೆ ಕೋವಿಡ್ ಸೋಂಕು
Team Udayavani, Jun 29, 2020, 12:29 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾನುವಾರ ಮೂರು ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇತ್ತೀಚೆಗೆ ಬೆಂಗಳೂರಿಗೆ ಹೋಗಿ ಹಿಂದಿರುಗಿದ್ದ ಸ್ಥಳೀಯರಲ್ಲಿ ಸೋಂಕಿರುವುದು ಪ್ರಯೋಗಾಲಯದ ವರದಿಯಿಂದ ತಿಳಿದು ಬಂದಿದೆ.
ಭಾನುವಾರ ದೃಢಪಟ್ಟಿರುವ ಮೂರು ಪ್ರಕರಣಗಳು ಚಿಕ್ಕಮಗಳೂರು ತಾಲೂಕಿಗೆ ಸೇರಿದ್ದು, ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆ, ರಾಮನಹಳ್ಳಿ ಬಡಾವಣೆ ಹಾಗೂ ನಗರ ಸಮೀಪದ ಮೂಕ್ತಿಹಳ್ಳಿ ಸೇರಿದ ತಲಾ ಓರ್ವರಲ್ಲಿ ಸೋಂಕಿರುವುದು ಪತ್ತೆಯಾಗಿದೆ. ಈ ಮೂವರು ಇತ್ತೀಚೆಗೆ ಬೆಂಗಳೂರಿಗೆ ಕೆಲಸದ ನಿಮಿತ್ತ ಹೋಗಿ ಹಿಂದಿರುಗಿದ್ದರೆಂದು ತಿಳಿದು ಬಂದಿದ್ದು, ಸೋಂಕಿತರನ್ನು ನಗರದಲ್ಲಿ ತೆರೆಯಲಾಗಿರುವ ಕೋವಿಡ್-19 ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಂಕಿತ ಮೂವರ ಪೈಕಿ ಓರ್ವ ವ್ಯಕ್ತಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನಾಗಿದ್ದು, ಮತ್ತೋರ್ವ ತರಕಾರಿ ವ್ಯಾಪಾರಿ ಎಂದು ತಿಳಿದು ಬಂದಿದೆ. ಭಾನುವಾರ ಪತ್ತೆಯಾದ ಮೂರು ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.