ಮೂರು ಮಂದಿಗೆ ಕೋವಿಡ್ ದೃಢ
ಖಾಸಗಿ ಆಸ್ಪತ್ರೆ ವೈದ್ಯನಿಗೂ ಸೋಂಕು
Team Udayavani, Jul 5, 2020, 12:01 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಕಾμನಾಡಿನಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ಸೇರಿದಂತೆ ಶನಿವಾರ ಮೂರು ಜನರಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ವೈದ್ಯರಿಗೆ ಸೋಂಕಿರುವುದು ಪ್ರಯೋಗಾಲಯದ ವರದಿಯಿಂದ ದೃಢವಾಗಿದ್ದು, ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ವೈದ್ಯರಿಗೂ ಸೋಂಕು ತಗುಲಿದಂತಾಗಿದೆ.
ಶನಿವಾರ ಜಿಲ್ಲೆಯಲ್ಲಿ ಪತ್ತೆಯಾಗಿರುವ ಮೂರು ಕೊರೊನಾ ಸೋಂಕು ಪ್ರಕರಣಗಳ ಪೈಕಿ ಚಿಕ್ಕಮಗಳೂರು ತಾಲೂಕಿನಲ್ಲಿ ಎರಡು ಪ್ರಕರಣಗಳು ಕಂಡು ಬಂದಿದ್ದು, ಮತ್ತೂಂದು ಪ್ರಕರಣ ಕಡೂರು ತಾಲೂಕಿನಲ್ಲಿ ಕಂಡು ಬಂದಿದೆ. ಚಿಕ್ಕಮಗಳೂರು ಖಾಸಗಿ ಆಸ್ಪತ್ರೆ ಯಲ್ಲಿ μಜಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಇತ್ತೀಚೆಗೆ ಬೆಂಗಳೂರಿಗೆ ತೆರಳಿ ನಗರಕ್ಕೆ ವಾಪಸಾಗಿದ್ದರು ಎಂದು ತಿಳಿದು ಬಂದಿದೆ. ವೈದ್ಯ ರಲ್ಲಿ ಸೋಂಕಿರುವುದು ದೃಢಪಟ್ಟ ಹಿನ್ನೆಲೆ ಯಲ್ಲಿ ಆಸ್ಪತ್ರೆಯನ್ನು ಶನಿವಾರ ಸೀಲ್‌ಡೌನ್ ಮಾಡಿ, ಆಸ್ಪತ್ರೆಯ ಸಿಬ್ಬಂದಿ, ಇತರೆ ವೈದ್ಯರನ್ನು ಕ್ವಾರಂಟೈನ್ ಮಾಡಲಾಗಿದೆ. ಬೆಂಗಳೂರಿನಿಂದ ವಾಪಸಾದ ನಂತರ ವೈದ್ಯರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಶನಿವಾರ ವರದಿ ಜಿಲ್ಲಾಡಳಿತದ ಕೈ ಸೇರಿದ್ದು, ವೈದ್ಯರಲ್ಲಿ ಸೋಂಕಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ನಗರದ ಕೋವಿಡ್ ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದೆ.
ಶನಿವಾರ ಪತ್ತೆಯಾದ ಮತ್ತೆರೆಡು ಪಾಸಿಟಿವ್ ಪ್ರಕರಣಗಳ ಪೈಕಿ ಚಿಕ್ಕಮಗಳೂರು ತಾಲೂಕು ಮಲ್ಲೆದೇವರ ಹಳ್ಳಿ ವ್ಯಕ್ತಿಯಲ್ಲಿ ಕಂಡುಬಂದಿದ್ದು, ಈ ವ್ಯಕ್ತಿಯೂ ಇತ್ತೀಚೆಗೆ ಬೆಂಗಳೂರಿಗೆ ಹೋಗಿ ಬಂದಿದ್ದರೆಂದು ತಿಳಿದು ಬಂದಿದೆ. ಕಡೂರು ತಾಲೂಕಿನ ಚೌಳಿಹಿರಿಯೂರು ಗ್ರಾಮದ ಕಂಡಕ್ಟರ್ ಒಬ್ಬರಲ್ಲಿ ಸೋಂಕು ಕಂಡು ಬಂದಿದೆ. ಮೂವರು ಸೋಂಕಿತರನ್ನು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಪತ್ತೆಯಾದ ಮೂರು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 83ಕ್ಕೆ ಏರಿಕೆಯಾಗಿದ್ದು, 37 ಪ್ರಕರಣಗಳು ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಗುಣಮುಖರಾದ 7ಮಂದಿಯನ್ನು ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.