ಕಾಫಿ ನಾಡಲ್ಲಿ ಮತ್ತೆ 23 ಮಂದಿಗೆ ಕೋವಿಡ್
ಚಿಕ್ಕಮಗಳೂರು 12- ಕೊಪ್ಪ, ಕಡೂರು 8- ಎನ್.ಆರ್. ಪುರ, ಅಜ್ಜಂಪುರದಲ್ಲಿ ಒಬ್ಬರಿಗೆ ಸೋಂಕು
Team Udayavani, Jul 9, 2020, 12:57 PM IST
ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕೋವಿಡ್ ಕರಾಳ ಕಣ್ಣು ತೆರೆದಿದ್ದು ಬರೋಬ್ಬರಿ 23 ಮಂದಿಯಲ್ಲಿ ಸೋಂಕಿರುವುದು ಬುಧವಾರ ದೃಢಪಟ್ಟಿದೆ. ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಜಿಲ್ಲೆಯ ಜನತೆಯಲ್ಲಿ ಆತಂಕ ಮೂಡಿಸಿದೆ.
ಬುಧವಾರ ದೃಢಪಟ್ಟ ಸೋಂಕಿತರಲ್ಲಿ ಚಿಕ್ಕಮಗಳೂರು ತಾಲೂಕಿಗೆ ಸೇರಿದ 12 ಜನರು, ಕೊಪ್ಪ ತಾಲೂಕಿನಲ್ಲಿ ಒಬ್ಬರು, ನರಸಿಂಹರಾಜಪುರ ತಾಲೂಕಿನಲ್ಲಿ ಒಬ್ಬರು, ಅಜ್ಜಂಪುರ ತಾಲೂಕಿನಲ್ಲಿ ಒಬ್ಬರು ಹಾಗೂ ಕಡೂರು ತಾಲೂಕಿನಲ್ಲಿ 8 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಚಿಕ್ಕಮಗಳೂರು ನಗರದ ಕೋಟೆ, ಹೊಸಮನೆ, ಉಪ್ಪಳ್ಳಿ, ಕಲ್ಯಾಣ ನಗರ ಬಡಾವಣೆಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ದೋಣಿಕಣದಲ್ಲಿ 7 ಪ್ರಕರಣ ಪತ್ತೆಯಾಗಿದ್ದು ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಒಂದು ಪ್ರಕರಣ ಸೇರಿದಂತೆ ಚಿಕ್ಕಮಗಳೂರು ತಾಲೂಕಿನಲ್ಲಿ 12 ಪ್ರಕರಣಗಳು ಕಂಡು ಬಂದಿವೆ.
ಕಡೂರು ಪಟ್ಟಣದ ಫ್ಯಾನ್ಸಿ ಸ್ಟೋರ್ ಮಾಲೀಕರೊಬ್ಬರಿಗೆ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆತನ ಪತ್ನಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಮಗ ಹಾಗೂ ಬೆಂಗಳೂರಿನಿಂದ ಪಟ್ಟಣಕ್ಕೆ ಬಂದಿದ್ದ ಓರ್ವರಲ್ಲಿ ಸೋಂಕು ಪತ್ತೆಯಾಗಿದೆ. ಚಿಕ್ಕಮಗಳೂರು ಪ್ರಕರಣವೊಂದರಲ್ಲಿ ಪ್ರಾಥಮಿಕ ಸಂಪರ್ಕ ಹೊಂದಿದ್ದ ಸಂಬಂಧಿಕರಾದ ಕಡೂರು ತಾಲೂಕಿನ ಚಿಕ್ಕದೇವನೂರು ಗ್ರಾಮದ ತಾಯಿ- ಮಗನಿಗೆ ಸೋಂಕು ದೃಢಪಟ್ಟಿದೆ ಹಾಗೂ ಪಂಚನಹಳ್ಳಿಯ ನಾರಾಯಣಗೌಡ ಕೊಪ್ಪಲು ಗ್ರಾಮದ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ 8 ಪ್ರಕರಣಗಳು ಪತ್ತೆಯಾಗಿವೆ.
ನರಸಿಂಹರಾಜಪುರ ತಾಲೂಕಿನ ಮೆಣಸೂರಿನಲ್ಲಿ ಒರ್ವ ವ್ಯಕ್ತಿ, ಕೊಪ್ಪ ತಾಲೂಕಿನ ಹುಲ್ಮಗಿ ಗ್ರಾಮದಲ್ಲಿ ಓರ್ವ ವ್ಯಕ್ತಿ ಹಾಗೂ ಅಜ್ಜಂಪುರ ಪಟ್ಟಣ ಅಂಬೇಡ್ಕರ್ ಬಡಾವಣೆಯಲ್ಲಿ ಒರ್ವ ವ್ಯಕ್ತಿಗೆ ಸೋಂಕಿರುವುದು ದೃಢಪಟ್ಟಿದೆ. ಸೋಂಕಿತರನ್ನು ಜಿಲ್ಲೆಯ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರು ವಾಸವಿದ್ದ ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದ್ದು, ಈ ಪ್ರದೇಶಗಳಲ್ಲಿ ಕಂಟೈನ್‌ಮೆಂಟ್ ಝೋನ್‌ಗಳಾಗಿ ಗುರುತಿಸಲಾಗಿದೆ. ಬುಧವಾರ ಪತ್ತೆಯಾದ 23 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 123ಕ್ಕೇರಿದೆ. 54 ಪ್ರಕರಣಗಳು ಸಕ್ರಿಯವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಹೊಸ ಸೇರ್ಪಡೆ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.