ಜಿಲ್ಲಾ ಉತ್ಸವಕ್ಕಾಗಿ ವಿವಿಧ ಕ್ರೀಡಾಕೂಟ

ಫೆ.28ರಿಂದ ಮಾ.1ರ ವರೆಗೆ ಜಿಲ್ಲಾ ಹಬ್ಬಫೆ.23 ರಿಂದ ಫೆ.25ರವರೆಗೆ ಕ್ರೀಡಾಕೂಟ: ಡಿಡಿಪಿಐ ನಂಜಯ

Team Udayavani, Feb 14, 2020, 1:23 PM IST

14-February-11

ಚಿಕ್ಕಮಗಳೂರು: ಫೆ.28ರಿಂದ ಮಾ.1ರ ವರೆಗೆ ನಡೆಯಲಿರುವ ಜಿಲ್ಲಾ ಉತ್ಸವಕ್ಕೆ (ಹಬ್ಬ) ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ಫೆ.23 ರಿಂದ ಫೆ.25ರ ವರೆಗೆ ಕ್ರೀಡಾಕೂಟ ನಡೆಯಲಿವೆ ಎಂದು ಕ್ರೀಡಾ ಸಮಿತಿ ಅಧ್ಯಕ್ಷ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ನಂಜಯ್ಯ ತಿಳಿಸಿದರು.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ಹಾಗೂ ಬಯಲುಸೀಮೆ ಒಳಗೊಂಡ ಜಿಲ್ಲೆ ವಿಶಿಷ್ಟ ಜಾನಪದ ಕಲೆ ಹಾಗೂ ಕ್ರೀಡಾ ವಿಶೇಷಗಳನ್ನು ಒಳಗೊಂಡಿದೆ. ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಫೆ.23ರ ಬೆಳಗ್ಗೆ 6.30ಕ್ಕೆ ಆಯೋಜಿಸಲಾಗಿರುವ ಫಿಟ್‌ ಚಿಕ್ಕಮಗಳೂರು ಕಾರ್ಯಕ್ರಮ ಜಿಲ್ಲಾ ಆಟದ ಮೈದಾನದಿಂದ ಆರಂಭಗೊಂಡು ಐ.ಜಿ.ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮತ್ತೆ ಜಿಲ್ಲಾ ಆಟದ ಮೈದಾನ ತಲುಪಲಿದೆ. ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ನೌಕರರು ಭಾಗವಹಿಸಬಹುದಾಗಿದೆ ಎಂದರು.

ಅದೇ ದಿನ ಬೆಳಗ್ಗೆ 9 ಗಂಟೆಯಿಂದ ನಗರದ ಐಡಿಎಸ್‌ಜಿ ಕಾಲೇಜು ಮೈದಾನದಲ್ಲಿ ಗಾಳಿಪಟ ಸ್ಪರ್ಧೆ ನಡೆಯಲಿದ್ದು, ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದು. ನಲ್ಲೂರು ಗ್ರಾಮದ ಗದ್ದೆಗಳಲ್ಲಿ ಕೆಸರುಗದ್ದೆ ಓಟ, ಹಗ್ಗಜಗ್ಗಾಟ, ನಿಧಿ  ಹುಡುಕಾಟ, ಭಾರ ಹೊತ್ತು ಓಡುವ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.

ಎಐಟಿ ಸಭಾಂಗಣದಲ್ಲಿ ರಾಜ್ಯಮಟ್ಟದ ಚದುರಂಗ ಸ್ಪರ್ಧೆ ಬೆಳಿಗ್ಗೆ 10ಗಂಟೆಯಿಂದ ನಡೆಯಲಿದ್ದು, ಮಹಿಳೆಯರು ಮತ್ತು ಪುರುಷರು ಭಾಗವಹಿಸಬಹುದು. ಟಿಎಂಎಸ್‌ ಕಾಲೇಜು ಆವರಣದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ರಾಜ್ಯಮಟ್ಟದ ಯೋಗ ಸ್ಪರ್ಧೆ ನಡೆಯಲಿದೆ. ಎಐಟಿ ಬಯಲು ರಂಗಮಂದಿರದಲ್ಲಿ ಸಬ್‌ ಜೂನಿಯರ್‌ ಮತ್ತು ಸೀನಿಯರ್‌ ಮಹಿಳೆಯರು ಮತ್ತು ಪುರುಷರಿಗೆ ಜಿಲ್ಲಾ ಟೆಕ್ವಾಂಡೋ ಸ್ಪರ್ಧೆ ನಡೆಯಲಿದೆ.

17 ವರ್ಷ ಕೆಳಗಿನವರಿಗೆ, 18 ರಿಂದ 60 ಹಾಗೂ 61 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮಹಿಳಾ ಗ್ರಾಮೀಣ ಕ್ರೀಡೋತ್ಸವ ನಗರದ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದರು. ಫೆ.24 ರಂದು ಬೆಳಿಗ್ಗೆ 10 ಗಂಟೆಗೆ ಶತಮಾನೋತ್ಸವ ಕ್ರೀಡಾಂಗಣಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಜಿಲ್ಲಾ ಕಬಡ್ಡಿ ಪಂದ್ಯಾವಳಿ, ಪುರುಷರಿಗೆ ಜಿಲ್ಲಾ ಷಟಲ್‌ ಬ್ಯಾಡ್ಮಿಂಟನ್‌, ವಾಲಿಬಾಲ್‌ ಪಂದ್ಯಾವಳಿ ನಡೆಯಲಿದೆ. ಫೆ.25 ರಂದು ಬೆಳಿಗ್ಗೆ 10 ಗಂಟೆಗೆ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ, ಪುರುಷರಿಗೆ ವಾಲಿಬಾಲ್‌ ಪಂದ್ಯಾವಳಿ, ಮಹಿಳೆಯರಿಗೆ ಜಿಲ್ಲಾಷಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆ  ನಡೆಯಲಿದೆ ಎಂದು ತಿಳಿಸಿದರು.

ನಗರದ ಎಸ್‌ಟಿಜೆ ಮಹಿಳಾ ಕಾಲೇಜು ಆವರಂದಲ್ಲಿ ಮಹಿಳೆ ಮತ್ತು ಪುರುಷರಿಗೆ ಜಿಲ್ಲಾ ಜಂಗಿಕುಸ್ತಿ ಸ್ಪರ್ಧೆ ಆಯೋಜಿಸಲಾಗಿದೆ. ಅದೇ ದಿನ ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಕೊಪ್ಪ, ಎನ್‌. ಆರ್‌.ಪುರ, ಶೃಂಗೇರಿ, ಅಜ್ಜಂಪುರ, ತರೀಕೆರೆ, ಮೂಡಿಗೆರೆ, ಕಡೂರು ತಾಲೂಕಿನಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.

ಜಿಲ್ಲಾ ಹಂತದ ಸ್ಪರ್ಧೆಗಳಿಗೆ ಜಿಲ್ಲೆಯವರೇ ಭಾಗವಹಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವವರು ಫೆ.22 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಸ್ಪರ್ಧೆಗೆ ಬೇಕಾಗುವ ಪರಿಕರಗಳನ್ನು ಸ್ಪ ರ್ಧಿಗಳೇ ತರಬೇಕು ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ಉಪನಿರ್ದೇಶಕಿ, ಕ್ರೀಡಾ ಸಮಿತಿ ಸದಸ್ಯ ಕಾರ್ಯದರ್ಶಿ ಮಂಜುಳಾ ಹುಲ್ಲಳ್ಳಿ ಮಾತನಾಡಿ, ಫೆ.25ರಿಂದ ಮಾ.1ರ ವರೆಗೆ ಜಲ, ಭೂ, ಹಾಗೂ ವಾಯು ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಜಲ ಸಾಹಸಕ್ಕೆ ಜಿಲ್ಲೆಯ ಅಯ್ಯನಕೆರೆ, ಹಿರೇಕೊಳಲೆ ಕೆರೆ ಮತ್ತು ನಲ್ಲೂರು ಕೆರೆ ಗುರುತಿಸಲಾಗಿದೆ.

ವಾಯು ಸಾಹಸ ಕ್ರೀಡೆ ಚಿಕ್ಕಮಗಳೂರು ಅಡ್ವೇಚರ್‌ ಕ್ಲಬ್‌ ನಡೆಸಿಕೊಡುತ್ತಿದ್ದು, ಪ್ಯಾರಾ ಗ್ಲೇಡಿಂಗ್‌ ನಗರದ ಎಐಟಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. 6 ರಿಂದ 8 ನಿಮಿಷದ ಒಂದು ಸುತ್ತಿಗೆ 3,100 ಶುಲ್ಕ ನಿಗದಿಪಡಿಸಲಾಗಿದ್ದು, ಐನೂರದಿಂದ ಸಾವಿರ ಮೀಟರ್‌ ಎತ್ತರದಲ್ಲಿ ಹಾರಾಡಲಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕ್ರೀಡಾ ಉಪ ಸಮಿತಿ ಸದಸ್ಯ ರವಿಕುಮಾರ್‌, ವಾಲಿಬಾಲ್‌ ತರಬೇತಿಗಾರ್ತಿ ವಿನುತಾ, ಕ್ರಿಕೆಟ್‌ ತರಬೇತಿಗಾರ ಶಂಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.