ಸಂತರು-ಶರಣರ ಆದರ್ಶ ಪಾಲಿಸಿ

ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಎಚ್‌.ಎಂ.ನಾಗರಾಜ್‌ ಅಭಿಮತ

Team Udayavani, Feb 21, 2020, 6:18 PM IST

21-February-29

ಚಿಕ್ಕಮಗಳೂರು: ಸಂತರು, ಶರಣರು ತಮ್ಮ ಬದುಕಿನ ಅವಧಿಯಲ್ಲಿ ಮುಂದಿನ ಪೀಳಿಗೆಯವರಿಗೆ ಬದುಕಲು ಸಹಾಯವಾಗುವಂತ ಸಾಹಿತ್ಯ, ತತ್ವಾದರ್ಶಗಳನ್ನು ನೀಡಿದ್ದಾರೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಎಚ್‌. ಎಂ.ನಾಗರಾಜ್‌ ಹೇಳಿದರು.

ಗುರುವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಸಂತ ಕವಿ ಸರ್ವಜ್ಞ, ಛತ್ರಪತಿ ಶಿವಾಜಿ ಹಾಗೂ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರ ಅನುಸರಣೆಯಲ್ಲಿ ಸಾಗಿದ ಶರಣರ ತತ್ವ-ಆದರ್ಶಗಳು ಪ್ರತಿಯೊಬ್ಬರಿಗೂ ಮಾದರಿ. ಅವರ ಆದರ್ಶಗಳನ್ನು ಪಾಲನೆ ಮಾಡುವುದರಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ. ನಿರ್ಭಾವುಕ ಕಠಿಣ ವಚನಗಳಿಂದ ಸಮಾಜಕ್ಕೆ ಬೆಳಕಾದವರು ಸರ್ವಜ್ಞ ಕವಿ, ಹೋರಾಟದಿಂದ ಸ್ಫೂರ್ತಿಯಾದವರು ಶಿವಾಜಿ ಮಹಾರಾಜರು ಎಂದು ಹೇಳಿದರು.

ಸಂತರ, ಶರಣರು ಹಾಗೂ ದಾರ್ಶನಿಕರ ಜಯಂತಿಗಳು ಜನರ ಮನಸ್ಸಿನಲ್ಲಿರುವ ಋಣಾತ್ಮಕ ಭಾವನೆಯನ್ನು ಹೋಗಲಾಡಿಸಿ ಉತ್ತಮ ಪ್ರಜ್ಞಾವಂತರನ್ನಾಗಿಸುತ್ತವೆ ಎಂದರು. ಕಾಯಕ ಶರಣರ ಕುರಿತು ಉಪನ್ಯಾಸ ನೀಡಿದ ಸಾಹಿತಿ ತಿಪ್ಪೇರುದ್ರಪ್ಪ, 12ನೇ ಶತಮಾನ ವಿಶ್ವಗುರು ಬಸವಣ್ಣನ ಮುಖಂಡತ್ವದಲ್ಲಿ ವಿಚಾರ ಕ್ರಾಂತಿ, ಧಾರ್ಮಿಕ ಕ್ರಾಂತಿ, ಸಾಮಾಜಿಕ ಕ್ರಾಂತಿ ಮತ್ತು ಭಾಷಾ ಕ್ರಾಂತಿಗೆ ನಾಂದಿ ಹಾಡಿತು. ಅಂದಿನ ಶತಮಾನದಲ್ಲಿ ರಾಜಸತ್ತೆಯನ್ನು ಪ್ರಜಾಸತ್ತೆಯೆಡೆಗೆ ಹೊರಳಿಸಿ ಅನುಭವ ಮಂಟಪ ಸ್ಥಾಪನೆ ಮಾಡಿ ಎಲ್ಲಾ ವರ್ಗದ ಜನರು ಪಾಲ್ಗೊಳ್ಳುವಂತೆ ಮಾಡಿ ವಾಕ್‌ ಸ್ವಾತಂತ್ರ್ಯಕ್ಕೆ ಒತ್ತು ನೀಡಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ತಂದರು ಎಂದರು.

ಕೆಳಸ್ತರದ ವಚನಕಾರರಾದ ಮಾದಾರ ಚೆನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಊರಿಲಿಂಗಪೆದ್ದಿ ಯಂತಹವರನ್ನು ಮುನ್ನೆಲೆಗೆ ತಂದು ಅವರಿಗೆ ಅನುಭವ ಮಂಟಪದಲ್ಲಿ ಅಗ್ರಸ್ಥಾನ ಕಲ್ಪಿಸಿದವರು ಎಂದರು.

ಶ್ರಮ ಸಂಸ್ಕೃತಿ ಎಂದರೆ ದುಡಿದು ತಿನ್ನಬೇಕು. ಶ್ರಮವಿಲ್ಲದ ಸಂಪಾದನೆ ಪಾತಕವಿದ್ದಂತೆ. ದಾಸೋಹ ಕಾಯಕ ಮಹತ್ವವಾದುದು. ಅತಿಯಾದ ಸಂಗ್ರಹಣೆ ಒಳ್ಳೆಯದಲ್ಲ. ಜಾತಿ ಪದ್ಧತಿ ಅಳಿಸಿ ನೀತಿವಂತರಾಗಬೇಕೆಂದು ತಿಳಿಸಿದರು. ಸಾಹಿತಿ ಬೆಳವಾಡಿ ಮಂಜುನಾಥ್‌ ಸರ್ವಜ್ಞರ ಕುರಿತು ಉಪನ್ಯಾಸ ನೀಡಿ, ಭಾರತದಲ್ಲಿ ಇಂದಿಗೂ ಜಾತಿವ್ಯವಸ್ಥೆ, ಮೇಲು-ಕೀಳು ಎಂಬ ಭಾವನೆ ಅಸ್ಥಿತ್ವದಲ್ಲಿರುವುದು ದುರಂತ ಸಂಗತಿ. ಪ್ರಕೃತಿ ಮಾತೆಯಲ್ಲಿ ಇಲ್ಲದ ಜಾತಿ ವ್ಯವಸ್ಥೆ, ಅಸಮಾನತೆ, ಭಾವನೆ ಇಂದಿನ ಜನತೆಯಲ್ಲಿದೆ. 12ನೇ ಶತಮಾನದಲ್ಲಿ ಅನೇಕ ಶಿವಶರಣರು ಜಾತಿ ವ್ಯವಸ್ಥೆ ವಿರುದ್ಧ ಜಾಗೃತಿ ಮೂಡಿಸಿ ಸಮಾಜ ಸುಧಾರಣೆಗೆ ಮುಂದಾಗಿದ್ದರು ಎಂದು ಹೇಳಿದರು.

ಸರ್ವಜ್ಞರು ಸಮಾಜದಲ್ಲಿ ಕಂಡಂತಹ ಅಂಕು ಡೊಂಕುಗಳು, ಆಗು ಹೋಗುಗಳನ್ನು ತ್ರಿಪದಿ ಸಾಹಿತ್ಯದ ಮೂಲಕ ತಿದ್ದುವ ಕೆಲಸ ಮಾಡಿದರು. ತಿರುವಳ್ಳುವರ್‌, ವೇಮನರ ಸಾಲಿನಲ್ಲಿ ಸರ್ವಜ್ಞ ಕವಿ ಶ್ರೇಷ್ಠರು ನಾಡಿನಾದ್ಯಂತ ಸಂಚರಿಸಿ ಸಮಾಜದ ಗರಿಷ್ಠ-ಕನಿಷ್ಠ, ಜಾತಿ ವ್ಯವಸ್ಥೆ, ಮೂಢನಂಬಿಕೆ, ಕಂದಾಚಾರಗಳ ವಿರುದ್ಧ ಸುಧಾರಣೆಗೆ ಮುಂದಾದವರು. ಅವರು ಪ್ರತಿಯೊಬ್ಬರ ಬದುಕಿಗೂ ಸೂರ್ತಿಯಾಗಿದ್ದಾರೆ ಎಂದರು.

ಕಳಸಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಾ| ಸತ್ಯ ನಾರಾಯಣ್‌ ಛತ್ರಪತಿ ಶಿವಾಜಿ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಡಾ| ಸಿ. ರಮೇಶ್‌, ದಲಿತ ಮುಖಂಡ ಕೆ.ಟಿ. ರಾಧಾಕೃಷ್ಣ, ಮರಾಠ ಸಮಾಜದ ಜಿಲ್ಲಾಧ್ಯಕ್ಷ ಗಣೇಶ್‌ ರಾವ್‌, ಕುಂಬಾರ ಸಮಾಜದ ಮುಖಂಡ ಏಕಾಂತ್‌ ರಾಮ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.