ಲಾಕ್‌ಡೌನ್ ವಿನಾಯ್ತಿ: ರಸ್ತೆಗಿಳಿದ ಜನ
ವ್ಯಾಪಾರ- ವಹಿವಾಟಿಗೆ ಗ್ರಾಹಕರ ಕೊರತೆಬೇರೆ ಜಿಲ್ಲೆಗಳ ಕಾರ್ಮಿಕರನ್ನು ಊರಿಗೆ ಕಳುಹಿಸಲು ಸಿದ್ಧತೆ
Team Udayavani, Apr 26, 2020, 1:09 PM IST
ಚಿಕ್ಕಮಗಳೂರು: ನಗರದ ಹನುಮಂತಪ್ಪ ವೃತ್ತದಲ್ಲಿ ವಾಹನ ಸಂಚಾರದ ದೃಶ್ಯ.
ಚಿಕ್ಕಮಗಳೂರು: ನಗರದ ಹನುಮಂತಪ್ಪ ವೃತ್ತದಲ್ಲಿ ವಾಹನ ಸಂಚಾರದ ದೃಶ್ಯ. ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ವಿಧಿಸಿದ್ದ ಎರಡನೇ ಹಂತದ ಲಾಕ್‌ಡೌನ್‌ಗೆ ಕೆಲ ವಿನಾಯಿತಿಯನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ನೀಡಿದ್ದು ಈ ವಿನಾಯಿತಿಗಳ ಹಿನ್ನೆಲೆಯಲ್ಲಿ ಶನಿವಾರ ಸಾರ್ವಜನಿರು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗಿಳಿದ ದೃಶ್ಯಗಳು ಕಂಡು ಬಂದಿತು.
ಲಾಕ್‌ಡೌನ್‌ಗೆ ವಿನಾಯಿತಿ ನೀಡಿ ಎರಡು ದಿನಗಳನ್ನು ಕಳೆದಿದ್ದು, ಕೆಲವು ಆಯ್ದ ಕ್ಷೇತ್ರಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಆದರೆ, ವಿನಾಯಿತಿಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೇ ಜನರು ಬೇಕಾಬಿಟ್ಟಿಯಾಗಿ ನಗರದ ರಸ್ತೆಗಳಲ್ಲಿ ತಿರುಗಾಡಲು ಶುರುವಿಟ್ಟುಕೊಂಡಿದ್ದಾರೆ. ಶನಿವಾರ ಬಹುತೇಕ ಅಂಗಡಿ ಮಾಲೀಕರು ಅಂಗಡಿಗಳನ್ನು ತೆರೆದು ವ್ಯಾಪಾರ ವಹಿವಾಟಿಗೆ ಮುಂದಾದ್ದರು. ಲಾಕ್‌ಡೌನ್ ನಿರ್ಬಂಧಗಳಿಂದ ವಿನಾಯಿತಿ ಇಲ್ಲದ ಅಂಗಡಿ ಮಾಲೀಕರು ಅರ್ಥ ಬಾಗಿಲು ತೆರೆದು ವಹಿವಾಟಿಗೆ ಮುಂದಾಗಿದ್ದರು.
ಇದನ್ನು ಗಮನಿಸಿದ ಪೊಲೀಸರು ತಕ್ಷಣ ಕಾರ್ಯ ಪ್ರವೃತ್ತರಾಗಿ ವಿನಾಯಿತಿಯಿಲ್ಲದ ಅಂಗಡಿ ಮುಂಗಟ್ಟುಗಳನ್ನು ಬಾಗಿಲು ಹಾಕಿಸಿದರು. ಸರ್ಕಾರ ವಿನಾಯಿತಿ ನೀಡಿರುವ ಪುಸ್ತಕ ಮಾರಾಟ ಮಳಿಗೆ, ಮೊಬೈಲ್ ರೀಚಾರ್ಜ್ ಅಂಗಡಿ, ಗ್ಯಾರೇಜ್, ಕೃಷಿ ಯಂತ್ರೋಪಕರಣ ಅಂಗಡಿಗಳು ಬಾಗಿಲು ತೆರೆದು ವ್ಯಾಪಾರ ವಹಿವಾಟಿಗೆ ಮುಂದಾಗಿದ್ದರು. ಆದರೆ, ಅಂಗಡಿಗಳಲ್ಲಿ ಗ್ರಾಹಕರ ಕೊರತೆಯಿಂದಾಗಿ ಅಂಗಡಿ ಮಾಲೀಕರು ವ್ಯಾಪಾರ ವಹಿವಾಟು ಇಲ್ಲದೆ ಅಂಗಡಿಗಳ ಮುಂದೆ ಸುಮ್ಮನೆ ಕುಳಿತ್ತಿದ್ದ ದೃಶ್ಯಗಳು ಕಂಡು ಬಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.