ಕಾಫಿನಾಡಲ್ಲೂ ನಿಲ್ಲದ ಬಾಲ್ಯವಿವಾಹ


Team Udayavani, Sep 23, 2020, 6:45 PM IST

ಕಾಫಿ ನಾಡಲ್ಲೂ ನಿಲ್ಲದ ಬಾಲ್ಯವಿವಾಹ

ಚಿಕ್ಕಮಗಳೂರು: ಬಾಲ್ಯ ವಿವಾಹ ನಿಷೇಧ ಜಾಗೃತಿಯ ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ವಿದ್ಯಾವಂತರೇ ಹೆಚ್ಚಾಗಿರುವ ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಜಿಲ್ಲೆಯಲ್ಲಿ 2020 ಏಪ್ರಿಲ್‌ನಿಂದ ಆಗಸ್ಟ್‌ ತಿಂಗಳವರೆಗೆ ಬಾಲ್ಯವಿವಾಹಕ್ಕೆ ಸಂಬಂ ಧಿಸಿ 31 ಪ್ರಕರಣಗಳು ಕಂಡು ಬಂದಿದ್ದು 2 ಪ್ರಕರಣ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿನ 31 ಪ್ರಕರಣಗಳ ಪೈಕಿ 29 ಪ್ರಕರಣಗಳನ್ನು ತಡೆಹಿಡಿಯಲಾಗಿದೆ. ಕೋವಿಡ್ ಸೋಂಕು ತಡೆಗಾಗಿ ಸರ್ಕಾರ ವಿಧಿಸಿದ್ದ ಲಾಕ್‌ಡೌನ್‌ ಸಂದರ್ಭದಲ್ಲೇ 31 ಪ್ರಕರಣ ಬೆಳಕಿಗೆ ಬಂದಿವೆ. ಜಿಲ್ಲೆ ಬಯಲುಸೀಮೆ ಮತ್ತು ಮಲೆನಾಡು ಪ್ರದೇಶ ಒಳಗೊಂಡಿದ್ದು, ಇಲ್ಲಿನ ಕೆಲವು ಸಮುದಾಯದಲ್ಲಿ ಬಾಲ್ಯ ವಿವಾಹ ಪದ್ಧತಿ ಕಂಡು ಬರುತ್ತಿದೆ. ಹಿರಿಯರಭಾವನಾತ್ಮಕತೆ, ಸಂಪ್ರದಾಯ ಮತ್ತು ಬೇಗ ಮದುವೆ ಮಾಡಿ ಜವಾಬ್ದಾರಿ ಕಳೆದುಕೊಳ್ಳುವ ಪೋಷಕರ ಭಾವನೆ ಬಾಲ್ಯವಿವಾಹಕ್ಕೆ ಕಾರಣವಾಗಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಬಾಲ್ಯ ವಿವಾಹದ ಸಂಖ್ಯೆ ಹೆಚ್ಚಿದೆ. ಮಲೆನಾಡು ಭಾಗದ ಕಾಫಿ ತೋಟಗಳಲ್ಲಿ ಕಾರ್ಮಿಕ ವೃತ್ತಿಗೆ ವಲಸೆ ಬಂದು ಕೂಲಿಲೈನ್‌ಗಳಲ್ಲಿ ವಾಸ ಮಾಡುತ್ತಿರುವರಲ್ಲಿ ಹಾಗೂ ಬಯಲುಸೀಮೆ ಭಾಗದ ಕೆಲ ಸಮುದಾಯದಲ್ಲಿ ಈ ಪದ್ಧತಿ ಇಂದಿಗೂ ಜೀವಂತವಾಗಿದೆ.

ಕೂಲಿಲೈನ್‌ನಲ್ಲಿ ವಾಸ ಮಾಡುವ ಕೆಲ ಪೋಷಕರು ಮದ್ಯ ವ್ಯಸನಿಗಳಾಗಿರುವುದು. ಮಕ್ಕಳ ಮೇಲೆ ಕಾಳಜಿ ಇಲ್ಲದಿರುವುದು, ಶಿಕ್ಷಣ, ಬಡತನ, ಅರಿವಿನ ಕೊರತೆ, ಜವಾಬ್ದಾರಿ ಇಲ್ಲದಿರುವುದು, ಸಂಬಂಧ ಕುದುರಿದರೇ ಸಾಕು ಎಂಬ ಭಾವನೆ, ಹಿರಿಯರ ಭಾವನಾತ್ಮಕ ಅಂಶಗಳ ಕಾರಣದಿಂದ ಬಾಲ್ಯವಿವಾಹ ಪ್ರಕರಣಗಳು ಅಲ್ಲಲ್ಲಿ ಬೆಳಕಿಗೆ ಬಂದರೂ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದಲ್ಲಿದೆ.

ಎಲ್ಲೆಲ್ಲಿ ಎಷ್ಟು ಪ್ರಕರಣ?: 2020ರ ಏಪ್ರಿಲ್‌ ತಿಂಗಳಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ 2 ಪ್ರಕರಣ, ತರೀಕೆರೆ ತಾಲೂಕಿನಲ್ಲಿ 1, ಕಡೂರು ತಾಲೂಕಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿವೆ. ಮೇ ತಿಂಗಳಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ 2, ತರೀಕೆರೆ ತಾಲೂಕಿನಲ್ಲಿ 2 ಪ್ರಕರಣಗಳು ಬೆಳಕಿಗೆ ಬಂದಿವೆ. ಜೂನ್‌ನಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ 3, ತರೀಕೆರೆ ತಾಲೂಕಿನಲ್ಲಿ 3, ಕಡೂರು ತಾಲೂಕಿನಲ್ಲಿ 3 ಹಾಗೂ ಮೂಡಿಗೆರೆ ತಾಲೂಕಿನಲ್ಲಿ 1 ಪ್ರಕರಣ ಕಂಡು ಬಂದಿದೆ. ಜುಲೈ ತಿಂಗಳಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ 6, ಕಡೂರು ತಾಲೂಕಿನಲ್ಲಿ 1, ಮೂಡಿಗೆರೆ ತಾಲೂಕಿನಲ್ಲಿ 1, ಕೊಪ್ಪ ತಾಲೂಕಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿವೆ. ಇದರಲ್ಲಿ ಎರಡು ಪ್ರಕರಣ ದಾಖಲಾದರೆ ಉಳಿದ 29 ಬಾಲ್ಯ ವಿವಾಹವನ್ನು ಇಲಾಖೆ ತಡೆದಿದ್ದು, 3 ಗಂಡು ಮಕ್ಕಳು 28 ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದೆ. ಜನರಲ್ಲಿನ ಅರಿವಿನ ಕೊರತೆ, ಅನಕ್ಷರತೆ, ಬಡತನ, ಜವಾಬ್ದಾರಿ ಕಳೆದುಕೊಳ್ಳಬೇಕು ಎಂಬ ಇಚ್ಛೆ, ಅಪ್ರಾಪ್ತರ ಪ್ರೇಮ ಪ್ರಕರಣಗಳು ಹಾಗೂ ಭಾವನಾತ್ಮಕ ಸಂಬಂಧ ಬಾಲ್ಯವಿವಾಹಕ್ಕೆ ಕಾರಣವಾಗುತ್ತಿವೆ. ಎಷ್ಟೋ ಪ್ರಕರಣವನ್ನು ತಡೆಹಿಡಿಯಲಾಗಿದ್ದರೂ ಈ ಪದ್ಧತಿ ಇನ್ನೂ ಜೀವಂತವಾಗಿದೆ ಎನ್ನುತ್ತಾರೆ ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷರು, ಹಾಲಿ ಬಾಲಮಂಡಳಿ ಸದಸ್ಯರಾಗಿರುವ ವಕೀಲ ನಟರಾಜ್‌.

ಬಾಲ್ಯ ವಿವಾಹ ತಡೆಗೆ ಅನೇಕ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾ  ಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ,

ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ, ಜಿಪಂ ಸಿಇಒ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಜಿಲ್ಲಾ ಆರೋಗ್ಯಾಧಿಕಾರಿ, ಸಮಾಜ ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗ ಇಲಾಖೆ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಐಟಿಡಿಪಿ, ಜಿಲ್ಲಾ ಕಾರ್ಮಿಕಾಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌, ತಾಪಂ ಸಿಇಒ, ತಾಲೂಕು ವೈದ್ಯಾಧಿಕಾರಿ, ತಾಲೂಕು

ಸಮಾಜ ಕಲ್ಯಾಣಾಧಿಕಾರಿ, ಕಾರ್ಮಿಕ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಂರಕ್ಷಣಾಧಿಕಾರಿ (ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ), ಸರ್ಕಲ್‌ ಇನ್ಸ್ ಪೆಕ್ಟರ್‌, ಹಿಂದುಗಳಿದ ವರ್ಗಗಳ ಅಭಿವೃದ್ಧಿ ಇಲಾಖೆ ವಿಸ್ತರಣಾಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ.

ಹೋಬಳಿ ವ್ಯಾಪ್ತಿಯಲ್ಲಿ ಕಂದಾಯ ನಿರೀಕ್ಷಕರು, ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಐಸಿಡಿಎಸ್‌ ವಲಯ ವ್ಯಾಪ್ತಿ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಗ್ರಾಪಂ ವ್ಯಾಪ್ತಿ, ಗ್ರಾಮ ಲೆಕ್ಕಿಗರು, ಗ್ರಾಮ ವ್ಯಾಪ್ತಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಮಹಾನಗರ ವ್ಯಾಪ್ತಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಕಂದಾಯ ನೀರಿಕ್ಷಕರ ಸಮಿತಿ ರಚಿಸಲಾಗಿದೆ.

ಪಂಚಾಯತ್‌ ವ್ಯಾಪ್ತಿಯಲ್ಲಿ ಆರೋಗ್ಯ ನೀರಿಕ್ಷಕರು, ಹಿರಿಯ ಕಾರ್ಮಿಕ ನಿರೀಕ್ಷಕರು, ಆ ವ್ಯಾಪ್ತಿಯ ಪೊಲೀಸ್‌ ಇಲಾಖೆ, ಕಂದಾಯ ಅಧಿಕಾರಿಗಳು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಈ ಸಮಿತಿಗಳು ಹದ್ದಿನ ಕಣ್ಣಿಟ್ಟು ಬಾಲ್ಯವಿವಾಹವನ್ನು ತಡೆಗಟ್ಟಲು ನಿರಂತರವಾಗಿ ಶ್ರಮಿಸುತ್ತಿವೆ. ಬಾಲ್ಯವಿವಾಹ ನಿಷೇಧ ಕಾನೂನು ಮತ್ತು ಅದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಕಾನೂನು ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಸರ್ಕಾರಿ ಶಾಲೆ, ಅಂಚೆ ಕಚೇರಿ, ಪಂಚಾಯತ್‌ ಕಚೇರಿ ಮೀನಾ ಕ್ಲಬ್‌, ಕಿಶೋರಿ ಸಂಘಗಳು, ಮಕ್ಕಳ ಗ್ರಾಮ ಸಭೆಗಳಲ್ಲಿ ತೆರೆದಮನೆ, ಗ್ರಾಮ ಚಾವಡಿ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಬೀದಿನಾಟಕ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಇದೆಲ್ಲದರ ನಡುವೆಯೂ ಅಲ್ಲಲ್ಲಿ ಬೆರಳೆಣಿಕೆಯಷ್ಟು ಬಾಲ್ಯವಿವಾಹ ನಡೆಯುತ್ತಿದ್ದು, ಬಾಲ್ಯವಿವಾಹಕ್ಕೆ ಸಂಪೂರ್ಣ ಮುಕ್ತಿ ಹಾಡಬೇಕೆನ್ನುವುದು ಸಾರ್ವಜನಿಕರ ಆಶಯವಾಗಿದೆ.

ಬಾಲ್ಯವಿವಾಹದ ಪ್ರಕರಣ ಬೆರಳೆಣಿಕೆಯಷ್ಟು ಅಲ್ಲೊಂದು ಇಲ್ಲೊಂದು ಕಂಡು ಬರುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದೂರು ಬಂದ ತಕ್ಷಣ ಮಗುವನ್ನು ರಕ್ಷಿಸಿ ಪೋಷಕರ ಮೇಲೆ ದೂರು ದಾಖಲು ಮಾಡಲಾಗುತ್ತಿದೆ. ಬಾಲ್ಯವಿವಾಹ ಒಂದು ಕ್ರಿಮಿನಲ್‌ ಅಪರಾಧ. ಬಾಲ್ಯವಿವಾಹ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಸದ್ಯಜಿಲ್ಲೆಯಲ್ಲಿ ಶೇ.99ರಷ್ಟು ಬಾಲ್ಯವಿವಾಹ ನಿಂತು ಹೋಗಿದೆ. ಶೇ.1ರಷ್ಟು ಅಲ್ಲೊಂದು ಇಲ್ಲೊಂದು ಪ್ರಕರಣ ಸಂಬಂಧಿಕರೊಳಗೆ ಕದ್ದುಮುಚ್ಚಿ ನಡೆಯುತ್ತವೆ. ದೂರು ಬಂದ ತಕ್ಷಣ ಅವರ ಮೇಲೆ ದೂರು ದಾಖಲಿಸಿ ಮಗುವನ್ನು ಸಂರಕ್ಷಿಸಿ ಸಾಂತ್ವನ ಕೇಂದ್ರದಲ್ಲಿ ಆಶ್ರಯ ನೀಡಲಾಗುತ್ತಿದೆ. -ಸಿ.ಟಿ. ರವಿ, ಜಿಲ್ಲಾ ಉಸ್ತುವಾರಿ ಸಚಿವ

ಬಾಲ್ಯವಿವಾಹ ಸಂಪೂರ್ಣ ತಡೆಗಟ್ಟಿದರೂ ಅಲ್ಲಲ್ಲಿ ಒಂದೊಂದು ಪ್ರಕರಣ ಬೆಳಕಿಗೆ ಬರುತ್ತಿವೆ. ಬಾಲ್ಯ ವಿವಾಹಕ್ಕೆ ಶಿಕ್ಷಣದ ಕೊರತೆ, ಬಡತನ, ಅರಿವಿನ ಕೊರತೆ,ಭಾವನಾತ್ಮಕ ಸಂಬಂಧ ಹೀಗೆ ಅನೇಕ ಕಾರಣಗಳಿಂದ ಕಂಡುಬರುತ್ತಿದ್ದು, ಅದರಲ್ಲೂ ಕೆಲ ಪ್ರಕರಣ ವಿದ್ಯಾವಂತ ಕುಟುಂಬಗಳಲ್ಲಿ ಕಂಡು ಬರುವಂತದ್ದು ಬೇಸರದ ಸಂಗತಿ. ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಗಟ್ಟಲು ಅನೇಕ ಇಲಾಖೆಗಳು ಹಗಲಿರುಳು ಶ್ರಮಿಸುತ್ತಿದ್ದು, ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿ ಸಂಪೂರ್ಣ ನಶಿಸಿಹೋಗಬೇಕು. –ನಟರಾಜ್‌, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷರು, ಹಾಲಿ ಬಾಲನ್ಯಾಯ ಮಂಡಳಿ ಸದಸ್ಯರು ಮತ್ತು ವಕೀಲರು

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.