ಕಸಾಪದಿಂದ ಮಕ್ಕಳ ಸಾಹಿತ್ಯ ಕಡೆಗಣನೆ
Team Udayavani, Jan 30, 2019, 9:17 AM IST
ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳು ಮತ್ತು ಮಕ್ಕಳ ಸಾಹಿತ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಆರೋಪಿಸಿದರು.
ನಾದ ಚೈತನ್ಯ, ಸಾಂಸ್ಕೃತಿಕ ಯುವ ಕಲಾ ವೇದಿಕೆ ಮತ್ತು ಸಂಸ್ಕಾರ ಭಾರತಿ ನಗರದ ಕುವೆಂಪು ಕಲಾ ಮಂದಿರದಲ್ಲಿ ಏರ್ಪಡಿಸಿದ್ದ ಗೀತ ಸಂಕ್ರಾಂತಿ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಕೋಟ್ಯಂತರ ರೂ.ಗಳನ್ನು ಖರ್ಚು ಮಾಡಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುತ್ತದೆ. ಅದರಲ್ಲಿ ಮಹಿಳೆಯರು, ಯುವಕರು ಸೇರಿದಂತೆ ಎಲ್ಲಾ ಗೋಷ್ಠಿಗಳನ್ನೂ ನಡೆಸುತ್ತದೆ. ಆದರೆ ಮಕ್ಕಳ ಗೋಷ್ಠಿ ಮಾತ್ರ ಆಯೋಜಿಸದೆ ನಿರ್ಲಕ್ಷಿಸಿದೆ ಎಂದು ಅಸಮಾಧಾನವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ಎಲ್ಲಾ ರೀತಿಯ ಸಮ್ಮೇಳನ, ಕಾರ್ಯಕ್ರಮಗಳು ಮತ್ತು ಗೋಷ್ಠಿಗಳು ಎಲ್ಲೆಡೆ ನಡೆಯುತ್ತಿವೆ. ಆದರೆ ಮಕ್ಕಳ ಸಮ್ಮೇಳನಗಳು ಗೋಷ್ಠಿಗಳು ಕಂಡು ಬರುತ್ತಿಲ್ಲ ಎಂದು ವಿಷಾದಿಸಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನಂತಹ ಸಂಸ್ಥೆಗಳೇ ಮಕ್ಕಳನ್ನು ನಿರ್ಲಕ್ಷಿಸಿದರೆ ಅವರ ಸಾಹಿತ್ಯ ಉಳಿದು, ಬೆಳೆಯುವುದು ಹೇಗೆ ಎಂದು ಪ್ರಶ್ನಿಸಿದರು.
ಈ ಹಿನ್ನೆಲೆಯಲ್ಲಿ ವರ್ಷಕ್ಕೆ ಕನಿಷ್ಠ ಒಂದಾದರೂ ಮಕ್ಕಳ ಸಮ್ಮೇಳನ ಮತ್ತು ಅವರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸುವಂತೆ ವೇದಿಕೆಯಲ್ಲಿದ್ದ ಖ್ಯಾತ ಸಂಗೀತ ನಿರ್ದೇಶಕ ಉಪಾಸನಾ ಮೋಹನ್ ಅವರಿಗೆ ಸಲಹೆ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ|ಸಿ.ರಮೇಶ್ ಮಾತನಾಡಿ, ತಮ್ಮ ಇಲಾಖೆ ವತಿಯಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕನಿಷ್ಠ ವರ್ಷಕ್ಕೆ ಒಂದು ಮಕ್ಕಳ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸುವುದಾಗಿ ಭರವಸೆ ನೀಡಿದರು.
ಸಂಗೀತ ನಿರ್ದೇಶಕ ಉಪಾಸನಾ ಮೋಹನ್ ಮಾತನಾಡಿ, ಪೋಷಕರು ತಮ್ಮ ಮಕ್ಕಳನ್ನು ಟಿ.ವಿ ಕಾರ್ಯಕ್ರಮಗಳಿಗೆ ಕಳುಹಿಸುವುದನ್ನು ಬಿಟ್ಟು ಅವರಿಗೆ ಉತ್ತಮ ಸಾಹಿತ್ಯ ಕಲಿಸಬೇಕು ಎಂದು ಹೇಳಿದರು. ಅಧ್ಯಕ್ಷತೆಯನ್ನು ನಾದಚೈತನ್ಯದ ಅಧ್ಯಕ್ಷ ಸಿ.ಆರ್.ಪ್ರೇಮ್‌ಕುಮಾರ್ ವಹಿಸಿದ್ದರು.
ನಾದ ಚೈತನ್ಯ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ವಿವಿಧ ಗಾಯಕರಿಂದ ನಾಡಿನ ಖ್ಯಾತ ಕವಿಗಳು ರಚಿಸಿರುವ ಗೀತೆಗಳ ಗಾಯನ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸಿರಿ ಪ್ರಶಸ್ತಿಗೆ ಪಾತ್ರರಾಗಿರುವ ನಿವೃತ್ತ ಉಪನ್ಯಾಸಕ ಚಂದ್ರಮೌಳಿ ಮತ್ತು ಉಪಾಸನಾ ಮೋಹನ್ ಅವರನ್ನು ಸನ್ಮಾನಿಸಲಾಯಿತು. ನಾದ ಚೈತನ್ಯ ಸಂಸ್ಥೆಯ ಮುಖ್ಯಸ್ಥೆ ರೇಖಾ ಪೇಮ್‌ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.