ಒಳ ವೈರುಧ್ಯ ಮೀರಿ ವೀರಶೈವರು ಸಂಘಟಿತರಾಗಿ
Team Udayavani, Apr 9, 2021, 7:06 PM IST
ಚಿಕ್ಕಮಗಳೂರು: ವೀರಶೈವ ಸಮುದಾಯದ ಜನರು ತಮ್ಮಲ್ಲಿರುವ ಒಳವೈರುಧ್ಯಗಳನ್ನು ಬದಿಗೊತ್ತಿ ಸಂಘಟಿರಾಗಬೇಕೆಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಕರೆ ನೀಡಿದರು.
ಗುರುವಾರ ನಗರದ ಗೃಹಮಂಡಳಿ ಬಡಾವಣೆಯಲ್ಲಿ ನಿರ್ಮಿಸುತ್ತಿರುವ ವೀರಶೈವ ಸಮುದಾಯ ಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ನಂತರ ನಡೆದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ವೀರಶೈವ ಲಿಂಗಾಯತ ಸಮುದಾಯದಲ್ಲಿರುವ ಒಳಪಡಂಗಡಗಳಲ್ಲಿ ಬಹಳಷ್ಟು ಭಿನ್ನಾಭಿಪ್ರಾಯಗಳಿವೆ. ಆ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಎಲ್ಲರೂ ಒಂದಾಗಿ ಸಾಗಿದರೆ ಧರ್ಮದ ಶಕ್ತಿ ಇನ್ನಷ್ಟು ವೃದ್ಧಿಸುತ್ತದೆ.
ಸಮುದಾಯವು ಸುಭದ್ರವಾಗುತ್ತದೆ ಎಂದು ಅಭಿಪ್ರಾಯಿಸಿದರು. ಮಾಜಿ ಮಂತ್ರಿ ಶಾಸಕ ಸಿ.ಟಿ.ರವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವೀರಶೈವ ಮಹಾಸಭಾದ ನಿಯೋಗವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಳಿಗೆ ಕರೆದೊಯ್ದು ಹೆಚ್ಚಿನ ಅನುದಾನ ಕೊಡಿಸುವ ಭರವಸೆ ನೀಡಿದರು.
ಭವನಕ್ಕೆ ಉತ್ತಮ ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಮಾತನಾಡಿ, ವೀರಶೈವ ಸಮುದಾಯ ಭವನ ನಿರ್ಮಾಣಕ್ಕೆ ನಿಗಮದಿಂದ ಸಹಕಾರ ನೀಡುವ ಭರವಸೆ ನೀಡಿದರು. ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಬಿ.ಎ.ಶಿವಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮುದಾಯ ಭವನ ನಿರ್ಮಾಣ ಕಾಮಗಾರಿ ಒಂದು ವರ್ಷದೊಳಗೆ ಪೂರ್ಣಗೊಳಸಲು ಪ್ರಯತ್ನಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು. ಮಹಾಸಭಾದ ಉಪಾಧ್ಯಕ್ಷ ಎಚ್. ಎಂ.ರೇಣುಕಾರಾಧ್ಯ ಪ್ರಾಸ್ತಾವಿಕ ವಾಗಿ ಮಾತನಾಡಿದರು. ದಾನಿ ರವಿಶಂಕರ್ ನಾಮಫಲಕ ಅನಾವರಣಗೊಳಿ ಸಿದರು.
ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಷಡಾಕ್ಷರಸ್ವಾಮಿ, ಮಾಜಿ ಸಚಿವ ಸಗೀರ್ ಅಹಮದ್, ವಾರ್ತಾ ಸಚಿವರ ಆಪ್ತ ಕಾರ್ಯದರ್ಶಿ ವಿರೂಪಾಕ್ಷ, ಉದ್ಯಮಿ ಜ್ಯೋತಿ ಪ್ರಕಾಶ್, ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಎಂ. ಲೋಕೇಶ್, ನಗರ ವೀರಶೈವ ಸಮಾಜದ ಅಧ್ಯಕ್ಷ ಸಿ.ಬಿ. ಮಲ್ಲೇಗೌಡ, ಸಿಡಿಎ ಅಧ್ಯಕ್ಷ ಸಿ.ಆನಂದ್, ಮಹಾಸಭಾದ ಉಪಾಧ್ಯಕ್ಷ ಎಚ್.ಎನ್. ನಂಜೇಗೌಡ, ಎಂ.ಎಸ್. ನಿರಂಜನ್, ಕಾರ್ಯದರ್ಶಿ ಡಿ.ಎಸ್. ಮಮತಾ, ಖಜಾಂಚಿ ಎಸ್. ದೇವರಾಜು ಇದ್ದರು.
ವೀರಶೈವ ಮಹಾಸಭಾದ ನಿರ್ದೇಶಕ ಎಚ್.ಡಿ. ತಮ್ಮಯ್ಯ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಸಿ.ಬಿ. ನಂದೀಶ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
MUST WATCH
ಹೊಸ ಸೇರ್ಪಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
Lakshmi Hebbalkar: “ಎಪಿಎಲ್, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.