![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 19, 2022, 10:15 PM IST
ಶೃಂಗೇರಿ: ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಶ್ರೀ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಜಗದ್ಗುರುಗಳ ಆಶೀರ್ವಾದ ಪಡೆದರು.
ಬೆಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಕೊರಡಕಲ್ಲು ಹೆಲಿಪ್ಯಾಡ್‌ಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಹೆಲಿಪ್ಯಾಡಿನಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಶಾಸಕ ಟಿ.ಡಿ.ರಾಜೇಗೌಡ, ಪೊಲೀಸ್ ಐಜಿ ದೇವಜಿತ್ ರೇ, ಉಡುಪಿ ಎಸ್ಪಿ ವಿಷ್ಣುವರ್ಧನ್, ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮತ್ತಿತರರು ಸ್ವಾಗತಿಸಿದರು.
ಹೆಲಿಪ್ಯಾಡ್‌ನಿಂದ ಶ್ರೀಮಠಕ್ಕೆ ತೆರಳಿದ ಮುಖ್ಯಮಂತ್ರಿಗಳಿಗೆ ಶ್ರೀಮಠದ ಆಡಳಿತಾಧಿಕಾರಿ ಡಾ| ವಿ.ಆರ್. ಗೌರಿಶಂಕರ್ ಪೂರ್ಣಕುಂಭ ಸ್ವಾಗತ ನೀಡಿದರು.
ಇದನ್ನೂ ಓದಿ:ಬಂಡೀಪುರ ಸಂರಕ್ಷಿತ ಪ್ರದೇಶದಲ್ಲಿ ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ!
ನಂತರ ಸಿಎಂ ಶ್ರೀ ಶಾರದಾಂಬಾ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಸ್ವೀಕರಿಸಿದರು. ಬಳಿಕ ಶ್ರೀ ಶಂಕರಾಚಾರ್ಯ ದೇಗುಲಕ್ಕೆ ತೆರಳಿ ತೋರಣ ಗಣಪತಿ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿ, ತೆಂಗಿನ ಕಾಯಿ ಒಡೆದರು.
ಎಲ್ಲ ದೇವರಿಗೂ ಸಾಷ್ಟಾಂಗ ನಮಸ್ಕಾರ ಮಾಡಿದ ಸಿಎಂ ರಾಜ್ಯದ ಸುಭಿಕ್ಷೆಗಾಗಿ ಪ್ರಾರ್ಥಿಸಿದರು. ಬಳಿಕ ನರಸಿಂಹವನಕ್ಕೆ ತೆರಳಿದ ಮುಖ್ಯಮಂತ್ರಿಗಳು ಉಭಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆದು ಕೆಲ ಕಾಲ ಮಾತುಕತೆ ನಡೆಸಿದರು.
You seem to have an Ad Blocker on.
To continue reading, please turn it off or whitelist Udayavani.