ಸಿಎಂ ಹೇಳಿಕೆ ಹತಾಶ ಮನಸ್ಥಿತಿ: ಸಿ.ಟಿ.ರವಿ
Team Udayavani, Sep 21, 2018, 6:20 AM IST
ಚಿಕ್ಕಮಗಳೂರು: ರಾಜ್ಯದಲ್ಲಿ ದಂಗೆ ಏಳಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿರುವುದು ಅವರ ಹತಾಶ ಮನಸ್ಥಿತಿಯ ಪರಾಕಾಷ್ಠೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಹೇಳಿದರು.
ಮುಖ್ಯಮಂತ್ರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ತಾವು ಮುಖ್ಯಮಂತ್ರಿ ಹುದ್ದೆಯಲ್ಲಿ ಇದ್ದೇನೆಂಬುದನ್ನು ಮರೆತು ಕುಮಾರಸ್ವಾಮಿ ಮಾತನಾಡುತ್ತಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿ ಇರುವವರು ದಂಗೆ ಎಬ್ಬಿಸುವುದಾಗಲಿ, ಆ ಕುರಿತು ಮಾತನಾಡುವುದಾಗಲಿ ಎರಡೂ ಅಪರಾಧ ಎಂದರು.
ಅವರು ಈ ಮಾತನ್ನು ಆಡಲೇಬೇಕಾದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾತನಾಡಲಿ. ಅವರು ಇಳಿದರೆ ಅಥವಾ ಕರೆ ನೀಡಿದರೆ ಅವರ ಮನೆಯಲ್ಲಿ ದಂಗೆಯಾಗಬಹುದೇ ಹೊರತು ರಾಜ್ಯದಲ್ಲಂತೂ ದಂಗೆಯಾಗುವುದಿಲ್ಲ. ಅವರೇ ಹೇಳಿದಂತೆ ಅವರು ಈ ರಾಜ್ಯದ ಆರೂವರೆ ಕೋಟಿ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿಲ್ಲ. ಹಾಗಾಗಿ ಅವರು ಹುದ್ದೆಯಿಂದ ಇಳಿದರೂ ಆರೂವರೆ ಕೋಟಿ ಜನರಿಗೆ ಏನೂ ದುಃಖವಾಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ
ಮೀಟರ್ ಬಡ್ಡಿ: ಯಾದಗಿರಿಯಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಬಲಿ
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಜಾರಕಿಹೊಳಿ
Monkey disease: ಉಣುಗುಗಳಲ್ಲಿ ಮಂಗನ ಕಾಯಿಲೆ ವಂಶವಾಹಿ ಪ್ರಸರಣ!
Hunsur: ರಾಯರ ದರ್ಶನಕ್ಕೆ ತೆರಳುತ್ತಿದ್ದವರ ವಾಹನ ಅಪಘಾತ… ಚಾಲಕ ಸೇರಿ ಏಳು ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bandipur ಹೆದ್ದಾರಿಯಲ್ಲಿ ಚೆಲ್ಲಿದ ಅಕ್ಕಿ ಮೆಲ್ಲುತ್ತ ನಿಂತ ಕಾಡಾನೆಗಳು: ಟ್ರಾಫಿಕ್ ಜಾಮ್
Waqf Bill: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗದ್ದಲ; ವಿಪಕ್ಷದ ಎಲ್ಲಾ 10 ಸಂಸದರ ಅಮಾನತು
Dharwad: ಇನ್‌ಸ್ಟಾಗ್ರಾಮ್ ಪ್ರೀತಿಗೆ ಪತಿ ತೊರೆದ 24 ರ ಯುವತಿ ಬಲಿ
Udupi; ಪವರ್ ಪರ್ಬ 2025: ಫೆ. 8 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆ
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ