![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 17, 2022, 1:52 PM IST
ಕೊಟ್ಟಿಗೆಹಾರ: ಅಸ್ಸಾಂ ಕಾರ್ಮಿಕರು ಕಾಫಿ ತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ದ್ಯಾವನಗೂಲ್ ಹ್ಯಾರೀಸ್ ಎಸ್ಟೇಟ್ ನಲ್ಲಿ ನಡೆದಿದೆ.
ಅಜ್ಘರ್ ಅಹಮ್ಮದ್ ಎನ್ನುವವರ ತೋಟದಲ್ಲಿ 8-10 ಅಸ್ಸಾಂ ಮೂಲದ ಕಾರ್ಮಿಕರ ಕೆಲಸ ಮಾಡಿದ್ದಾರೆ. ಮಳೆಗಾಲದಲ್ಲಿಯೂ ಕಾರ್ಮಿಕರಿಗೆ ಕೆಲಸ ಕೊಟ್ಟಿರುವ ಅಜ್ಘರ್ 1 ಲಕ್ಷ.ರೂ. ಸಾಲವನ್ನೂ ಕಾರ್ಮಿಕರಿಗೆ ನೀಡಿದ್ದಾರೆ. ಇತ್ತೀಚೆಗೆ ಸರಿಯಾದ ರೀತಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಕೆಲಸದ ಸ್ಥಳದಲ್ಲಿ ಗಲಾಟೆ ಮಾಡುವುದು, ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ. ಅದಕ್ಕಾಗಿ ಅಜ್ಘರ್ ಯಾಕೆ ಕೆಲಸಕ್ಕೆ ಬರುತ್ತಿಲ್ಲ ಎಂದು ಕೇಳಲು ಹೋಗಿದ್ದಾರೆ.
ಈ ವೇಳೆ ಮಾಲೀಕ ಅಜ್ಘರ್ ಅವರಿಗೆಯೇ ಕತ್ತಿಯಿಂದ ಹಲ್ಲೆಗೆ ಮುಂದಾಗಿದ್ದಾರೆ. ಹ್ಯಾರೀಸ್ ಎಸ್ಟೇಟ್ ನ ಮಾಲೀಕರಾದ ಅಜ್ಘರ್ ಅಹಮ್ಮದ್ ಅವರ ಮೇಲೆ ಅವರ ತೋಟದ ಅಸ್ಸಾಂ ಕಾರ್ಮಿಕರು ಹಲ್ಲೆ ನಡೆಸಲು ಮುಂದಾಗಿದ್ದು ಈ ಬಗ್ಗೆ ಅಜ್ಘರ್ ಅಹಮ್ಮದ್ ಅವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿದ ಬಣಕಲ್ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.