ಶಾಶ್ವತ ನೀರಾವರಿ ಕಲ್ಪಿಸಲು ಬದ್ಧ


Team Udayavani, Mar 25, 2019, 3:17 PM IST

chikk-2
ಕಡೂರು: ತಾಲೂಕಿಗೆ ಶಾಶ್ವತ ನೀರಾವರಿ ಕಲ್ಪಿಸುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುವ ಸಂಕಲ್ಪ ನಮ್ಮ ಕುಟುಂಬದ್ದಾಗಿದೆ ಎಂದು ಲೋಕೋಪಯೋಗಿ ಮತ್ತು ನೀರಾವರಿ ಸಚಿವ ಎಚ್‌.ಡಿ. ರೇವಣ್ಣ ಭರವಸೆ ನೀಡಿದರು.
ಪಟ್ಟಣದ ಕೆಎಲ್‌ವಿ ವೃತ್ತದಲ್ಲಿ ಭಾನುವಾರ ಸಂಜೆ ಹಾಸನ ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಲೂಕಿನ ಮದಗ, ಅಯ್ಯನಕೆರೆಯನ್ನು ತುಂಬಿಸುವ ಹೆಬ್ಬೆ ನೀರಾವರಿ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಿ ರಾಜ್ಯ ಸರಕಾರವು ನೂರು ಕೋಟಿ ಮೀಸಲಿಟ್ಟಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಸರಕಾರ
ಸಿದ್ದವಿದೆ. ಗೊಂದಿ ಅಣೆಕಟ್ಟು ಯೋಜನೆ ಸರಕಾರದ ಮುಂದಿದೆ. ಪರಿಶೀಲನೆ ಬಳಿಕ ಅದರ ಜಾರಿಗೂ ಯತ್ನಿಸಲಾಗುವುದು ಎಂದರು.
ಅಮೃತ್‌ಮಹಲ್‌ ಕಾವಲು ಪ್ರದೇಶದಲ್ಲಿ ಪಶುಸಂಗೋಪನಾ ಕಾಲೇಜು ಆರಂಭಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಸ್ಥಳ ನಿಗದಿಗೆ ಚುನಾವಣೆ ಬಳಿಕ ಕಾರ್ಯಪ್ರವೃತ್ತವಾಗಲಿದೆ. ಮಾಜಿ ಪ್ರಧಾನಿ ದೇವೇಗೌಡರನ್ನು ಸತತ ಗೆಲ್ಲಿಸಿ ಬೆಂಬಲಿಸಿರುವ ಈ ಕ್ಷೇತ್ರದ ಜನರ ಋಣ ನಮ್ಮ ಕುಟುಂಬದ ಮೇಲಿದೆ.
ಕ್ಷೇತ್ರದ ಅಭಿವೃದ್ಧಿಗೆ ಕಠಿಬದ್ಧವಾಗಿ ದುಡಿಯುತ್ತೇವೆ ಎಂದು ಭರವಸೆ ನೀಡಿದರು. ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಮಾತನಾಡಿ, ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ ಕಡೂರು ವಿಧಾನಸಭಾ ಕ್ಷೇತ್ರವು ಮೈತ್ರಿ ಹೋರಾಟದಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿಯ ಅನೇಕ ಕಾಂಗ್ರೆಸ್‌ ಮುಖಂಡರ ಮನೆಗೆ ತಾವು ತೆರಳಿದಾಗ ಅವರ
ಹೃದಯಸ್ಪರ್ಶಿ ಸ್ವಾಗತ ತಮಗೆ ನವಚೈತನ್ಯ ತಂದಿದೆ ಎಂದು ಸಮತಸ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ ಮಾತನಾಡಿ, ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಆದರೂ ಇಲ್ಲಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರು ತಾವೇ ಅಭ್ಯರ್ಥಿ ಎಂದು ಭಾವಿಸಿ ದೃಢತೆಯಿಂದ ಕೆಲಸ ಮಾಡಬೇಕು ಎಂದರು. ಕೆಪಿಸಿಸಿ ಸದಸ್ಯ ಕೆ.ಎಸ್‌. ಆನಂದ್‌ ಮಾತನಾಡಿ, ಮೈತ್ರಿಕೂಟದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರು, ಮುಖಂಡರು ಮೊದಲು ತಮ್ಮ ಮನಸ್ಥಿತಿಯನ್ನು ಒಗ್ಗಟ್ಟಿನತ್ತ ತರಲಿ. ಬಿಜೆಪಿ ಮೈತ್ರಿಕೂಟದ ದೌರ್ಬಲ್ಯವನ್ನು ಲಾಭ ಮಾಡಿಕೊಂಡು ಮತ ಪಡೆಯಲು ಹೊಂಚು ಹಾಕುತ್ತಿದೆ. ಇದರಿಂದ ಅದಕ್ಕೆ ಬ್ರಹ್ಮನಿರಸನವಾಗುವುದು ಖಂಡಿತ ಎಂದರು.
ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌. ಧರ್ಮೇಗೌಡ ಮಾತನಾಡಿ, ಹೈನುಗಾರಿಕೆಯ ಹರಿಕಾರ ಎಂದು ಕಲೆಸಿಕೊಳ್ಳುವ ಸಚಿವ ಎಚ್‌.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್‌ ಅವರನ್ನು ಗೆಲ್ಲಿಸಲು ಸಂಘಟಿತರಾಗಿ ದುಡಿಯೋಣ ಎಂದು ಹೇಳಿದರು. ಮಾಜಿ ಶಾಸಕ ವೈ.ಎಸ್‌.ವಿ. ದತ್ತ, ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ, ಜಿ.ಪಂ.ಮಾಜಿ ಅಧ್ಯಕ್ಷ ಕೆ.ಎಂ. ಕೆಂಪರಾಜು ಮಾತನಾಡಿದರು.
ಜಿಪಂ ಸದಸ್ಯರಾದ ಲೋಲಾಕ್ಷಿಬಾಯಿ, ಶರತ್‌ ಕೃಷ್ಣಮೂರ್ತಿ, ತಾ.ಪಂ ಅಧ್ಯಕ್ಷೆ ಭಾರತಿ ಪ್ರಹ್ಲಾದ್‌, ಉಪಾಧ್ಯಕ್ಷ ದಾಸಯ್ಯನಗುತ್ತಿ ಚಂದ್ರಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಬಾಸೂರು ಚಂದ್ರಮೌಳಿ, ಆಸಂದಿ ಕಲ್ಲೇಶ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಕೋಡಿಹಳ್ಳಿ ಮಹೇಶ್ವರಪ್ಪ, ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ, ನಗರಘಟಕ ಅಧ್ಯಕ್ಷ ಭಂಡಾರಿ
ಶ್ರೀನಿವಾಸ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.