ಕಮಿಷನ್ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಿ
Team Udayavani, Apr 18, 2022, 4:02 PM IST
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಶೇ.40ರಷ್ಟು ಕಮಿಷನ್ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಜಿಲ್ಲಾ ಕಾಂಗ್ರೆಸ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.
ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಕಚೇರಿ ಸಹಾಯಕ ಚಂದ್ರಶೇಖರ್ ಅವರಿಗೆ ಈ ಸಂಬಂಧ ಮನವಿ ನೀಡಲಾಯಿತು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 13 ಮತ್ತು 7ಎ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಆರೋಪಿಗಳನ್ನು ಬಂಧಿಸಬೇಕು. ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರ ಉಸ್ತುವಾರಿಯಲ್ಲಿ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಕೆ. ಪಾಟೀಲ್ ಕುಟುಂಬಕ್ಕೆ 1ಕೋಟಿ ರೂ. ಪರಿಹಾರ ನೀಡಬೇಕು. ಸಂತೋಷ್ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಮೃತರು ನಿರ್ವಹಿಸಿರುವ 108 ಕಾಮಗಾರಿಗಳ 4 ಕೋಟಿ ರೂ. ಬಿಲ್ ಪಾವತಿಸಬೇಕು. ಕಾಮಗಾರಿಗಳ ಕಾರ್ಯಾದೇಶ ನೀಡಿ ಪ್ರಕ್ರಿಯೆ ಪೂರ್ಣಗೊಳಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ| ಕೆ.ಪಿ. ಅಂಶುಮಂತ್, ಗಾಯತ್ರಿ ಶಾಂತೇಗೌಡ, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಎಚ್. ಎಚ್.ದೇವರಾಜ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalasa: ವೈದ್ಯನ ಶರ್ಟ್ ಹರಿದು ಹಲ್ಲೆ… ತಡೆಯಲು ಬಂದ ಮಹಿಳಾ ಸಿಬ್ಬಂದಿ ಮೇಲೂ ಹಲ್ಲೆ ಯತ್ನ
Chikmagalur: ವರದಕ್ಷಿಣೆ ಕಿರುಕುಳ: ಕಳಸ ಠಾಣಾಧಿಕಾರಿ ಅಮಾನತು
Chikmagalur: ಕಡೆಗುಂದಿ ಗ್ರಾಮಕ್ಕೆ 4 ನಕ್ಸಲರ ಕರೆದೊಯ್ದು ಸ್ಥಳ ಮಹಜರು
Compliant ಕಳಸದಲ್ಲಿ ಪಿಎಸ್‌ಐ, ಪತ್ನಿಯಿಂದ ದೂರು- ಪ್ರತಿದೂರು ಜಟಾಪಟಿ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.