ಕಾಂಗ್ರೆಸ್‌ನಿಂದ ಜನರ ಬದುಕು ಕಟ್ಟುವ ಕೆಲಸ: ಎಂ.ಬಿ. ಪಾಟೀಲ್‌


Team Udayavani, May 20, 2022, 4:25 PM IST

mb-pateel

ಕಡೂರು: ಜನರ ಬದುಕು ಕಟ್ಟಿಕೊಡುವ ಕೆಲಸಕ್ಕಾಗಿ ಕಾಂಗ್ರೆಸ್‌ ಒಂದಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಹೇಳಿದರು. ಚಿಕ್ಕಮಗಳೂರಿನಲ್ಲಿ ನಡೆಯು ತ್ತಿರುವ ಬಸವ ತತ್ವ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಮಾರ್ಗಮಧ್ಯೆ ಸಖರಾಯಪಟ್ಟಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಡಿಮನೆ ಸತೀಶ್‌ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಅನ್ನ, ಅಕ್ಷರ, ಆಶ್ರಯ, ಆರೋಗ್ಯ ಮತ್ತು ಅಭಿವೃದ್ಧಿಯ ಪಂಚಸೂತ್ರಗಳನ್ನು ಮುಂದಿಟ್ಟುಕೊಂಡು ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ಎಂಬ ತತ್ವದ ಆಧಾರದ ಮೇಲೆ ಭವಿಷ್ಯದ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷವು ಜನರ ಸೇವೆಯನ್ನು ಮಾಡಲಿದೆ ಎಂದು ಭರವಸೆ ನೀಡಿದ ಅವರು, ಸರ್ವ ಜನಾಂಗದ ಶಾಂತಿಯ ತೋಟ ಎಂಬಂತೆ ಎಲ್ಲಾ ಧರ್ಮದ ಮತ್ತು ಜನರನ್ನು ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಸದೃಢಗೊಳಿಸಲಾಗುವುದು ಎಂದರು.

ರಾಜ್ಯದ ಬಿಜೆಪಿ ಸರಕಾರ ಜನರ ಅಭ್ಯುದಯಕ್ಕೆ ಸ್ಪಂದಿಸುತ್ತಿಲ್ಲ. ಶೇ. 40 ಕಮಿಷನ್‌ ವ್ಯವಹಾರದ ಹಗರಣ ಜಗಜ್ಜಾಹೀರಾಗಿದೆ. ಜನರ ತೆರಿಗೆಯ ಹಣ ದುರ್ಬಳಕೆಯಾಗುತ್ತಿದೆ. ಕಳಪೆ ಕಾಮಗಾರಿಗಳು ನಡೆಯುತ್ತಿವೆ. ಇದೊಂದು ಜನಪರ ಸರಕಾರವಲ್ಲ ಎಂದು ಗಂಭೀರ ಆರೋಪ ಮಾಡಿದರು.

ವಿಧಾನ ಪರಿಷತ್‌ ಮಾಜಿ ಸಚೇತಕ ಬಿ.ಎಲ್. ಶಂಕರ್‌, ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಡಾ| ಡಿ.ಎಲ್. ವಿಜಯಕುಮಾರ್‌, ಎಂ.ಎಲ್. ಮೂರ್ತಿ, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಸಖರಾಯಪಟ್ಟಣ ಬ್ಲಾಕ್‌ ಅಧ್ಯಕ್ಷ ಮಹಡಿಮನೆ ಸತೀಶ್‌, ಕಡೂರು ಬ್ಲಾಕ್‌ ಅಧ್ಯಕ್ಷ ಬಾಸೂರು ಚಂದ್ರಮೌಳಿ, ಮುಖಂಡರಾದ ಎಸ್‌.ಕೆ. ಸುಮನ್‌, ಕಿರಣ್‌ಕುಮಾರ್‌, ಕೆ.ಆರ್. ಮಂಜುನಾಥ್‌, ಎಸ್‌.ಎಂ. ರಘು, ರವಿ ಮುಂತಾದವರು ಇದ್ದರು.

ಮುಂದಿನ ವರ್ಷ ಕಾಂಗ್ರೆಸ್‌ ಅಧಿಕಾರಕ್ಕೆ

ಕಾಂಗ್ರೆಸ್‌ 2023ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲಿದೆ. ಇದಕ್ಕಾಗಿ ಪಕ್ಷದ ಭೂತ್‌ಮಟ್ಟದ ಸಮಿತಿಗಳನ್ನು ಸದೃಢಗೊಳಿಸಲಾಗುತ್ತಿದೆ. ಚಿಂತನ- ಮಂಥನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಪಕ್ಷಕ್ಕೆ ಸೇರ್ಪಡೆಯಾಗುವವರ ಸಂಖ್ಯೆಯೂ ಹೆಚ್ಚಾಗಿದ್ದು ಯಾವುದೇ ಇತರೆ ಪಕ್ಷದ ನಾಯಕರು ಪಕ್ಷ ಸೇರ್ಪಡೆಗೊಳ್ಳಲು ಬಯಸಿದ್ದಲ್ಲಿ ಸ್ಥಳೀಯ ಸಮಿತಿಯ ಅನುಮತಿ ಪಡೆಯಬೇಕಾಗುತ್ತದೆ. ಆ ನಿಟ್ಟಿನಲ್ಲಿ ಬ್ಲಾಕ್‌ ಮಟ್ಟದ ಸಮಿತಿಗಳ ತೀರ್ಮಾನವೇ ಅಂತಿಮ ಎಂದು ಎಂ.ಬಿ. ಪಾಟೀಲ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.