ಕಾಂಗ್ರೆಸ್ ಪಾದಯಾತ್ರೆ ಕಾಮಿಡಿ ಶೋ ಇದ್ದಂತೆ
ಇಂತಹ ಪಾದಯಾತ್ರೆ ದೇಶದ ಜನ ನೋಡಿಲ್ಲ ; ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕ ಸುರೇಶ್ ಟೀಕೆ
Team Udayavani, Oct 16, 2022, 3:19 PM IST
ತರೀಕೆರೆ: ಹಲವು ದಶಕಗಳ ಕಾಲ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಪಕ್ಷದಿಂದ, ದೇಶದ ಸಂಪತ್ತು ದೋಚಿದ ಮತ್ತು ದೇಶವನ್ನು ಇಬ್ಭಾಗ ಮಾಡಿದ ಕುಟುಂಬದವರು ದೇಶದಲ್ಲಿ ಭಾರತ್ ಜೋಡೋ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆ ಒಂದು ರೀತಿಯಲ್ಲಿ ಕಾಮಿಡಿ ಶೋ ಇದ್ದಂತೆ ಎಂದು ಶಾಸಕ ಡಿ.ಎಸ್.ಸುರೇಶ್ ಟೀಕಿಸಿದರು.
ಪಟ್ಟಣದ ಅರಮನೆ ಸಭಾಂಗಣದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಪಾದಯಾತ್ರೆಯಲ್ಲಿ ಇ.ಡಿ. ವಿಚಾರಣೆಗೆ ಒಳಪಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ರಮೇಶ್ ಕುಮಾರ್ ಇನ್ನಿತರರು ಜೊತೆಯಾಗಿದ್ದಾರೆ. ಇಂತಹ ಪಾದಯಾತ್ರೆಯನ್ನು ಈ ದೇಶದ ಜನ ನೋಡಿಲ್ಲ. ಇದನ್ನು ನೋಡಿ ಅಳಬೇಕೋ ನಗಬೇಕೋ ಗೊತ್ತಾಗುತ್ತಿಲ್ಲ. ದೇಶದಲ್ಲಿ ಭಯೋತ್ಪಾದನೆ ಉಂಟು ಮಾಡುವ, ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸದಲ್ಲಿ ನಿರತರಾಗಿದ್ದ ಪಿಎಫ್‌ಐ ಸಂಘಟನೆಯನ್ನು ಕೇಂದ್ರ ಸರಕಾರ ನಿಷೇಧಿಸಿದರೆ ಕಾಂಗ್ರೆಸ್ ಇದನ್ನು ವಿರೋ ಧಿಸುತ್ತಿದೆ ಎಂದರು.
ನಮ್ಮ ಸರಕಾರದ ಅವಧಿಯಲ್ಲಿ ತರೀಕೆರೆ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ತರೀಕೆರೆ, ಕಡೂರು, ಚಿಕ್ಕಮಗಳೂರು ಕ್ಷೇತ್ರದ 200 ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಸರಕಾರ 1400 ಕೋಟಿ ಹಣ ಬಿಡುಗಡೆ ಮಾಡಿದೆ. ಈಗಾಗಲೇ ಶೇ. 70ರಷ್ಟು ಪೈಪ್‌ಲೈನ್ ಕಾಮಗಾರಿ ಮುಗಿದಿದೆ. ಐದಾರು ದಶಕಗಳ ಆಡಳಿತ ನಡೆಸಿದ ಪಕ್ಷ ಏಕೆ ಕೆರೆಗಳಿಗೆ ನೀರು ಹರಿಸುವ ಯೋಜನೆಯನ್ನು ರೂಪಿಸಲಿಲ್ಲ ಹಾಗೂ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಪ್ರಶ್ನಿಸಿದ ಅವರು 2008ಕ್ಕೂ ಪಟ್ಟಣಗಳಲ್ಲಿ ಮಾತ್ರ ಸಿಸಿ ರಸ್ತೆಯನ್ನು ನಿರ್ಮಾಣ ಮಾಡಿದ್ದವು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಗ್ರಾಮಗಳಲ್ಲಿಯೂ ಕಾಂಕ್ರೀಟ್ ರಸ್ತೆ ಮಾಡಲಾಗಿದೆ. ಇದು ಬಿಜೆಪಿ ಸರಕಾರದ ಸಾಧನೆ ಎಂದರು.
ಕಡೂರು, ತರೀಕೆರೆ ಮತ್ತು ಚಿಕ್ಕಮಗಳೂರಿನ ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ನೀಡಬೇಕು ಎನ್ನುವ ಉದ್ದೇಶದಿಂದ 1200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಸರಕಾರ ಅನುಮೋದನೆ ನೀಡಿದೆ. ಭದ್ರಾ ಜಲಾಶಯದ ನದಿ ಪಾತ್ರದಿಂದ ಎಲ್ಲಾ ಗ್ರಾಮೀಣ ಭಾಗಗಳಿಗೂ ನೀರು ಹರಿಸಲಾಗುವುದು. ಯೋಜನೆಯ ಟೆಂಡರ್ ಪ್ರಕ್ರಿಯೆ ಅಂತಿಮಗೊಂಡಿದೆ. ನ.15 ರಂದು ಪಟ್ಟಣದಲ್ಲಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಲಿದ್ದಾರೆ. ಇದರ ಜೊತೆಯಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಚಾಲನೆಯಲ್ಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಮೃದ್ಧ ಮಳೆ- ಬೆಳೆಯಾಗುತ್ತದೆ ಎಂಬುದು ಜನರಲ್ಲಿ ಮೂಡಿದ ಭಾವನೆಯಾಗಿದೆ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜನರು ಬರಗಾಲ ಎದುರಿಸಿದ್ದರು. ಕುಡಿಯುವ ನೀರಿಗೂ ತತ್ವಾರವಾಗಿತ್ತು. ಭದ್ರಾ ನಾಲೆಯಿಂದ ರೈತರು ಟ್ಯಾಂಕರ್‌ಗಳ ಮೂಲಕ ನೀರು ತುಂಬಿಕೊಂಡು ಬೆಳೆದು ನಿಂತಿದ್ದ ಬೆಳೆಯನ್ನು ಉಳಿಸಿಕೊಳ್ಳಬೇಕಾಯಿತು. ಈ ಸಮಯದಲ್ಲಿ ಅಧಿಕಾರದಲ್ಲಿದ್ದ ಮಾಜಿ ಶಾಸಕ ಜಿ.ಎಚ್. ಶ್ರೀನಿವಾಸ್ ನಾಲೆಯಿಂದ ನೀರು ತರಲು ಅಡ್ಡಪಡಿಸಿದ್ದರು. ಜೊತೆಗೆ ಪೊಲೀಸರನ್ನು ಮುಂದೆ ಬಿಟ್ಟು ಪೊಲೀಸ್ ಅಧಿಕಾರಿಯಿಂದ ನನ್ನ ಕೊರಳು ಪಟ್ಟಿಗೆ ಕೈ ಹಾಕಿಸಿದ್ದರು. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು. ಇನ್ನು ಕೆಲವು ತಿಂಗಳಲ್ಲಿ ಚುನಾವಣೆ ಬರಲಿದೆ. ಬಿಜೆಪಿ ಸರಕಾರದ ಸಾಧನೆಯನ್ನು ಎಲ್ಲಾ ಜನರಿಗೂ ತಲುಪಿಸುವ ಕೆಲಸ ಮಾಡಬೇಕಿದೆ. ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಿ ಬಲಪಡಿಸಬೇಕಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಬಿಜೆಪಿ ಅದ್ಯಕ್ಷ ಕಲ್ಲುಮರಡಪ್ಪ, ನಮಗೆ ದೇಶ ಮೊದಲು ಎಂಬ ನಂಬಿಕೆಯಿಂದ ಕೆಲಸ ನಿರ್ವಹಿಸುತ್ತಿದ್ದೇವೆ. ವ್ಯಕ್ತಿಗಿಂತ ಪಕ್ಷ ಮುಖ. ಪಕ್ಷಕ್ಕಿಂತ ದೇಶ ದೊಡ್ಡದು ಎನ್ನುವುದು ಬಿಜೆಪಿಯ ಸಿದ್ಧಾಂತ. ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ದೇಶದ ಕಟ್ಟ ಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನಕ್ಕೆ ಒತ್ತು ನೀಡಿದೆ ಎಂದರು.
ಸಭೆಯಲ್ಲಿ ಕಡೂರು ಶಾಸಕ ಬೆಳ್ಳಿಪ್ರಕಾಶ್, ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಬಿಜೆಪಿ ಮುಖಂಡರಾದ ಗಿರೀಶ್ ಪಟೇಲ್, ಚನ್ನಬಸಪ್ಪ, ಬಿ.ಕೆ. ಗಣೇಶ್ ರಾಯರು, ಕಾರ್ಯಕಾರಿಣಿ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.