Chikkamagalur:ನಿಜ ಹೇಳಿದರೆ ಸಿ.ಟಿ ರವಿ ಉರಿದು ಬೀಳುತ್ತಾರೆ: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್
Team Udayavani, Aug 17, 2023, 3:54 PM IST
ಚಿಕ್ಕಮಗಳೂರು: ಸಿ.ಟಿ.ರವಿ ಮಾತ್ರ ಎಲ್ಲಾ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದು. ಅವರ ಬಗ್ಗೆ ನಿಜ ಹೇಳಿದರೆ ಕೆಳಗಿನಿಂದ ಮೇಲಿನವರೆಗೂ ಉರಿದು ಬೀಳುತ್ತಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ವಾಗ್ದಾಳಿ ನಡೆಸಿದರು.
ಚಿಕ್ಕಮಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2020 ರಲ್ಲಿ ಸಿ.ಟಿ.ರವಿ ಎಲ್ಲೆಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿದ್ದಾರೆಂದು ಪ್ರಶ್ನಿಸಿದ್ದೆ. ಸತ್ಯಹರಿಶ್ಚಂದ್ರನಂತೆ ಮಾತನಾಡ್ತೀರಾ, ನಿಮ್ಮ ಹಿನ್ನೆಲೆ ಏನೆಂದು ಪ್ರಶ್ನಿಸಿದ್ದೆ. ನೀವು ಬ್ಯುಸಿನೆಸ್ ಮ್ಯಾನ್, ಎಜುಕೇಶನ್ ಲಿಸ್ಟ್, ಇಂಡಸ್ಟ್ರಿಯಲಿಸ್ಟ್, ರಿಯಲ್ ಎಸ್ಟೇಟ್ ಏನೆಂದು ಜನರಿಗೆ ತಿಳಿಸಿ ಎಂದಿದ್ದೆ. ಜನ ಹೇಳುತ್ತಿದ್ದಾರೆ, ನೀವು ಲೂಟಿ ರವಿ ಎಂದು ಪ್ರಶ್ನೆ ಮಾಡಿದ್ದೆ. ಸಿ.ಟಿ. ರವಿ ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದರು. ಇಂದು ಬೇಲ್ ಆಗಿದೆ. ಇತರೆ ಬಿಜೆಪಿ ಮುಖಂಡರು ಕೂಡ ಬೆಂಗಳೂರು, ಮೈಸೂರಿನಲ್ಲಿ ಕೇಸ್ ದಾಖಲಿಸಿದ್ದಾರೆ ಎಂದರು.
ಬಿಜೆಪಿ, ಮೋದಿ, ಸಿ.ಟಿ.ರವಿ ವಿರುದ್ಧ ಮಾತನಾಡಿದರೇ, ಕೇಸ್ ಹಾಕಿ, ಇಡಿ, ಸಿಬಿಐ, ಪೊಲೀಸ್ ಮೂಲಕ ಹೆದರಿಸಲು ಪ್ರಯತ್ನಿಸುತ್ತಾರೆ. ಬಿಜೆಪಿಯವರ ಈ ಬೆದರಿಕೆಗೆ ನಾವು ಬೆದರುವ ವಂಶಸ್ಥರಲ್ಲ, ಕಾಂಗ್ರೆಸ್ ವಂಶಸ್ಥರು ಎಂದರು.
ನನ್ನ ಆರೋಪದ ಬಗ್ಗೆ ತನಿಖೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡ್ತೇನೆ. ನ್ಯಾಯಧೀಶರ ಮೂಲಕ ನನ್ನ ಆರೋಪದ ತನಿಖೆ ಆಗಬೇ ಕೆಂದು ಒತ್ತಾಯಿಸುತ್ತೇನೆ. ನನ್ನ ಆರೋಪದ ಬಗ್ಗೆ ಸಿಐಡಿ ಮೂಲಕ ಸಮಗ್ರ ತನಿಖೆಯಾಗಬೇಕೆಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.