ದಲಿತರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ
Team Udayavani, Dec 31, 2019, 12:53 PM IST
ಚಿಕ್ಕಮಗಳೂರು: ಕಡೂರು ತಾಲೂಕಿನ ಎಮ್ಮೆದೊಡ್ಡಿ ಗ್ರಾಪಂ ವ್ಯಾಪ್ತಿಯ ಹರಳಘಟ್ಟ ಗಾಂಧಿನಗರ ಗ್ರಾಮದಲ್ಲಿರುವ ದಲಿತರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಜಾಗೃತ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಮ್ಮೆದೊಡ್ಡಿ ಗ್ರಾಪಂ ವ್ಯಾಪ್ತಿಯಲ್ಲಿ ದಲಿತ ಕುಟುಂಬಗಳೇ ಇಲ್ಲ ಎಂದು ಕಡೂರು ವಿಭಾಗದ ಮೆಸ್ಕಾಂ ಅಧಿಕಾರಿಗಳು ವರದಿ ನೀಡಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಮತ್ತು ಮೆಸ್ಕಾಂ ಜಂಟಿಯಾಗಿ ಸ್ಥಳ ಪರಿಶೀಲಿಸಿ ವಸ್ತುನಿಷ್ಠ ವರದಿ ನೀಡಬೇಕು. ಅಲ್ಲದೇ ಅವರಿಂದ ಅರ್ಜಿ ಸ್ವೀಕರಿಸಿ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.
ಡಾ| ಬಿ.ಆರ್. ಅಂಬೇಡ್ಕರ್ ನಿಗಮದಿಂದ ಕೊರೆಸಿರುವ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿರುವ ಮೆಸ್ಕಾಂ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಕೊಳವೆಬಾವಿಗಳನ್ನು ಕೊರೆಸಿ ನೀರಿನ ಸೌಲಭ್ಯವನ್ನು ಕಲ್ಪಿಸಿದ್ದು, ಮೆಸ್ಕಾಂ ಗುತ್ತಿಗೆದಾರರು ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ನಿರಾಸಕ್ತಿ ತೋರಿರುವ ಜತೆಗೆ ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿರುವ ವೈಯಕ್ತಿಕವಾಗಿ ದೂರುಗಳು ಬಂದ ಕೂಡಲೇ ಗುತ್ತಿಗೆದಾರರ ಮೇಲೆ ಎಫ್‌ಐಆರ್ ದಾಖಲಿಸಿ ಅವರ ಹೆಸರನ್ನು ಕಪ್ಪು ಪಟ್ಟಿಗೆ ಸೇರಿಸುವುದಾಗಿ ಸಭೆಗೆ ತಿಳಿಸಿದರು.
ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ ನಿಗಮಗಳ ವತಿಯಿಂದ ಕೊರೆಸಿರುವ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಮೆಸ್ಕಾಂ ಹಿಂದುಳಿದಿದ್ದು, ಮೆಸ್ಕಾಂ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳು ಪ್ರತಿ 2 ವಾರಗಳಿಗೊಮ್ಮೆ ಜಂಟಿಯಾಗಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ನಗರಸಭೆಯು ಅಂಬೇಡ್ಕರ್ ಭವನ ಮಾತ್ರವಲ್ಲ ಅದರ ಸುಪರ್ದಿಗೆ ನೀಡಿರುವ ಯಾವ ಭವನಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡದೇ ಇದ್ದರೆ ಕ್ರಮ ಕೈಗೊಳ್ಳುವ ಮತ್ತು ಅಂಬೇಡ್ಕರ್ ಭವನಕ್ಕೆ ಅಗತ್ಯವಿರುವ ಪರಿಕರಗಳ ಪಟ್ಟಿಯನ್ನು ತಯಾರಿಸಬೇಕು ಎಂದು ತಿಳಿಸಿದರು.
ಕಡೂರಹಳ್ಳಿ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದ್ದು, ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಮರ್ಲೆ ಗ್ರಾಪಂ ವ್ಯಾಪ್ತಿಯಲ್ಲಿ 150 ದಲಿತ ಕುಟುಂಬಗಳಿದ್ದು, ಅವರಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಸರಿಯಾದ ರೀತಿಯಲ್ಲಿ ಕಲ್ಪಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ಸೂಚಿಸಿದರು. ಜಿಲ್ಲೆಯಲ್ಲಿ ಈವರೆಗೆ ದೌರ್ಜನ್ಯದಡಿ 98 ಪ್ರಕರಣಗಳು ದಾಖಲಾಗಿದ್ದು, 86 ಪ್ರಕರಣಗಳ 165 ಸಂತ್ರಸ್ತರಿಗೆ 133.20 ಪರಿಹಾರ ವಿತರಿಸಿದ್ದು, ಪರಿಹಾರ ವಿತರಣೆಗೆ ಬಾಕಿ ಉಳಿದಿರುವ 13 ಪ್ರಕರಣಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಉಪ ವಿಭಾಗಾಧಿಕಾರಿ ಎಚ್. ಎಲ್. ನಾಗರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.