ಕೃಷಿ ಇಲಾಖೆಗೆ ಮೀಸಲಿಟ್ಟ ಜಾಗದಲ್ಲಿ ಮೆಸ್ಕಾಂಗೆ ರಸ್ತೆ ನಿರ್ಮಾಣ : ಗ್ರಾಮಸ್ಥರಿಂದ ಪ್ರತಿಭಟನೆ
Team Udayavani, Apr 18, 2022, 7:02 PM IST
ಕೊಟ್ಟಿಗೆಹಾರ: ಬಣಕಲ್‌ನ ಮತ್ತಿಕಟ್ಟೆ ರಸ್ತೆಯಲ್ಲಿ ಕೃಷಿ ಇಲಾಖೆಗೆ ಮೀಸಲಿಟ್ಟ ಜಾಗದಲ್ಲಿ ಮೆಸ್ಕಾಂ ಇಲಾಖೆಗೆ ರಸ್ತೆ ನಿರ್ಮಾಣ ಮಾಡಿಕೊಡಲಾಗಿದೆ ಎಂದು ಬಣಕಲ್ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಬಣಕಲ್ ಗ್ರಾಮಸ್ಥ ಅಭಿಷೇಕ್, ವರ್ಷದ ಹಿಂದೆ ಬಣಕಲ್ ರೈತ ಸಂಪರ್ಕ ಕೇಂದ್ರ ನಿರ್ಮಿಸಲು ಮೆಸ್ಕಾಂ ಪಕ್ಕದಲ್ಲಿ 5 ಕುಂಟೆ ಜಾಗ ಮೀಸಲಿಟ್ಟು ಗ್ರಾಮ ಪಂಚಾಯಿತಿಯಿಂದ ರಸೋಲೇಷನ್ ಮಾಡಲಾಗಿತ್ತು. ಆದರೆ ಮೆಸ್ಕಾಂ ಕಚೇರಿಗೆ ಹೋಗಲು ಈಗಾಗಲೇ 2 ರಸ್ತೆಗಳಿವೆ. ಕಚೇರಿಯ ಮುಂಭಾಗದಲ್ಲಿ ಹಾಗೂ ಬಣಕಲ್ ಸೊಸೈಟಿಯ ಪಕ್ಕದಲ್ಲಿ ಒಂದು ರಸ್ತೆ ಮೆಸ್ಕಾಂ ಕಚೇರಿಯ ಹಿಂಭಾಗಕ್ಕೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಮೆಸ್ಕಾಂ ಕಚೇರಿಗೆ ರಸ್ತೆ ಇರುವಾಗ ಮತ್ತೇ ರಸ್ತೆ ಯಾಕೆ ಎಂದು ಗ್ರಾಮ ಪಂಚಾಯಿತಿಯಲ್ಲಿ ದೂರು ನೀಡಿದ್ದೇವೆ. ಕೃಷಿ ಇಲಾಖೆಗೆ ಮೀಸಲಿಟ್ಟ ಜಾಗದಲ್ಲಿ ರಸ್ತೆ ಮಾಡಿದರೆ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಟ್ಟಲು ಜಾಗವೇ ಇಲ್ಲದಂತಾಗುತ್ತದೆ. ರಸ್ತೆ ಬೇಕು ಅಂತ ಯಾರು ಅರ್ಜಿ ಸಲ್ಲಿಸಿದ್ದಾರೆ ಎಂದು ವಿಚಾರಿಸಿದರೆ ಅದಕ್ಕೆ ಅವರ ಉತ್ತರವಿಲ್ಲ. ಈ ಬಗ್ಗೆ ಗ್ರಾಮ ಪಂಚಾಯಿತಿಯಲ್ಲಿ ವಿಚಾರಿಸಲು ಸೋಮವಾರ ಹೋದರೆ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಜಗದೀಶ್, ನಾಗೇಶ್, ಉಮೇಶ್ ಶೆಟ್ಟಿ, ಅಶೋಕ್, ಸಚಿನ್, ರಾಜೇಶ್, ಸಂತೋಷ್ ಬಣಕಲ್ ಹೊರಟ್ಟಿ ಇದ್ದರು.
ಗ್ರಾ.ಪಂ ಉಪಾಧ್ಯಕ್ಷ ಇರ್ಫಾನ್ ಈ ಬಗ್ಗೆ ಮಾತನಾಡಿ, ಮೆಸ್ಕಾಂಗೆ ವಾಹನದಲ್ಲಿ ಹೋಗಲು ರಸ್ತೆ ಬೇಕು ಎಂದು ಸಾರ್ವಜನಿಕರು ಗ್ರಾ.ಪಂಗೆ ಅರ್ಜಿ ಸಲ್ಲಿಸಿದ್ದಾರೆ. ಅವರ ಬೇಡಿಕೆಯಂತೆ 10 ಅಡಿ ಜಾಗದಲ್ಲಿ ರಸ್ತೆ ನಿರ್ಮಿಸಲಾಗಿದೆ. ಉಳಿದ ಜಾಗವನ್ನು ಕೃಷಿ ಇಲಾಖೆಗೆ ಬಿಟ್ಟಿದ್ದೇವೆ. ಸಾರ್ವಜನಿಕರ ಅನುಕೂಲಕ್ಕಾಗಿ ಈ ರಸ್ತೆ ನಿರ್ಮಿಸಿದ್ದೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.