ಜೆಡಿಎಸ್ ಪರ ಅಲೆಯನ್ನು ಮತವಾಗಿ ಪರಿವರ್ತಿಸಿ
Team Udayavani, Aug 23, 2017, 1:56 PM IST
ಚಿಕ್ಕಮಗಳೂರು: ರಾಜ್ಯಾದ್ಯಂತ ಎದ್ದಿರುವ ಜೆಡಿಎಸ್ ಪರ ಅಲೆಯನ್ನು ಮುಂಬರುವ ಚುನಾವಣೆಯಲ್ಲಿ ಮತಗಳನ್ನಾಗಿ ಪರಿವರ್ತಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಸಚಿವ, ಸಕಲೇಶಪುರ ಶಾಸಕ ಎಚ್. ಕೆ.ಕುಮಾರಸ್ವಾಮಿ ತಿಳಿಸಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ನಡೆದ ಪಕ್ಷದ ಪ.ಜಾತಿ, ಪ.ಪಂಗಡ ವಿಭಾಗದ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಮತ್ತು ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತದಿಂದಾಗಿ ರಾಜ್ಯದ ಜನತೆ ಬೇಸತ್ತಿದ್ದಾರೆ. ಹಳ್ಳಿಹಳ್ಳಿಗಳಲ್ಲಿ ಜನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತಿದ್ದಾರೆ. ಈ ಸಂದರ್ಭವನ್ನು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಮರ್ಪಕವಾಗಿ ಬಳಸಿಕೊಂಡು ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿ ಕಾರಕ್ಕೆ ತರಲು ಮುಂದಾಗಬೇಕು ಎಂದು ಹೇಳಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ಭ್ರಷ್ಟಾಚಾರ ಮತ್ತು ದುರಾಡಳಿತದಿಂದಾಗಿ ರಾಜ್ಯಕ್ಕೆ ಈಗಾಗಲೇ ಭ್ರಷ್ಟಾಚಾರದಲ್ಲಿ ನಂ.1 ಪಟ್ಟ ದೊರೆತಿದೆ. ಜೆಡಿಎಸ್ ಅಧಿಕಾರಾವಧಿಯಲ್ಲಿ ಜಾರಿಗೆ ತಂದ ಜನಪರ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಕಾಂಗ್ರೆಸ್ ತನ್ನದೆಂದು ಬಿಂಬಿಸುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿಯವರು ಈ ಹಿಂದೆ ಕಾಲೋನಿಗಳತ್ತ ಮುಖ ಮಾಡುತ್ತಿರಲಿಲ್ಲ. ಆದರೆ ಇದೀಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಲಿತರ ಮನೆಮನೆಗಳಿಗೆ ತೆರಳಿ ಉಪಹಾರ ಸೇವಿಸುವ ನಾಟಕವಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ಪ.ಜಾತಿ ಮತ್ತು ವರ್ಗದವರು ಇದನ್ನು ಅರ್ಥ ಮಾಡಿಕೊಳ್ಳಬೇಕು, ಸಂಘಟಿತರಾಗಿ ಜೆಡಿಎಸ್ ಪರ ನಿಲ್ಲಬೇಕು ಎಂದು ಮನವಿ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಬಿ.ಬಿ.ನಿಂಗಯ್ಯ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಕೋಲಾರ ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪಂಗಡದ ರಾಜ್ಯ ಸಮಾವೇಶವನ್ನು ಮುಂದಿನ ತಿಂಗಳು ಹಮ್ಮಿಕೊಳ್ಳಲಿದ್ದು ಅದಕ್ಕೆ ಪೂರ್ವಭಾವಿಯಾಗಿ ಈ ಸಭೆ ಏರ್ಪಡಿಸಲಾಗಿದೆ
ಎಂದು ತಿಳಿಸಿದರು. ಪ.ಜಾತಿ, ಪ.ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ಆರ್.ದೇವಿಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾಧ್ಯಕ್ಷ ರಂಜನ್‌ಅಜಿತ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಚ್.ದೇವರಾಜ್, ಮಾಜಿ ಶಾಸಕ ಎಸ್.ಎಲ್.ಧರ್ಮೇಗೌಡ, ಪಕ್ಷದ ಮುಖಂಡರಾದ ಮಂಜಪ್ಪ, ಎಂ.ಡಿ.ರಮೇಶ್, ಮುನಿವೆಂಕಟಪ್ಪ, ಎಚ್.ಜಿ.ವೆಂಕಟೇಶ್, ಹಳೇಹಟ್ಟಿ ಆನಂದ ನಾಯ್ಕ, ಮಹೇಶ್, ಚಿದಾನಂದ್,
ಜಯರಾಜ್ ಅರಸ್, ಡಿ.ಜೆ.ಸುರೇಶ್, ಜಮೀಲ್ ಅಹಮದ್, ನಿಖೀಲ್ ಚಕ್ರವರ್ತಿ, ಸುಮಾ ನಾಗೇಶ್, ಜ್ಯೋತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.