ತಣ್ಣಗಾದ ಕಾಫಿ ಉದ್ಯಮ: ಕೆ.ಜೆ. ಜಾರ್ಜ್‌


Team Udayavani, Jan 16, 2019, 9:36 AM IST

chikk-1.jpg

ಚಿಕ್ಕಮಗಳೂರು: ಕಾಫಿ ಉದ್ಯಮ ಇಂದು ತೀವ್ರ ಸಂಕಷ್ಟದಲ್ಲಿದೆ. ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪಕ್ಷಾತೀತವಾಗಿ ಕೆಲಸ ಮಾಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಅಭಿಪ್ರಾಯಪಟ್ಟರು.

ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಮಂಗಳವಾರ ಕರ್ನಾಟಕ ಬೆಳೆಗಾರರ ಒಕ್ಕೂಟದಿಂದ ಆಯೋಜಿಸಿದ್ದ ಕಾಫಿ ಸಮ್ಮೇಳನ ಹಾಗೂ ಕಾಫಿ ಕೃಷಿ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಕಾಫಿ ಬೆಳೆಗಾರರ ಪರವಾಗಿದೆ. ಕಾಫಿ ಬೆಳೆಗಾರರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸೋಣ. ಪಕ್ಷಾತೀತವಾಗಿ ಕೇಂದ್ರ ಸರ್ಕಾರದ ಬಳಿ ನಿಯೋಗ ತೆರಳಿ ವಾಣಿಜ್ಯ ಸಚಿವ ಸುರೇಶ್‌ ಪ್ರಭು ಹಾಗೂ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರಿಗೆ ಸಮಸ್ಯೆ ಮನವರಿಕೆ ಮಾಡಲಾಗುವುದು. ತೀವ್ರ ಸಂಕಷ್ಟದಲ್ಲಿರುವ ಸಣ್ಣ ಬೆಳೆಗಾರರಿಗೆ ಹೆಚ್ಚು ನೆರವು ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕಿದೆ ಎಂದರು.

ಜಿಲ್ಲೆಯೊಂದಿಗೆ ತಮಗೆ 1969ರಿಂದಲೂ ಒಡನಾಟವಿದೆ. ಕಾಫಿ ಬೆಳೆಗಾರ ಎಂದು ಹೇಳಿಕೊಳ್ಳುವುದಕ್ಕೆ ನನಗೂ ಹೆಮ್ಮೆ ಇದೆ. ಸಮಾಜದಲ್ಲಿ ಕಾಫಿ ಬೆಳೆಗಾರರಿಗೆ ಸಾಕಷ್ಟು ಗೌರವವಿದೆ. ವಿಭಕ್ತ ಕುಟುಂಬಗಳಿಂದ ಕಾಫಿ ಹಿಡುವಳಿಗಳೂ ಸಣ್ಣದಾಗಿವೆ. ಇಂತಹ ಸಂದರ್ಭದಲ್ಲಿ ಕಾಫಿ ಬೆಳೆಗಾರರೂ ಬದಲಾವಣೆಗೆ ಮಾಡಿಕೊಳ್ಳಬೇಕು. ಕಾಫಿ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ನಿಯೋಗ ತೆರಳಿ ಚರ್ಚಿಸುವ ಅಗತ್ಯವಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಉಪ ಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಮಾತನಾಡಿ, ಕಾಫಿ ಬೆಳೆಗಾರರ ಸಮಸ್ಯೆಗೆ ಕೊನೆಯೇ ಇಲ್ಲವಾಗಿದೆ. ಸಮಸ್ಯೆ ಬಗ್ಗೆ ಚರ್ಚಿಸುತ್ತ ಕೂರುವುದಕ್ಕಿಂತ ಪರಿಹಾರ ಕಂಡುಕೊಳ್ಳುವುದು ಮುಖ್ಯ. ತಾವು ಕೂಡ ದಶಕದ ಹಿಂದೆ ಕಾಫಿ ತೋಟ ಮಾಡಿ ನಷ್ಟವಾಗಿದ್ದರಿಂದ ಅದನ್ನು ಮಾರಾಟ ಮಾಡಿದ್ದು, ಬೆಳೆಗಾರರ ಸಂಕಷ್ಟದ ಅರಿವಿದೆ. ಸಂಬಂಧಿಸಿದವರ ಗಮನಕ್ಕೆ ತಂದು ಹಂತ ಹಂತವಾಗಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.

ಶಾಸಕ ಸಿ.ಟಿ.ರವಿ ಮಾತನಾಡಿ, ಕಾಫಿ ಬೆಳೆಗಾರರು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಪ್ರಯತ್ನಿಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ಸಿಕ್ಕುತ್ತದೆ. ಕಾಫಿ ಬರೀ ಉದ್ಯಮವಲ್ಲ. ಅದೊಂದು ಸಂಸ್ಕೃತಿ. ಈಗಾಗಲೇ ನಾವು ಅವಸಾನದ ಅಂಚಿನಲ್ಲಿದ್ದೇವೆ. ಸಮಸ್ಯೆಗಳ ಬಗ್ಗೆ ವಾಸ್ತವಿಕ ನೆಲೆಯಲ್ಲಿ ಚಿಂತಿಸಿ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೇಳಿದರು.

ಕಾಫಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಸಲು ತಾಂತ್ರಿಕ ತೊಡಕಿದೆ. ಪಡಿತರ ಪದಾರ್ಥಗಳ ಪಟ್ಟಿಯಲ್ಲಿ ಕಾಫಿ ಇಲ್ಲದ ಕಾರಣ ಕನಿಷ್ಠ ಬೆಂಬಲ ಬೆಲೆ ನೀಡಲು ಆಗುತ್ತಿಲ್ಲ. ಈ ತಾಂತ್ರಿಕ ತೊಡಕು ಸರಿಪಡಿಸಬೇಕಿದೆ. ಕಾಫಿ ಸಮಸ್ಯೆ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಒಂದು ತಿಂಗಳೊಳಗೆ ವರದಿ ತಯಾರಿಸಿ ಸಲ್ಲಿಸಬೇಕು. ಬಜೆಟ್ ಪೂರ್ವದಲ್ಲಿ ವರದಿ ನೀಡಿದರೆ ಬಜೆಟ್ ಅಧಿವೇಶನದಲ್ಲಿ ಒಂದಷ್ಟು ಪರಿಹಾರ ಕಂಡುಕೊಳ್ಳಬಹುದು. ಜೊತೆಗೆ ಎಲ್ಲ ಪಕ್ಷಗಳು ಚುನಾವಣೆ ತಯಾರಿಯಲ್ಲಿದ್ದು, ಪ್ರಣಾಳಿಕೆಯಲ್ಲಿ ಕಾಫಿ ಸಮಸ್ಯೆ ನಿವಾರಣೆಯ ವಿಷಯವನ್ನೂ ಸೇರಿಸಿ ಪಕ್ಷಗಳನ್ನು ಕಮಿಟ್ ಮಾಡಿಸಬಹುದು ಎಂದರು.

ಕಾಫಿ ಬೆಳೆಗಾರರು 15-20 ಲಕ್ಷ ಕಾರ್ಮಿಕರಿಗೆ ಉದ್ಯೋಗ ಕೊಟ್ಟಿದ್ದಾರೆ. ಕಾಫಿ ಉದ್ಯಮ ನಾಶವಾದರೆ ಇಷ್ಟು ದೊಡ್ಡ ಪ್ರಮಾಣದ ಉದ್ಯೋಗ ಕೊಡಲು ಸರ್ಕಾರಗಳಿಗೂ ಸಾಧ್ಯವಿಲ್ಲ. ಚಿಕೋರಿಯನ್ನು ಪ್ರತ್ಯೇಕ ಮಾರಾಟ ಮಾಡುವ ವ್ಯವಸ್ಥೆ ಜಾರಿಗೆ ಬಂದರೆ ಕಾಫಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಕಾಫಿ ಬೆಳೆಗಾರರು ವಿನಾಶದ ಹಂತಕ್ಕೆ ಬಂದರೂ ಇಮೇಜ್‌ ಕಡಿಮೆ ಆಗಿಲ್ಲ. ಒಳಗೆ ಟೊಳ್ಳಿದ್ದರೂ ಹೊರಗೆ ಥಳಕು ಬಳಕಿನಲ್ಲಿದ್ದೇವೆ. ಕಾಫಿ ಬೆಳೆಗಾರರಿಗೆ ಸೊಕ್ಕಿದೆ ಎಂಬ ಅಭಿಪ್ರಾಯ ಹೊರಜಗತ್ತಿನಲ್ಲಿದೆ. ಆದರೆ, ನಮ್ಮ ಸೊಕ್ಕು ಇಳಿದು ಬಹಳ ವರ್ಷಗಳೇ ಕಳೆದಿವೆ. ಅಡಕೆ ಬೆಳೆಗಾರರಿಗೆ ಸಮಸ್ಯೆ ಎದುರಾದರೆ ಹೋರಾಟಕ್ಕೆ 8-10 ಜಿಲ್ಲೆಗಳಿವೆ. ಆದರೆ, ಕಾಫಿ ಬೆಳೆಗಾರರಿಗೆ ಇರುವುದು 3 ಜಿಲ್ಲೆ. ಬೆಳೆಗಾರರನ್ನೂ ಸಂಘಟಿಸುವುದೂ ಕಷ್ಟ ಎಂದರು.

ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಕಾಫಿ ಬೆಳೆಗಾರರು ಸಾಕಷ್ಟು ಏಳುಬೀಳು ಕಂಡಿದ್ದಾರೆ. ಸಂಕಷ್ಟದಲ್ಲಿದ್ದ ಸಂದರ್ಭ ಸರ್ಕಾರಗಳೂ ಸ್ಪಂದಿಸಿದ್ದನ್ನು ಮರೆಯಬಾರದು. ಬೆಳೆಗಾರರ ಸಂಘ ಬಲಿಷ್ಠವಾಗಿದ್ದರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಕ್ಯಾಂಪ್ಕೊ ಅಧ್ಯಕ್ಷ ಕೊಂಕೋಡಿ ಪದ್ಮನಾಭ, ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಮಾತನಾಡಿದರು. ಕೆಜಿಎಫ್‌ ಅಧ್ಯಕ್ಷ ಬಿ.ಎಸ್‌.ಜಯರಾಂ ಪ್ರಾಸ್ತಾವಿಕ ಮಾತನಾಡಿದರು. ಹಿಲ್‌ಬೀನ್‌ ಹಾಗೂ ಎಸ್ಟೇಟ್ ಮಂಕೀಸ್‌ ಬ್ರ್ಯಾಂಡ್‌ನ‌ ಕಾಫಿ ಪುಡಿ ಬಿಡುಗಡೆ ಮಾಡಲಾಯಿತು. ಶಾಸಕ ಸಿ.ಟಿ.ರವಿ ಬೆಳೆಗಾರ ಸ್ನೇಹಿ ವೆಬ್‌ಸೈಟ್‌ಗೆ ಚಾಲನೆ ನೀಡಿದರು. ಕಾಫಿ ಉತ್ಪನ್ನಗಳು, ಯಂತ್ರೋಪಕರಣಗಳು ಸೇರಿದಂತೆ ಕಾಫಿ ಉದ್ಯಮಕ್ಕೆ ಪೂರಕ ವಸ್ತುಪ್ರದರ್ಶನವನ್ನು ಸಚಿವ ಕೆ.ಜೆ.ಜಾರ್ಜ್‌ ಉದ್ಘಾಟಿಸಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌, ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಾಜಿ ಶಾಸಕರಾದ ಡಿ.ಎನ್‌.ಜೀವರಾಜ್‌, ಎಚ್.ಎಂ.ವಿಶ್ವನಾಥ್‌, ಬಿ.ಬಿ.ನಿಂಗಯ್ಯ, ಐ.ಬಿ.ಶಂಕರ್‌, ಮಾಜಿ ಸಚಿವೆ ಮೋಟಮ್ಮ, ಕೇಂದ್ರದ ಮಾಜಿ ಸಚಿವೆ ಡಿ.ಕೆ.ತಾರಾದೇವಿ, ಡಾ| ಬಿ.ಎಲ್‌.ಶಂಕರ್‌, ಎಂ.ಎಸ್‌.ಭೋಜೇಗೌಡ, ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯ ಬೆಳೆಗಾರ ಸಂಘಟನೆಗಳ ಮುಖಂಡರು ಹಾಜರಿದ್ದರು.

ಕಳೆದ ಚುನಾವಣೆಯಲ್ಲಿ ನನ್ನ ವಿರುದ್ಧ ರಾಜಕೀಯ ಮಾಡಲಾಯಿತು. ಬೆಳೆಗಾರರು ರಾಜಕಾರಣ ಮಾಡುವುದು ತಪ್ಪಲ್ಲ. ಆದರೆ, ಸಂಘಟನೆಯೇ ರಾಜಕಾರಣ ಮಾಡಬಾರದು. ಇದರಿಂದ ಸಂಘಟನೆಯ ಮೂಲ ಉದ್ದೇಶಕ್ಕೆ ಧಕ್ಕೆಯಾಗುತ್ತದೆ. ನಾನು ಯಾವತ್ತೂ ಕಾಫಿ ಉದ್ಯಮ ಅಥವಾ ಬೆಳೆಗಾರರ ವಿರುದ್ಧ ನಡೆದುಕೊಂಡಿಲ್ಲ. ಕಾಫಿ ಸಮಸ್ಯೆ ಬಂದಾಗ ಕೈಜೋಡಿಸಿ ಹೋರಾಟ ಮಾಡಿದ್ದೇನೆ. ಆದರೆ, ನನ್ನ ವಿರುದ್ಧ ರಾಜಕೀಯ ಮಾಡಿದ್ದು ನನಗೆ ನೋವುಂಟು ಮಾಡಿದೆ • ಸಿ.ಟಿ.ರವಿ, ಶಾಸಕ

ಕಾಫಿ ಬೆಳೆಗಾರರು ಒತ್ತುವರಿ ಮಾಡಿರುವ 10 ಎಕರೆವರೆಗಿನ ಜಾಗವನ್ನು ಗುತ್ತಿಗೆ ಆಧಾರದಲ್ಲಿ ಕೊಡುವ ಬಗ್ಗೆ ಹಿಂದಿನ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದನ್ನು ಜಾರಿಗೊಳಿಸಲು ಈಗಿನ ಸಮ್ಮಿಶ್ರ ಸರ್ಕಾರ ಬದ್ಧವಾಗಿದೆ. ಜಿಲ್ಲೆಯ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಒತ್ತಡ ಹಾಕಿದರೆ ಕೆಲಸಗಳು ಶೀಘ್ರವಾಗಿ ಆಗುತ್ತವೆ. • ಕೆ.ಜೆ. ಜಾರ್ಜ್‌, ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.