ಮುಂಬೈನಿಂದ ಬಂದಿದ್ದ ಇಬ್ಬರಿಗೆ ಕೋವಿಡ್
Team Udayavani, Jun 22, 2020, 8:41 AM IST
ಬಾಳೆಹೊನ್ನೂರು: ಮುಂಬಯಿನಿಂದ ಜೂನ್ 14 ರಂದು ಪಟ್ಟಣಕ್ಕೆ ಬಂದಿದ್ದ ಇಬ್ಬರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು 5 ಜನರ ತಂಡ ಬಂದಿದ್ದು, ಅವರಲ್ಲಿ 18 ಮತ್ತು 50 ವರ್ಷದ ಇಬ್ಬರಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಉಳಿದ ಮೂವರನ್ನು ಪಟ್ಟಣದ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ.
ದ್ವೀತಿಯ ಹಂತದ ಸಂಪರ್ಕದಲ್ಲಿದ್ದ ಕೋವಿಡ್ ವಾರಿಯರ್ಸ್ ಗಳನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಸೋಂಕಿತರು ಉಳಿದಿದ್ದ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುವುದೆಂದು ತಿಳಿದು ಬಂದಿದೆ.
ಸೋಂಕಿತ ವ್ಯಕ್ತಿಗಳ ಕಾಲ್ ಹಿಸ್ಟರಿ ಬಗ್ಗೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿದ್ದು, ಆ ದಿನ ಬಸ್ಸಿನಲ್ಲಿದ್ದ ಪ್ರಯಾಣಿಕರ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೆ ಆ ವ್ಯಕ್ತಿಯನ್ನು ಮನೆಯಿಂದ ಕ್ವಾರಂಟೈನ್ ಕೇಂದ್ರಕ್ಕೆ ಕರೆದೊಯ್ದ ಸಂಬಂದಿಯೊಬ್ಬರಿಗೆ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್ಕೌಂಟರ್ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.