ಪೊಲೀಸ್ ಪೇದೆಗೆ ಕೋವಿಡ್ ಸೋಂಕು ದೃಢ
Team Udayavani, Jun 21, 2020, 8:45 AM IST
ಬೀರೂರು: ತರೀಕೆರೆ ಡಿವೈಎಸ್‌ಪಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಮುಖ್ಯಪೇದೆಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರು ವಾಸಿಸುತ್ತಿದ್ದ ಬೀರೂರು ನೆಹರು ನಗರ 4ನೇ ತಿರುವು ರಸ್ತೆಯನ್ನು ಶನಿವಾರ ಸೀಲ್ ಡೌನ್ ಮಾಡಲಾಗಿದೆ. ಇಲಾಖೆ ವತಿಯಿಂದ ನಡೆಸಲಾದ ರ್‍ಯಾಂಡಮ್ ಟೆಸ್ಟ್‌ನಲ್ಲಿ ಪಾಸಿಟಿವ್ ಕಂಡುಬಂದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.
ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕು ವೈದ್ಯಾಧಿಕಾರಿಗಳು, ಪೊಲೀಸ್, ಪುರಸಭೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಸೋಂಕಿತ ವಾಸವಿದ್ದ ಮನೆಯ ಬಳಿ ತೆರಳಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ತಾಯಿ, ಪತ್ನಿ ಮತ್ತು ಮಗುವನ್ನು ಮನೆಯಿಂದ ಆಚೆ ಬಾರದಂತೆ ಕ್ವಾರಂಟೈನ್ ಮಾಡಿದರು. ಹಾಲಪ್ಪ ಬಡಾವಣೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ತರೀಕೆರೆಯ ಡಿವೈಎಸ್‌ಪಿ ಕಚೇರಿಯಲ್ಲಿ ಕರ್ತವ್ಯನಿರತ ಪೇದೆಯ ಪತ್ನಿಯೂ ಕೂಡ ಪೊಲೀಸ್ ಪೇದೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.