100 ಕೋಟಿ ಡೋಸ್ ಐತಿಹಾಸಿಕ ಮೈಲಿಗಲ್ಲು
Team Udayavani, Oct 24, 2021, 2:08 PM IST
ಚಿಕ್ಕಮಗಳೂರು: ಕೇಂದ್ರ ಸರ್ಕಾರ ದೇಶದಲ್ಲಿ100 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನುಉಚಿತವಾಗಿ ವಿತರಿಸುವ ಮೂಲಕ ಐತಿಹಾಸಿಕಮೈಲಿಗಲ್ಲು ಸ್ಥಾಪಿಸಿದೆ ಎಂದು ವಿಧಾನ ಪರಿಷತ್‌ಉಪಸಭಾಪತಿ ಎಂ.ಕೆ.ಪ್ರಾಣೇಶ್ ತಿಳಿಸಿದರು.
ನಗರದ ಬೇಲೂರು ರಸ್ತೆ ಜೂನಿಯರ್‌ಕಾಲೇಜು ಆವರಣದಲ್ಲಿ ಶನಿವಾರಭಾರತ 100 ಕೋಟಿ ಲಸಿಕೆ ವಿತರಣೆಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿಯುವಮೋರ್ಚಾದಿಂದ ಕಾರ್ಯಕರ್ತರುಮತ್ತು ಕಾಲೇಜು ವಿದ್ಯಾರ್ಥಿಗಳು 100 ಸಂಖ್ಯೆರಚಿಸಿ ವಿಜಯೋತ್ಸವ ಆಚರಣೆಯಲ್ಲಿ ಅವರು ಮಾತನಾಡಿದರು.
ದೇಶದ ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕೆಂಬ ಉದ್ದೇಶದಿಂದಪ್ರಧಾನಮಂತ್ರಿ ನರೇಂದ್ರ ಮೋದಿ ಅವರುಬಡವರು, ಶ್ರೀಮಂತರು ಎಂಬ ಭೇದವಿಲ್ಲದೆಪ್ರತಿಯೊಬ್ಬರಿಗೂ ಲಸಿಕೆ ಲಭ್ಯವಾಗುವಂತೆಮಾಡಿದರು.
ಈ ಹಿನ್ನೆಲೆಯಲ್ಲಿ ಇಂದು ದೇಶದಲ್ಲಿ100 ಕೋಟಿ ಲಸಿಕೆ ವಿತರಿಸಲಾಗಿದ್ದು ದೇಶಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ ಎಂದರು.
ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪಹರವಿನಂಗಡಿ ಮಾತನಾಡಿ, ಪ್ರಧಾನಮಂತ್ರಿನರೇಂದ್ರ ಮೋದಿ ಅವರು ಹಂತ ಹಂತವಾಗಿಪ್ರತಿಯೊಬ್ಬರಿಗೂ ಲಸಿಕೆ ಸಿಗುವಂತೆ ಮಾಡಿದ್ದು,ಇಂದು 100 ಕೋಟಿ ಜನರಿಗೆ ಲಸಿಕೆ ವಿತರಿಸಿವಿಶ್ವದಲ್ಲೇ ಲಸಿಕೆ ವಿತರಣೆಯಲ್ಲಿ ದೊಡ್ಡ ಸಾಧನೆಮಾಡಿದೆ ಎಂದು ಹೇಳಿದರು.
ಲಸಿಕೆ ವಿತರಣೆಯಲ್ಲಿ ವೈದ್ಯರು,ಶುಶ್ರೂಷಕರು, ಆಶಾ ಕಾರ್ಯಕರ್ತರು,ಜನಪ್ರತಿನಿ ಗಳು, ಸ್ವಯಂ ಸೇವಕರು, ಪಕ್ಷದಕಾರ್ಯಕರ್ತರು ನಿರಂತರವಾಗಿ ಶ್ರಮಿಸಿದ್ದು,ಅವರೆಲ್ಲರ ಪರಿಶ್ರಮದಿಂದ ದೇಶ ಐತಿಹಾಸಿಕಮೈಲಿಗಲ್ಲು ಸಾ ಧಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮುರಡಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿದೇವರಾಜ್ ಶೆಟ್ಟಿ, ಬಿಜೆಪಿ ಜಿಲ್ಲಾ ವಕ್ತಾರ ವರಸಿದ್ಧಿವೇಣುಗೋಪಾಲ್, ಯುವ ಮೋರ್ಚಾರಾಜ್ಯ ಕಾರ್ಯಕಾರಣಿ ಸದಸ್ಯ ಧನಿಕ್,ಮೂಡಿಗೆರೆ ಯುವ ಮೋರ್ಚಾ ಜಿಲ್ಲಾ ಪ್ರಧಾನಕಾರ್ಯದರ್ಶಿ ಸಂತೋಷ್ ಕೋಟ್ಯಾನ್,ಗ್ರಾಮಾಂತರ ಮಂಡಲ ಯುವ ಮೋರ್ಚಾಅಧ್ಯಕ್ಷರಾದ ಯತೀಶ್ ಇಂದಾವರ, ಜಿಲ್ಲಾಮಾದ್ಯಮ ಪ್ರಮುಖ್ ಸುಧಿಧೀರ್, ಆಶ್ರಯಸಮಿತಿ ಸದಸ್ಯ ರಾಜೇಶ್ ಕಲೊªಡ್ಡಿ, ಮಂಡಲಉಪಾಧ್ಯಕ್ಷರಾದ ದಿನೇಶ್ ಕೋಟೆ, ಜಿಲ್ಲಾಒಬಿಸಿ ಪ್ರಧಾನ ಕಾರ್ಯದರ್ಶಿ ಜಯರಾಮ್‌ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
MUST WATCH
ಹೊಸ ಸೇರ್ಪಡೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.