ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವು
Team Udayavani, May 18, 2022, 1:03 AM IST
ಮೂಡಿಗೆರೆ: ಪಟ್ಟಣದ ಹೊರವಲಯದಲ್ಲಿರುವ ಕಡೆಮಾಡ್ಕಲ್ ಗ್ರಾಮದ ನಿವಾಸಿ ಅವಿನಾಶ್ (29) ಸೋಮವಾರ ರಾತ್ರಿ ತನ್ನ ಮನೆಯಲ್ಲಿ ಮಲಗಿದ್ದಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮೃತಪಟ್ಟಿದ್ದಾರೆ.
ಅವಿನಾಶ್ ಕೂಲಿ ಕೆಲಸ ಮಾಡಿಕೊಂಡಿದ್ದು, ಕಳೆದ 5 ವರ್ಷಗಳ ಹಿಂದೆ ಕಸಬಾ ಹೋಬಳಿಯ ಇಂದರವಳ್ಳಿ ಗ್ರಾಮದ ಭಾಗ್ಯಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. 12 ದಿನದ ಹಿಂದೆ ಪತ್ನಿ ಭಾಗ್ಯಾ ಮತ್ತು ಮಕ್ಕಳು ತವರು ಮನೆಗೆ ತೆರಳಿದ್ದು ಮನೆಯಲ್ಲಿ ಅವಿನಾಶ್ ಒಬ್ಬರೇ ಇದ್ದರು ಎಂದು ತಿಳಿದುಬಂದಿದೆ.
ಅವಿನಾಶ್ ಸೋಮವಾರ ಎಂದಿನಂತೆ ಕೆಲಸ ಮಾಡಿಕೊಂಡು ರಾತ್ರಿ ಮನೆಗೆ ಬಂದು ಮಲಗಿದ್ದಾರೆ. ಪಕ್ಕದಲ್ಲೇ ಪೆಟ್ರೋಲ್ ಚಾಲಿತ ಕಳೆ ಕಟ್ಟುವ ಮಾಡುವ ಯಂತ್ರವಿತ್ತು. ಅವಿನಾಶ್‌ಗೆ ಸಿಗರೇಟ್ ಸೇದುವ ಚಟವಿತ್ತು. ಬಹುಶಃ ಇದರಿಂದಲೇ ಯಂತ್ರಕ್ಕೆ ಆಕಸ್ಮಿಕ ಬೆಂಕಿ ತಗಲಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಮಂಗಳವಾರ ಬೆಳಗ್ಗೆ ಅವಿನಾಶ್ ಮನೆಯಲ್ಲಿ ಬೆಂಕಿ ಹೊಗೆ ಕಾಣಿಸಿಕೊಂಡಿದ್ದನ್ನು ಗಮನಿಸಿದ ಸ್ಥಳೀಯರು, ಹತ್ತಿರ ಹೋಗಿ ವೀಕ್ಷಿಸಿದಾಗ ಅವಿನಾಶ್ ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿರುವುದು ತಿಳಿದುಬಂದಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರ: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಸಾಗರ: ಪರೀಕ್ಷೆ ಫಲಿತಾಂಶಕ್ಕೆ ಹೆದರಿ ಎಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಇಲ್ಲಿನ ಜಂಬಗಾರು ನಿವಾಸಿ ರಕ್ಷಿತಾ (16) ಆತ್ಮಹತ್ಯೆಗೈದವರು.
ಶಿವಲಿಂಗಪ್ಪ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ರಕ್ಷಿತಾ ಸೋಮವಾರ ಬೆಳಗ್ಗೆ ತಿಂಡಿ ತಿಂದು ಶಾಲೆಗೆ ಹೋಗುವುದಾಗಿ ತಿಳಿಸಿ ಹೋಗಿದ್ದಳು. ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಮಂಗಳವಾರ ಬೆಳಗ್ಗೆ ಗಣಪತಿ ಕೆರೆಯಲ್ಲಿ ರಕ್ಷಿತಾ ಮೃತದೇಹ ಪತ್ತೆಯಾಗಿದ್ದು, ಸೋಮವಾರ ರಾತ್ರಿಯೇ ರಕ್ಷಿತಾ ಕೆರೆಗೆ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ.
ರಕ್ಷಿತಾ ಮುಂಬರುವ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ತೀವ್ರವಾಗಿ ಆತಂಕಗೊಂಡಿದ್ದಳು. ಮನೆಯಲ್ಲಿ ಸಹ ಅಪ್ಪ-ಅಮ್ಮನ ಬಳಿ ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂದು ಹೇಳಿಕೊಂಡಿದ್ದಳು. ಫಲಿತಾಂಶಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಹೇಮಾವತಿ ನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.