Hijab issue; ಸಿದ್ದರಾಮಯ್ಯರಿಂದ ಕೋಮುವಾದ ಬಿತ್ತುವ ಕೆಲಸ: ಸಿ.ಟಿ ರವಿ ಟೀಕೆ

Team Udayavani, Dec 23, 2023, 1:29 PM IST

ಸಿದ್ದರಾಮಯ್ಯರಿಂದ ಕೋಮುವಾದ ಬಿತ್ತುವ ಕೆಲಸ: ಸಿ.ಟಿ ರವಿ ಟೀಕೆ

ಚಿಕ್ಕಮಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರುವ ಕುರಿತು ಸಿ.ಎಂ ಸಿದ್ದರಾಮಯ್ಯ ಹೇಳಿಕೆ ವಿದ್ಯಾರ್ಥಿಗಳಲ್ಲಿ ಕೋಮುವಾದ ಬಿತ್ತುವ ಹುನ್ನಾರವಾಗಿದ್ದು, ಮತ ಓಲೈಕೆ ಕೋಮುವಾದದ ನಿರ್ಣಯ ಕೈಗೊಂಡಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ ರವಿ ಟೀಕಿಸಿದ್ದಾರೆ .

ಬಿಜೆಪಿ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ನಿಷೇಧ ಮಾಡಿರಲಿಲ್ಲ, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಇರಬೇಕು ಎಂದು 1964ರ ಶಿಕ್ಷಣ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ರೂಪಿಸಿದ ನಂತರದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ. ಆಯಾ ಶಾಲಾ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಯಾವ ರೀತಿಯ ವಸ್ತ್ರಗಳನ್ನು ವಿನ್ಯಾಸಗೊಳಿಸಬೇಕು ಎಂದು ನಿರ್ಣಯ ಮಾಡಬೇಕು. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶಾಲಾ ಅಭಿವೃದ್ಧಿ ಸಂಸ್ಥೆ ಅವರು ಯಾವ ರೀತಿಯ ವಸ್ತ್ರವಿನ್ಯಾಸವನ್ನು ನಿರ್ಣಯ ಮಾಡಬೇಕು ಎಂದು ಸ್ಪಷ್ಟವಾಗಿ ಕಾಯ್ದೆಯಲ್ಲಿ ಹೇಳಿದೆ ಎಂದರು.

ವಿದ್ಯಾರ್ಥಿಗಳ ಮನಸ್ಸಿನಲ್ಲಿ ಬಡವ ಶ್ರೀಮಂತ ಎಂಬ ಭೇದಭಾವ ಬರಬಾರದು. ನಾವೆಲ್ಲರೂ ಒಂದೇ ಎಂಬ ಮನೋಭಾವ ಅವರಲ್ಲಿ ಮೂಡಬೇಕು ಎಂಬ ಉದ್ದೇಶದಿಂದ ಈ ಯೋಜನೆಯ ಜಾರಿ ಮಾಡಿದ್ದಾರೆ. ಹಿಜಾಬ್ ಎಂಬುದು ಸಮವಸ್ತ್ರದ ಭಾಗವಾಗಿದ್ದಲ್ಲಿ ಅದನ್ನ ಧರಿಸಬಹುದು. ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಣಯ ವಸ್ತ್ರ ಇರಬೇಕು ಎಂಬ ಶಿಕ್ಷಣ ತಜ್ಞರ ಅಪೇಕ್ಷೆಗೆ ವಿರುದ್ಧವಾಗುತ್ತದೆ ಎಂದು ಹೇಳಿದರು.

ಮತದ ಓಲೈಕೆಗೆ, ಓಟಿನ ಆಸೆಗಾಗಿ ಕೋಮುವಾದ ನಿರ್ಣಯವನ್ನು ತೆಗೆದು ಕೊಂಡರೆ, ಇನ್ನೊಬ್ಬರು ಮತ್ತೊಂದು ಬಣ್ಣದ ಶಾಲನ್ನು, ಟೋಪಿ ಧರಿಸಿ ಬರುವುದಕ್ಕೆ ಪ್ರೇರಣೆ ನೀಡಿದಂತಾಗುತ್ತದೆ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮುವಾದದ ಭಾವನೆ ಹೆಚ್ಚಿಸಿದಂತಾಗುತ್ತದೆ ಅಲ್ಲದೆ ವಿದ್ಯಾರ್ಥಿಗಳಲ್ಲಿ ಜಾತಿ ಎಂಬ ವಿಷ ಬೀಜವನ್ನು ಬಿತ್ತಿದಂತಾಗುತ್ತದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜವಾದಿ ಹಿನ್ನೆಲೆಯಿಂದ ಬಂದವನು ಎಂದು  ಹೇಳುತ್ತಿರುತ್ತಾರೆ, 220ಕ್ಕೂ ಹೆಚ್ಚು ತಾಲೂಕುಗಳು ಬರದಿಂದ ತತ್ತರಿಸಿವೆ, ಎಷ್ಟೋ ತಾಲೂಕುಗಳಲ್ಲಿ ಕುಡಿಯುವ ನೀರಿಲ್ಲ ಇಂತಹ ಸಂದರ್ಭದಲ್ಲಿ ಸಮಾಜವಾದಿ ಹಿನ್ನೆಲೆಯ, ಕುರಿ ಮೇಯಿಸಿದ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿಗಳು ಐಷಾರಾಮಿ ಖಾಸಗಿ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಮಾಡುತ್ತಾರೆ. ಐಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡಿದ್ದು ಅಷ್ಟೇ ಅಲ್ಲ, ಸಂಕಷ್ಟದಲ್ಲಿರುವ ರೈತರಿಗೆ, ಇನ್ನಷ್ಟು ಸಂಕಷ್ಟ ಬರಲಿ ಎಂಬ ರೀತಿಯಲ್ಲಿ ಅವರ ಸಚಿವ ಸಂಪುಟದ ಸಚಿವರು ವಿಡಿಯೋ ಮಾಡಿ ನಮ್ಮ ವಿಮಾನ ಹೇಗಿದೆ ಎಂದು ತೋರಿಸುತ್ತಾರೆ. ಇದು ಸಂಭ್ರಮ ಪಡುವಂತಹ ಕಾಲವೇ? ಎಂದು ಪ್ರಶ್ನೆ ಮಾಡಿದರು.

ಟಾಪ್ ನ್ಯೂಸ್

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

12-

Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.