432 ಮರಗಳ ಹನನಕ್ಕೆ ಒಪ್ಪಿಗೆ
Team Udayavani, Jun 16, 2020, 12:30 PM IST
ಮೂಡಿಗೆರೆ: ಮೂಡಿಗೆರೆ ಅರಣ್ಯ ಇಲಾಖೆಯಲ್ಲಿ ರಸ್ತೆ ಅಗಲೀಕರಣ ಕುರಿತು ಸಾರ್ವಜನಿಕರ ಸಭೆ ನಡೆಸಲಾಯಿತು.
ಮೂಡಿಗೆರೆ: ಪಟ್ಟಣದ ಹೊರ ವಲಯದ ಹ್ಯಾಂಡ್ ಪೋಸ್ಟ್‌ನಿಂದ ಕೊಟ್ಟಿಗೆಹಾರದವರೆಗೆ ರಸ್ತೆ ಅಗಲೀಕರಣಕ್ಕಾಗಿ ತುಮಕೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ರಸ್ತೆ ಬದಿಯಲ್ಲಿರುವ 432 ಮರಗಳನ್ನು ಕಡಿತಲೆಗೊಳಿಸಲು ಸೋಮವಾರ ಪಟ್ಟಣದ ಅರಣ್ಯ ಇಲಾಖೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಅಹವಾಲು ಸಭೆ ನಡೆಯಿತು. ಈ ವೇಳೆ ಹೆದ್ದಾರಿ ಪ್ರಾಧಿಕಾರದ ಎ.ಇ.ಇ ಮುನಿರಾಜು ಮಾತನಾಡಿ, ಹ್ಯಾಂಡ್‌ಪೋಸ್ಟ್ನಿಂದ ಕೊಟ್ಟಿಗೆಹಾರದವರೆಗೆ 10 ಮೀಟರ್ ರಸ್ತೆ, 6 ಮೀಟರ್‌ನಲ್ಲಿ ಶೋಲ್ಡರ್ ಮತ್ತು ಡ್ರೈನೇಜ್‌ಗೆ ಬಳಸಿಕೊಳ್ಳಲು ಒಟ್ಟು 16 ಮೀಟರ್ ರಸ್ತೆ ಅಗಲೀಕರಣಕ್ಕೆ ಕೇಂದ್ರ ಸರಕಾರ ಆದೇಶಿಸಿದೆ. ಇದು 2018ರಲ್ಲಿಯೇ ಆಗಬೇಕಿತ್ತು. ಶಿರಾಡಿ ಘಾಟ್ ಬಂದ್ ಆಗಿದ್ದರಿಂದ ಇದೇ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ತಡವಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಸರ್ವೇ ನಡೆಸಿದಾಗ ವಿವಿಧ ಜಾತಿಯ 432 ಮರಗಳನ್ನು ತೆರವು ಗೊಳಿಸಬೇಕಾಗಿದೆ.
ಮಳೆಗಾಲ ಮುಗಿದ ಮೇಲೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು. ಉಪ ಅರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ
ಜಗನ್ನಾಥ್ ಮಾತನಾಡಿ, ರಸ್ತೆ ಅಗಲೀಕರಣಕ್ಕೆ ರಸ್ತೆ ಬದಿಯಲ್ಲಿರುವ ಹಲಸು, ಮಹಗನಿ, ಹೊನ್ನೆ, ನೇರಳೆ, ಅಕೇಶಿಯಾ, ಸಾಗುವಾನೆ, ಸಿಲ್ವರ್ ಸೇರಿದಂತೆ ವಿವಿಧ ಜಾತಿಯ 432 ಮರವನ್ನು ಕಡಿಯಬೇಕಾಗುತ್ತದೆ. ಮರ ಕಡಿತಲೆಗೊಳಿಸದ ಮೇಲೆ 10 ಪಟ್ಟು ವಿವಿಧ ಜಾತಿಯ ಗಿಡಗಳನ್ನು ನೆಡಲಾಗುತ್ತದೆ ಎಂದರು.
ಸಭೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾ ಕಾರಿ ಮುದ್ದಣ್ಣ, ವಲಯ ಅರಣ್ಯಾಧಿಕಾರಿ ಮೋಹನ್, ಉಪ ವಲಯ ಅರಣ್ಯಾಧಿಕಾರಿ ಚಿದಾನಂದ, ರಮೇಶ್, ಪರಿಸರ ಪ್ರೇಮಿಗಳಾದ ಹೇಮಶೇಖರ್, ಪ್ರಶಾಂತ್, ಅರುಣ ಗುತ್ತಿ, ಶರತ್ ಹೆಸ್ಗೂಡು, ಮಜೀದ್, ಗೋಪಾಲ, ಮಂಜುನಾಥ್ ಬೈರಾಪುರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.