Cyclone Fengal Effect: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈಸ್ಕೂಲ್ ವರೆಗೆ ರಜೆ ಘೋಷಣೆ
Team Udayavani, Dec 2, 2024, 6:57 PM IST
ಚಿಕ್ಕಮಗಳೂರು: ಫೈಂಜಾಲ್ ಚಂಡಮಾರುತದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮೋಡಕವಿದ ವಾತವರಣ ನಿರ್ಮಾಣವಾಗಿದ್ದು ಸೋಮವಾರ ಮಧ್ಯಾಹ್ನದ ವೇಳೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕು ಸುತ್ತಮುತ್ತ ತುಂತುರು ಮಳೆಯಾಗಿದೆ. ಡಿ.3 ರಂದು ಮಳೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಹಾಗೂ ಡಿ.4 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಎರಡು ದಿನಗಳ ಕಾಲ ಸಾರ್ವಜನಿಕರು ಮುಂಜಾಗೃತ ಕ್ರಮವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗುಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ ಕಟ್ಟೆಗಳಿಗೆ ತೆರಳಬಾರದು ಹಾಗೂ ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವುದರಿಂದ ಸಾರ್ವಜನಿಕರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಾಲೆ ಅಂಗನವಾಡಿಗೆ ರಜೆ
ಹವಮಾನ ವೈಪರಿತ್ಯದಿಂದ ಜಿಲ್ಲಾದ್ಯಂತ ಎರಡು ದಿನಗಳ ಬಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾದ್ಯಂತ ಡಿ.3ರಂದು ಶಾಲೆ, ಅಂಗನವಾಡಿ ಹಾಗೂ ಹೈಸ್ಕೂಲ್ ವರೆಗೆ ಅನ್ವಯವಾಗುವಂತೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ವಿಜಯೇಂದ್ರ ಸಣ್ಣ ಹುಡುಗ, ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸುವುದು ಒಳಿತು: ರಮೇಶ್ ಜಾರಕಿಹೊಳಿ
ಆಸ್ತಿ ವಿವಾದ: ಸುಪಾರಿ ಕೊಟ್ಟು ಚಿಕ್ಕಪ್ಪನ ಕೊಲೆ… ಪ್ರಕರಣ ಭೇದಿಸಿದ ಚೆನ್ನಗಿರಿ ಪೊಲೀಸರು
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Munirathna: ಮುನಿರತ್ನ ವಿರುದ್ಧದ ಮತ್ತೂಂದು ಕೇಸ್ ಎಸ್‌ಐಟಿಗೆ ವರ್ಗಾವಣೆ?
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.