D.B.Chandregowda: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಇನ್ನಿಲ್ಲ
Team Udayavani, Nov 7, 2023, 8:12 AM IST
ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ (87 ವರ್ಷ) ಅವರು ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.
ಕೇಂದ್ರ ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಚಂದ್ರೇಗೌಡರು ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.
ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ಹೇಳಿವೆ.
ಇದನ್ನೂ ಓದಿ: Crime: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಬರ್ಬರ ಹತ್ಯೆ : ಇಬ್ಬರು ಠಾಣೆಗೆ ಶರಣು.!
ಆಪ್ತವಲಯದಲ್ಲಿ ಡಿಬಿಸಿ ಎಂದೇ ಪ್ರಸಿದ್ದರಾಗಿದ್ದ ಡಿ.ಬಿ. ಚಂದ್ರೇಗೌಡರನ್ನು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಅವರ ನಿಧನದಿಂದ ಮಲೆನಾಡಿನ ಭಾಗದಿಂದ ಬಂದಂತಹ ಸಮಾಜವಾದದ ಗಟ್ಟಿಕೊಂಡಿ, ನಿರ್ಮಲ ಮನಸ್ಸಿನ ವ್ಯಕ್ತಿತ್ವವೊಂದು ಕಳಚಿಬಿದ್ದಂತಾಗಿದೆ.
ಕಾಂಗ್ರೆಸ್ ಪಕ್ಷ ಹಾಗೂ ಇಂದಿರಾಗಾಂಧಿ ಅವರು ಸಂಕಷ್ಟದಲ್ಲಿದ್ದ ವೇಳೆ 1978 ರಲ್ಲಿ ಚಂದ್ರೆಗೌಡರು ತಮ್ಮ ಸಂಸತ್ ಸದಸ್ಯ ಸ್ಥಾನವನ್ನು ಬಿಟ್ಟುಕೊಟ್ಟು, ಇಂದಿರಾಗಾಂಧಿ ಅವರ ಗೆಲುವಿಗೆ ಹಗಲು- ರಾತ್ರಿ ದುಡಿದು ಇಡೀ ದೇಶದ ಗಮನ ಸೆಳೆದಿದ್ದರು.
ದೇವರಾಜ ಅರಸು, ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ಸಚಿವರಾಗಿ, ವಿಧಾನಸಭೆಯ ಸ್ಪೀಕರ್ ಆಗಿ, ರಾಜ್ಯಸಭೆಯ ಸದಸ್ಯರಾಗಿದ್ದರು. ವಿಧಾನ ಮಂಡಲ ಹಾಗೂ ಸಂಸತ್ತಿನ ಎಲ್ಲ ನಾಲ್ಕೂ ಸದನಗಳ ಸದಸ್ಯರಾಗಿದ್ದ ಹೆಗ್ಗಳಿಕೆ ಇವರದು.
ಸುಮಾರು ಐದು ದಶಕಗಳ ಕಾಲ ಈ ರಾಜ್ಯಕ್ಕೆ ತಮ್ಮ ಸಮಾಜವಾದಿ ಚಿಂತನೆಗಳ ಮೂಲಕ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದವರು ಚಂದ್ರೇಗೌಡರು ಎಂದು ಶಿವಕುಮಾರ್ ಅವರು ಸ್ಮರಿಸಿಕೊಂಡಿದ್ದಾರೆ.
ಚಂದ್ರೇಗೌಡರ ಆಡಳಿತ ವೈಖರಿಯನ್ನು ಹತ್ತಿರದಿಂದ ನೋಡಿದ ಸೌಭಾಗ್ಯ ನನ್ನದು. ವಿಧಾನಸಭೆ, ಪರಿಷತ್‌ಗಳಲ್ಲಿ ಅವರ ಆಳವಾದ, ವಿದ್ವತ್ ಪೂರ್ಣವಾದ ವಿಚಾರ ಮಂಡನೆ ಎಲ್ಲರನ್ನೂ ಸೆಳೆಯುತ್ತಿತ್ತು. ಆಡಳಿತ ಪರಿಶುದ್ದತೆ, ವೈಚಾರಿಕ, ಜನಪರ ಚಿಂತನೆಗಳಿಗೆ ಹೆಸರಾಗಿದ್ದ ಅವರು ಕಿರಿಯ ರಾಜಕಾರಣಿಗಳಿಗೆ ಮಾದರಿಯಾಗಿದ್ದರು ಎಂದು ಶಿವಕುಮಾರ್ ಅವರು ಕೊಂಡಾಡಿದ್ದಾರೆ.
“ಶರಣರ ಗುಣವನ್ನು ಮರಣದ ಲ್ಲಿ ಕಾಣು ಎಂಬಂತೆ, ಚಂದ್ರೇಗೌಡರು ಕನ್ನಡ, ಕರ್ನಾಟಕ ಅಭಿವೃದ್ಧಿಗೆ ದಾರಿ ಹಾಕಿಕೊಟ್ಟು ಇಹಲೋಕ ತ್ಯಜಿಸಿದ್ದಾರೆ. ಅವರ ಕುಟುಂಬದವರು, ಬಂದುಗಳು, ಅಭಿಮಾನಿಗಳಿಗೆ ಅವರ ಸಾವಿನ ನೋವು ಅರಗಿಸಿಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸಿಕೊಳ್ಳುತ್ತೇನೆ.” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಾಪ ಸೂಚಿಸಿ, ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.