ಡಿ.ದೇವರಾಜ ಅರಸು ಅಪರೂಪದ ರಾಜಕಾರಣಿ
Team Udayavani, Sep 4, 2018, 4:32 PM IST
ಕಡೂರು: ನಾಡು ಕಂಡ ಅಪರೂಪದ ರಾಜಕಾರಣಿ ದಿ| ಡಿ.ದೇವರಾಜ ಅರಸು ಎಂದು ಶಾಸಕ ಬೆಳ್ಳಿಪ್ರಕಾಶ್ ತಿಳಿಸಿದರು. ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ
ಸಹಯೋಗದಲ್ಲಿ ನಡೆದ ಡಿ.ದೇವರಾಜ ಅರಸು ಅವರ 103 ನೇ ಜಯಂತಿ ಹಾಗೂ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದ
ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅರಸು ರವರು ಬಲಾಡ್ಯ (ಲಿಂಗಾಯತ, ಒಕ್ಕಲಿಗ) ಜಾತಿಗಳ ಮಧ್ಯೆ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ
ಧೀಮಂತ ನಾಯಕರಾಗಿದ್ದರು. ಬಲಿಷ್ಟ ಜಾತಿ ವ್ಯವಸ್ಥೆಯಡಿ ಕೇಂದ್ರೀಕೃತವಾಗಿದ್ದ ರಾಜಕೀಯ ವ್ಯವಸ್ಥೆಗೆ ಪರ್ಯಾಯವಾಗಿ ಹಿಂದುಳಿದ ಸಣ್ಣ ಸಮುದಾಯಗಳನ್ನು ಕ್ರೋಢೀಕರಿಸಿ ದೊಡ್ಡ ಶಕ್ತಿಯಾಗಿ ಬೆಳೆದ ಮಹಾನ್ ಚೇತನ ದೇವರಾಜು ಅರಸು ಎಂದು ಹೇಳಿದರು.
ಜನಪರವಾದ ಕಾನೂನುಗಳನ್ನು ತರಲು ಅರಸು ಹಿಂದೆ ಮುಂದೆ ನೋಡುತ್ತಿರಲಿಲ್ಲ. ಭೂ ಸುಧಾರಣೆ, ಮಲಹೊರುವ
ಹಾಗೂ ಜೀತಪದ್ದತಿ ನಿರ್ಮೂಲನೆ, ಇಂದಿರಾ ಗಾಂಧಿಯವರ 20 ಅಂಶದ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ
ಅನುಷ್ಠಾನಗೊಳಿಸಿದ ಹಿರಿಮೆ ಅರಸುರವರದ್ದು ಎಂದು ಸ್ಮರಿಸಿದರು.
ಇಂತಹ ಮಹಾನ್ ವ್ಯಕ್ತಿಗಳ ಜಯಂತಿಗೆ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಅವರ ಯೋಜನೆಗಳ
ಫಲಾನುಭವಿಗಳೆಲ್ಲರೂ ಬರಬೇಕಾಗಿತ್ತು. ಯಾವ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಅಂತವರಿಗೆ ಕೂಡಲೆ ನೋಟಿಸ್ ನೀಡಿ ಎಂದು ತಹಶೀಲ್ದಾರ್‌ಗೆ ಸೂಚನೆ ನೀಡಿದರು.
ಜಿಪಂ ಸದಸ್ಯ ಮಹೇಶ್ ಒಡೆಯರ್ ಮಾತನಾಡಿ, 70 ದಶಕದಲ್ಲಿ ಹಿಂದುಳಿದ ವರ್ಗದಿಂದ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಮೊದಲಿಗರು ದಿ| ಡಿ.ದೇವರಾಜು ಅರಸು. ಅರಸುವರು ಬಡವರಿಗೆ ಭೂ ಸುಧಾರಣಾ ಕಾಯ್ದೆ ಜಾರಿಗೆ
ತಂದು ಸಾವಿರಾರು ಕುಟುಂಬಗಳಿಗೆ ಜೀವದಾನ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.
ಜಿ.ಪಂ.ಸದಸ್ಯ ಶರತ್ ಕೃಷ್ಣಮೂರ್ತಿ ಮಾತನಾಡಿದರು. ನಿವೃತ್ತ ಬಿಸಿಎಂ ಅಧಿಕಾರಿ ಕಾಶಿನಾಥ್ ಅರಸುರವರನ್ನು ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಬೀರೂರು ಪುರಸಭೆ ಅಧ್ಯಕ್ಷೆ ಸವಿತಾ ರಮೇಶ್ ಉದ್ಘಾಟಿಸಿದರು. ತಹಶೀಲ್ದಾರ್ ಭಾಗ್ಯ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ತಾಪಂ ಅಧ್ಯಕ್ಷೆ ರೇಣುಕಾ ಉಮೇಶ್, ಉಪಾಧಕ್ಷ ಚಂದ್ರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ನಾಗವಲ್ಲಿ, ಶಾಲಾ ಮಕ್ಕಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.