ಹಕ್ಕುಪತ್ರ ವಿತರಿಸದಿದ್ದರೆ ಚುನಾವಣೆ ಬಹಿಷ್ಕಾರ


Team Udayavani, Nov 30, 2020, 4:17 PM IST

ಹಕ್ಕುಪತ್ರ ವಿತರಿಸದಿದ್ದರೆ ಚುನಾವಣೆ ಬಹಿಷ್ಕಾರ

ಬಾಳೆಹೊನ್ನೂರು: ನರಸಿಂಹರಾಜಪುರ ತಾಲೂಕಿನ 14 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಕುಟುಂಬಗಳಿಗೆ ನಮೂನೆ 50, 53 ಹಾಗೂ 94 ಸಿ ಮತ್ತು ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರೂ ಸರಕಾರ ಹಕ್ಕುಪತ್ರ ವಿತರಿಸಿಲ್ಲ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಮರ್ಲೆ ಅಣ್ಣಯ್ಯ ಆರೋಪಿಸಿದರು.

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡರ ಅಧ್ಯಕ್ಷತೆ ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ಅವರನ್ನು ಅಕ್ರಮ ಸಕ್ರಮ ಸಮಿತಿಅಧ್ಯಕ್ಷರನ್ನಾಗಿ ನೇಮಿಸಿ ಸರಕಾರ ಗುಂಪುಗಾರಿಕೆಗೆ ಅವಕಾಶ ಮಾಡಿಕೊಟ್ಟಿದೆ. ನೂರಾರು ವರ್ಷಗಳಿಂದ ಅರಣ್ಯ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ  ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕುಪತ್ರ ನೀಡುತ್ತಿಲ್ಲ, ದಲಿತರ ಭೂಮಿ ಖರೀದಿಸಬಾರದೆಂದು ಸರಕಾರದ ಆದೇಶವಿದ್ದರೂ ದಲಿತರ ಭೂಮಿ ಹಾಗೂ ಮನೆಗಳನ್ನು ಖರೀದಿ ಮಾಡುತ್ತಿದ್ದಾರೆ. ಎಸ್ಸಿಗೆ ಮೀಸಲಿಟ್ಟ ಸ್ಮಶಾನ ಜಾಗವನ್ನು ಒತ್ತುವರಿಮಾಡಿದ್ದು, ಈ ಸಂಬಂಧ ಗ್ರಾ.ಪಂ ಮುಂಭಾಗದಲ್ಲಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದರು.

ಅಂಬೇಡ್ಕರ್‌ ರಚಿಸಿದ ಸಂವಿಧಾನದಲ್ಲಿ ಮೀಸಲಾತಿ ಹಿಡಿತಗೊಳಿಸಿ ಬೇರೆಯವರನ್ನುಓಲೈಸಲು ಹೊರಟಿದ್ದಾರೆ ಎಂದು ಆರೋಪಿಸಿದರು.ಶೃಂಗೇರಿ ಕ್ಷೇತ್ರದ ವಾಲ್ಮೀಕಿ ಸಂಘದ ಅಧ್ಯಕ್ಷ ಶ್ರೀನಿವಾಸ್‌ ಮಾತನಾಡಿ, ಎಸ್ಸಿ, ಎಸ್ಟಿ ಪಂಗಡದವರನ್ನು ಸರಕಾರವು ಹಿಂದಿನಿಂದಲೂಕಡೆಗಾಣಿಸುತ್ತಾ ಬಂದಿದೆ. ಬುಡಕಟ್ಟು ಜನರಿಗೆ ಪೌಷ್ಟಿಕ ಆಹಾರ ವಿತರಣೆಯಲ್ಲಿ ವಿಳಂಬ, ಹಾಗೂ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕುಪತ್ರ ನೀಡುವಲ್ಲಿ ಸರಕಾರದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆಎಸ್ಸಿ, ಎಸ್ಟಿ ಜನಾಂಗದವರು ಮುಂಬರುವ ಗ್ರಾಪಂ ಚುನಾವಣೆ ಬಹಿಷ್ಕಾರದೊಂದಿಗೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.

ಜಿಲ್ಲಾ ಸಂಚಾಲಕ ಗಂಗರಾಜು ಮಾತನಾಡಿ, ದಲಿತರ ಭೂಮಿ ಕಭಳಿಸಲು ಭೂ ಸುಧಾರಣಾ ಕಾಯ್ದೆ ಜಾರಿಗೆ ತರುತ್ತಿದ್ದಾರೆ. ರಾಜಕಾರಣಿಗಳಿಗೆ ಬೇಕಾದಂತೆ ಕಾನೂನು ತಿದ್ದುಪಡಿ ಮಾಡಿ ಅನ್ಯಾಯವೆಸಗುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಿಂದಲೂ ಎಸ್ಟಿ ಜನಾಂಗದವರು ಆರಾಧಿಸಿಕೊಂಡು ಬರುತ್ತಿರುವ ಕುಡ್ಲೂರಮ್ಮ ದೇವಸ್ಥಾನಗಳಿಗೆ ಇಲ್ಲಿಯವರೆಗೂ ಸಹಾಯಧನ ನೀಡಿರುವುದಿಲ್ಲ ಎಂದು ತಿಳಿಸಿದರು.

ಸಂಚಾಲಕ ಡಿ.ರಾಮು ಅಧ್ಯಕ್ಷತೆ ವಹಿಸಿ ಮಾತನಾಡಿ, ವಾಟುಕುಡಿಗೆ ಗ್ರಾಮದ ಸರ್ವೇ ನಂ.195, ಸರ್ವೇ ನಂ.89, ಬನ್ನೂರು ಗ್ರಾಮದ ಸರ್ವೇ ನಂ.95 ಹಾಗೂ ಹಲಸೂರು ಗ್ರಾಮದ ಕಬ್ಬಿನಮನೆ ಗ್ರಾಮದ ಸರ್ವೇ ನಂ.55 ರಲ್ಲಿ 50ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕು ಪತ್ರ ಹಾಗೂ ಹಿರೇಗದ್ದೆ ಗ್ರಾಪಂನ 40 ಕುಟುಂಬಗಳಿಗೆ ಕುಡಿಯುವ ನೀರು ಹಾಗೂ ಮೂಲಸೌಕರ್ಯ ಒದಗಿಸಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಮಹೇಂದ್ರಸ್ವಾಮಿ, ಹೇಮಂತ್‌, ಗಂಗಯ್ಯ, ಪ್ರವೀಣ, ನಾಗರಮಕ್ಕಿ ಸುನಂದ, ದೊಡ್ಡಯ್ಯ, ದಸಂಸ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

21-

Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

18-aranthodu

Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.