ಸಮರ್ಪಕ ವಿದ್ಯುತ್‌ ಪೂರೈಸಲು ಆಗ್ರಹ


Team Udayavani, Feb 12, 2019, 9:39 AM IST

bid-6.jpg

ಶೃಂಗೇರಿ: ಅಸಮರ್ಪಕ ವಿದ್ಯುತ್‌ ಪೂರೈಕೆಯಿಂದ ರೈತರು ಮತ್ತು ಸಣ್ಣ ಉದ್ಯಮಕ್ಕೆ ತೀವ್ರ ತೊಂದರೆ ಉಂಟಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಕಾನುವಳ್ಳಿ ಚಂದ್ರಶೇಖರ್‌ ಹೇಳಿದರು. ಮೆಸ್ಕಾಂ ಕಚೇರಿಯಲ್ಲಿ ಸೋಮವಾರ ತಾಲೂಕಿನಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ಮನವಿ ಸಲ್ಲಿಸಿ ಅವರು ಮಾತನಾಡಿದರು.

ತೋಟಗಾರಿಕೆ ಬೆಳೆಗಳಿಗೆ ಈಗ ನೀರು ಅಗತ್ಯವಾಗಿದ್ದು, ವಿದ್ಯುತ್‌ ಮೋಟಾರ್‌ನಿಂದ ತೋಟಗಳಿಗೆ ನೀರು ಒದಗಿಸಲು ಸಮರ್ಪಕ ವಿದ್ಯುತ್‌ ಪೂರೈಸಬೇಕು. ಕಳೆದ ಒಂದೂವರೆ ತಿಂಗಳಿಂದ ವಿದ್ಯುತ್‌ ಪೂರೈಕೆಯಲ್ಲಿ ತೀವ್ರ ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೂರೈಕೆಯಾಗುತ್ತಿರುವ ವಿದ್ಯುತ್‌ ವೋಲ್ಟೇಜ್‌ನ ಏರುಪೇರುನಿಂದ ಮೋಟಾರ್‌ಗಳು ಸುಟ್ಟು ಹೋಗುತ್ತಿವೆ. ಇದರಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ನೂತನ ವಿದ್ಯುತ್‌ ಮಾರ್ಗ ನಿರ್ಮಾಣಕ್ಕಾಗಿ ವಾರದಲ್ಲಿ ಮೂರು ದಿನ ವಿದ್ಯುತ್‌ ಸ್ಥಗಿತಗೊಳಿಸುತ್ತಿದ್ದು, ಇದನ್ನು ಒಂದು ದಿನಕ್ಕೆ ಇಳಿಸಬೇಕು. ಅಕ್ರಮ ಸಕ್ರಮ ಯೋಜನೆಯಡಿ ನಾಲ್ಕು ವರ್ಷದಿಂದ ರೈತರಿಂದ ಹಣ ಪಾವತಿಸಿಕೊಂಡಿರುವ ಮೆಸ್ಕಾಂ ವಿದ್ಯುತ್‌ ಸಂಪರ್ಕ ಮತ್ತು ಹೆಚ್ಚುವರಿ ವಿದ್ಯುತ್‌ ಪರಿವರ್ತಕ ಅಳವಡಿಸಿಲ್ಲ ಎಂದು ಆರೋಪಿಸಿದರು.

ರೈತ ಮುಖಂಡ ಮೆಣಸೆ ಚನ್ನಕೇಶವ ಮಾತನಾಡಿ, ಪ್ರತಿ ದಿನ ಬೆಳಗ್ಗೆ 6ಕ್ಕೆ ವಿದ್ಯುತ್‌ ನಿಲುಗಡೆ ಮಾಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಗೃಹಿಣಿಯರಿಗೆ ತೊಂದರೆಯಾಗುತ್ತಿದೆ. ಇದನ್ನು ಕನಿಷ್ಠ 8 ಗಂಟೆಯ ನಂತರವಷ್ಟೇ ವಿದ್ಯುತ್‌ ಕಡಿತ ಮಾಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಎಸ್‌. ಮಂಜುನಾಥ್‌, ಚಿಕ್ಕಮಗಳೂರು-ಆಲ್ದೂರು-ಶೃಂಗೇರಿ ಮಾರ್ಗದ ವಿದ್ಯುತ್‌ ಮಾರ್ಗಕ್ಕೆ ನೂತನ ಟವರ್‌ ಗೋಪುರ ನಿರ್ಮಾಣ ಭರದಿಂದ ನಡೆದಿದೆ. ವಾರದಲ್ಲಿ ಮೂರು ದಿನ ಇದಕ್ಕಾಗಿ ವಿದ್ಯುತ್‌ ಕಡಿತ ಮಾಡುತ್ತಿದ್ದು, ಪ್ರತಿ ದಿನ 7 ಟವರ್‌ ನಿರ್ಮಾಣ ಮಾಡಿ ಲೈನ್‌ ಎಳೆಯಲಾಗುತ್ತಿದೆ. ಒಟ್ಟು 168 ಟವರ್‌ ನಿರ್ಮಾಣ ಕೈಗೊಳ್ಳಬೇಕಿದೆ. ಇದು ಪೂರ್ಣಗೊಂಡ ಕೂಡಲೇ ಸಮರ್ಪಕ ವಿದ್ಯುತ್‌ ವೋಲ್ಟೇಜ್‌ ದೊರಕಲಿದೆ. ಇದುವರೆಗೆ ಇದ್ದ ಸಮಸ್ಯೆಯೂ ಬಗೆಹರಿಯಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಏಪ್ರಿಲ್‌ ಒಳಗಾಗಿ ಕಾಮಗಾರಿ ಮುಗಿಯುವ ನಿರೀಕ್ಷೆಯಿದ್ದು, ಪ್ರತಿ ದಿನ 150ಕ್ಕೂ ಹೆಚ್ಚು ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಳಗ್ಗೆ ವಿದ್ಯುತ್‌ ಕಡಿತ ಮಾಡುವ ಅವಧಿಯನ್ನು 7:30 ರ ನಂತರ ಮಾಡುವ ಭರವಸೆ ನೀಡಿದರು.

ಮೆಸ್ಕಾಂ ಸಹಾಯಕ ಅಭಿಯಂತರ ಪ್ರಶಾಂತ ಕುಮಾರ್‌, ಜಿ. ವೀರಣ್ಣಗೌಡ, ರೈತ ಮುಖಂಡರಾದ ಗುಂಡಪ್ಪ, ಮೆಣಸೆ ಅನಂತಯ್ಯ, ಚಂದ್ರಪ್ಪ ಇತರರಿದ್ದರು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.