ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ರವಿ


Team Udayavani, Sep 2, 2019, 1:30 PM IST

cm-tdy-1

ಚಿಕ್ಕಮಗಳೂರು: ಸಚಿವ ಸಿ.ಟಿ.ರವಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವತ್ತ ಗಮನಹರಿಸುವಂತೆ ಪ್ರವಾಸೋದ್ಯಮ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ಮೂಲ ಸೌಕರ್ಯಗಳ ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾನವನ್ನು ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಾಕೃತಿಕ ಮತ್ತು ಧಾರ್ಮಿಕ ಪ್ರವಾಸಿ ತಾಣಗಳಲ್ಲಿ ಅಭಿವೃದ್ಧಿ ಮತ್ತು ಸ್ವಚ್ಚತಾ ಕಾರ್ಯಗಳಿಗೆ ಹೆಚ್ಚು ಒತ್ತು ನೀಡಬೇಕು. ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಲಾಖೆಯವರು 15 ದಿನದೊಳಗೆ ಡಿ.ಪಿ.ಆರ್‌ ಮಾಡಿ ಸಲ್ಲಿಸಬೇಕು. ಸುಂದರ ಪರಿಸರ ನಿರ್ಮಾಣದಿಂದ ಪ್ರವಾಸಿಗರು ಬರಲು ಆಸಕ್ತಿ ವಹಿಸುತ್ತಾರೆ. ಇದರಿಂದ ಆದಾಯವೂ ಸಂಗ್ರಹಗೊಳ್ಳುತ್ತದೆ ಜಿಲ್ಲೆಯ ಬಸವನಹಳ್ಳಿ ಕೆರೆ, ಹೊನ್ನಮ್ಮನಹಳ್ಳ, ಗಾಳಿಕೆರೆ ಮತ್ತು ಮಾಣಿಕ್ಯಧಾರಾ, ಸಿರಿಮನೆ ಫಾಲ್ಸ್, ಕಲ್ಲತ್ತಿಗಿರಿಗಳಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ನೀಡುವ ಜತೆಗೆ ತೂಗು ಸೇತುವೆ ನಿರ್ಮಾಣ, ಕಾಂಕ್ರೀಟ್ ವಾಲ್, ರಸ್ತೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.

ಮಾಣಿಕ್ಯಧಾರಕ್ಕೆ ಹರಿಯುತ್ತಿರುವ ನೀರು ಸಾರ್ವಜನಿಕರಿಂದ ಅಶುದ್ಧ ಗೊಳ್ಳುತ್ತಿದ್ದು, ಪ್ರಾಣಿಗಳಿಗೆ ನೀರು ಕುಡಿಯಲು ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದು. ಅಲ್ಲಿಗೆ ತೆರಳುವ ಪ್ರವಾಸಿಗರು ಮೂಢನಂಬಿಕೆಯಿಂದ ತಮ್ಮ ಬಟ್ಟೆಯನ್ನು ನೀರಿನಲ್ಲಿ ಹಾಕುತ್ತಿದ್ದಾರೆ. ಅದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಪ್ರತಿನಿತ್ಯ ಸ್ವಚ್ಛತಾ ಕಾರ್ಯ ಮಾಡಬೇಕು ಎಂದು ಹೇಳಿದರು.

ಕೈಮರ ಚೆಕ್‌ಪೋಸ್ಟ್‌ಗಳಲ್ಲಿ ಸುಂಕ ವಸೂಲಿ ಮಾಡುತ್ತಿದ್ದು, ಅದನ್ನು ಸಾರ್ವಜನಿಕ ಶೌಚಾಲಯ ನಿರ್ವಹಣೆಗೆ ಬಳಸಬೇಕು. ದತ್ತಪೀಠ ವ್ಯಾಪ್ತಿಯಲ್ಲಿ ಬರುವ ಜಮೀನಿನಲ್ಲಿ ಗೋಮಾಳ, ಶಾಲೆ, ಆಟದ ಮೈದಾನ, ಸ್ಮಶಾನ, ವಸತಿ ರಹಿತ ಕುಟುಂಬಗಳ ನಿವೇಶನ ಮತ್ತು ಈಗಾಗಲೇ ಮನೆ ನಿರ್ಮಾಣ ಮಾಡಿಕೊಂಡಿರುವ ಜಮೀನನ್ನು ಬಿಟ್ಟು, ಸ್ಥಳೀಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲಂಪುರ ಮತ್ತು ಕೈಮರ ರಸ್ತೆಯಲ್ಲಿರುವ ಸರ್ಕಾರಿ ಮತ್ತು ಒತ್ತುವರಿ ಭೂಮಿಯ ಮಾಹಿತಿ ನೀಡುವುದು. ಅಕ್ರಮವಾಗಿ ನಿರ್ಮಾಣ ಮಾಡಿರುವ ರೆಸಾರ್ಟ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಸಖರಾಯಪಟ್ಟಣದ ಶಕುನಗಿರಿ ರಂಗನಾಥಸ್ವಾಮಿ ದೇವಾಲಯದಲ್ಲಿ ತಂಗುದಾಣದ ಕಾರ್ಯ ಸಂಪೂರ್ಣಗೊಂಡಿಲ್ಲ. ಶೀಘ್ರ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ಅಪರ ಜಿಲ್ಲಾಧಿಕಾರಿ ಡಾ.ಕುಮಾರ್‌ ವಿವಿಧ ಇಲಾಖೆಯ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.