ವಿದ್ಯಾರ್ಥಿಗಳ ಜ್ಞಾನವೃದ್ಧಿಯಿಂದ ಅಭಿವೃದ್ಧಿ ಸಾಧ್ಯ
Team Udayavani, Mar 21, 2021, 7:28 PM IST
ತರೀಕೆರೆ: ಗ್ರಾಮೀಣ ಭಾಗದಲ್ಲಿರುವ ವಿದ್ಯಾರ್ಥಿಗಳಿಗೆ ಪೋಷಕರು ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು. ವಿದ್ಯಾರ್ಥಿಗಳಿಗೆ ಜ್ಞಾನ ಸಂಪತ್ತು ಹೆಚ್ಚಿದಲ್ಲಿ ಗ್ರಾಮದ ಮತ್ತು ಕುಟುಂಬದ ಅಭಿವೃದ್ಧಿಗೆ ಕಾರಣವಾಗುತ್ತದೆ. ಜಿಲ್ಲಾ ಧಿಕಾರಿಗಳ ಗ್ರಾಮ ವಾಸ್ತವ್ಯದ ಮೂಲಕ ಗ್ರಾಮೀಣ ಭಾಗದ ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ಮತ್ತು ಪ್ರೋತ್ಸಾಹಿಸುವ ಕೆಲಸವನ್ನು ಮಾಡಲಾಗುವುದು.
ಹಳ್ಳಿ ಮಕ್ಕಳಲ್ಲಿ ಉತ್ತಮ ದರ್ಜೆಯಲ್ಲಿ ತೇರ್ಗಡೆಗೊಳ್ಳುವ ಬಗ್ಗೆ ಕೀಳರಿಮೆ ಇದೆ. ಇದನ್ನು ಅವರು ತೊರೆಯಬೇಕು ಮತ್ತು ನಿರ್ದಿಷ್ಟವಾದ ಗುರಿ ಮತ್ತು ಛಲ ಹೊಂದಿರಬೇಕು. ಇದು ಯೋಚನೆ ಮತ್ತು ಮಾರ್ಗದರ್ಶನದಿಂದ ಸಾದ್ಯ ಎಂದು ಜಿಲ್ಲಾ ಧಿಕಾರಿ ಡಾ| ರಮೇಶ ನುಡಿದರು. ನಂದಿಬಟ್ಟಲು ಕಾಲೋನಿಯಲ್ಲಿ ನಡೆದ “ಜಿಲ್ಲಾ ಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ ಗ್ರಾಮ ವಾಸ್ತವ್ಯ ನಡೆಸಲಾಗುತ್ತಿದೆ. ಸಮಸ್ಯೆಗಳ ಪರಿಹಾರ ಮತ್ತು ಅಭಿವೃದ್ಧಿ ಕೇವಲ ಅಧಿ ಕಾರಿಗಳು ಮತ್ತು ಜನಪ್ರತಿನಿ ಧಿಗಳಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಜನರ ಸಹಕಾರವೂ ಮುಖ್ಯ.
ಸಮಸ್ಯೆಗಳನ್ನು ತಮ್ಮ ಬಳಿಗೆ ನೇರವಾಗಿ ತರಬಹುದು. ಜನಪ್ರತಿನಿಧಿ ಗಳ ಮೂಲಕ ಮುಟ್ಟಿಸಬಹುದು ಅಥವಾ ಪ್ರತಿಕೆಗಳ ಮುಖಾಂತರ ತಲುಪಿಸಬಹುದು. ಆದರೆ ಇವೆಲ್ಲವೂ ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕು. ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇರಬಾರದು ಎಂದರು. ಜಿಲ್ಲಾಧಿ ಕಾರಿಗಳ ಬಳಿಗೆ ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ನೇರವಾಗಿ ತಮ್ಮ ಕಚೇರಿಗೆ ಬರಬಹುದು. ಇದಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿ ಸದಾ ತೆರೆದಿರುತ್ತದೆ.
ಒಂದೊಮ್ಮೆ ಜಿಲ್ಲಾ ಧಿಕಾರಿಗಳನ್ನು ಭೇಟಿ ಮಾಡಲು ಸಾದ್ಯವಾಗದ ಪಕ್ಷದಲ್ಲಿ ತಮ್ಮ ಆಪ್ತ ಸಹಾಯಕರ ಬಳಿ ದೂರು ನೀಡಬಹುದು. ಅವುಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಆನೇಕ ಇಲಾಖೆಗಳ ಜೊತೆಗೆ ಕೆಲಸ ನಿರ್ವಹಿಸಬೇಕಾಗಿರುವುದರಿಂದ ಇಲಾಖಾ ಧಿಕಾರಿಗಳ ಜೊತೆ ಸಮನ್ವಯ ಸಾಧಿ ಸಿ ಕೆಲಸ ನಿರ್ವಹಿಸಲಾಗುವುದು ಎಂದರು. ಗ್ರಾಮ ವಾಸ್ತವ್ಯದಲ್ಲಿ ಬಂದಿರುವ ಅರ್ಜಿಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಅವುಗಳಿಗೆ ಪರಿಹಾರ ನೀಡುವುದರ ಜೊತೆಗೆ ಅವುಗಳಿಗೆ ತಾತ್ವಿಕ ಅಂತ್ಯವನ್ನು ನೀಡಲಾಗುವುದು. ಇತರೆ ಇಲಾಖೆಗಳಿಗೆ ಸಂಬಂಧಿಸಿದಲ್ಲಿ ಅವುಗಳನ್ನು ನಿದಿ ìಷ್ಟ ಸಮಯದಲ್ಲಿ ಸಮಸ್ಯೆ ಪರಿಹರಿಸುವಂತೆ ಅ ಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಮತ್ತು ಇವುಗಳನ್ನು ನೋಡಿಕೊಳ್ಳಲು ನೋಡೆಲ್ ಅಧಿ ಕಾರಿಯನ್ನು ನೇಮಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.