Devotee: ಟೆಂಪಲ್ ರನ್ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್
ಮುಜರಾಯಿ ಇಲಾಖೆ, ವಕ್ಫ್ ಮಂಡಳಿ, ಚರ್ಚ್‌ಗಳು ಇರುವುದು ಏಕೆ?
Team Udayavani, Jan 12, 2025, 7:20 AM IST
ಚಿಕ್ಕಮಗಳೂರು: ನಾನು ಪ್ರತಿದಿನ ಪೂಜೆ ಮಾಡುವವನು. ಧರ್ಮದ ಬಗ್ಗೆ ನಂಬಿಕೆ ಇಟ್ಟುಕೊಂಡಿದ್ದೇನೆ. ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡುವುದಾದರೆ ನೀವೆಲ್ಲ ಸೇರಿ ದೇವಾಲಯಗಳನ್ನು ಮುಚ್ಚಿಬಿಡಿ. ಸರಕಾರದಲ್ಲಿ ಮುಜರಾಯಿ ಇಲಾಖೆ, ವಕ್ಫ್ ಮಂಡಳಿ, ಚರ್ಚ್‌ಗಳು ಇರುವುದು ಏಕೆ?’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ರಾಜಣ್ಣ ಹೇಳಿಕೆಗೆ ಪರೋಕ್ಷವಾಗಿ ಕಿಡಿಕಾರಿದರು.
ಶೃಂಗೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ನನ್ನ ಒಳ್ಳೆಯದಕ್ಕೆ, ರಾಜ್ಯದ ಒಳ್ಳೆಯದಕ್ಕೆ, ನಂಬಿರುವ ಜನರಿಗೋಸ್ಕರ ಸಮಾಜಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.
ಶೃಂಗೇರಿಯಲ್ಲಿ “ಮುಂದಿನ ಸಿಎಂ ಡಿಕೆಶಿ’ ಕೂಗು
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಶೃಂಗೇರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸುತ್ತಿದ್ದಂತೆ ನೆರೆದಿದ್ದ ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್’ ಎಂದು ಘೋಷಣೆ ಕೂಗಿದರು.
ಶಿವಕುಮಾರ್ ಅವರ ಆಗಮನಕ್ಕೂ ಮುನ್ನ ಹೆಲಿಪ್ಯಾಡ್‌ನಲ್ಲಿ ಶಾಸಕ ಟಿ.ಡಿ. ರಾಜೇಗೌಡ ಸೇರಿದಂತೆ ಹೆಚ್ಚಿನ ಸಂಖ್ಯೆಯ ಮುಖಂಡರು ಮತ್ತು ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಶಿವಕುಮಾರ್ ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಂತೆ ಅವರನ್ನು ಮುಖಂಡರು ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್’ ಎಂದು ಘೋಷಣೆಗಳನ್ನು ಕೂಗಿದರು.
ಈ ನಡುವೆ ಡಿ.ಕೆ. ಶಿವಕುಮಾರ್ ಶೃಂಗೇರಿಯ ಶಾರದಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯ ಆವರಣದಿಂದ ಹೊರ ಬಂದ ಅವರು, ವಿದ್ಯಾಶಂಕರ ದೇವಾಲಯದ ಗೋಡೆ ಮೇಲಿರುವ ಕಾರ್ತಿವೀರ್ಯಾರ್ಜುನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಧಿಕಾರ, ಶತ್ರು ಸಂಹಾರ, ಕಳೆದು ಹೋದ ವಸ್ತುವಿಗಾಗಿ ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸುವುದು ಇಲ್ಲಿನ ಪ್ರತೀತಿಯಾಗಿದೆ. ಬಳಿಕ ಗುರುನಿವಾಸಕ್ಕೆ ತೆರಳಿ ಗುರುಗಳ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
Threat: ಹೆಬ್ಬಾಳ್ಕರ್ ಕ್ಷಮೆ ಕೇಳದೆ ಹೋದ್ರೆ ಹತ್ಯೆ: ಸಿ.ಟಿ.ರವಿಗೆ ಬೆದರಿಕೆ ಪತ್ರ ರವಾನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.