ಜನರ ಭಾವನೆ ಜೊತೆ ಆಟವಾಡಬೇಡಿ
Team Udayavani, Aug 31, 2017, 2:32 PM IST
ಚಿಕ್ಕಮಗಳೂರು: ಭಾವನೆಗಳ ಜೊತೆ ಚೆಲ್ಲಾಟವಾಡಿ ಮನಸ್ಸುಗಳನ್ನು ಒಡೆಯುವವರ ವಿರುದ್ಧ ಯುವಜನತೆ ಎದ್ದು ನಿಲ್ಲಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಚ್.ದೇವರಾಜ್ ಹೇಳಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಪಕ್ಷಕ್ಕೆ ಸೇರ್ಪಡೆಗೊಂಡ ಯುವಕರನ್ನು ಸ್ವಾಗತಿಸಿ ಅವರು ಮಾತನಾಡಿದರು. ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೋಮು ಭಾವನೆ ಕೆರಳಿಸಿ ಭಾವನೆಗಳ ಜೊತೆ ಚೆಲ್ಲಾಟವಾಡಿ ಮನಸ್ಸುಗಳನ್ನು ಒಡೆಯುವವರ ಸಂಖ್ಯೆ ಹೆಚ್ಚುತ್ತಿದೆ. ಅಂತವರ ಬಣ್ಣದ ಮಾತಿಗೆ ಮರುಳಾಗಿ ಯುವ ಜನತೆ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು.
ಯುವಜನತೆ ಕೋಮು ವಿಷಬೀಜ ಬಿತ್ತುವವರ ಬಗ್ಗೆ ಎಚ್ಚರಿಕೆ ವಹಿಸಬೇಕು. ಜಾತೀಯತೆ ಮತ್ತು ಭ್ರಷ್ಟಾಚಾರವನ್ನು ತೊಡೆದು ಹಾಕಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿ ಮಾಡಿರುವ ಜನಪರ ಕಾರ್ಯಕ್ರಮಗಳನ್ನು ಮನೆ ಮನೆಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಮನವಿ ಮಾಡಿದರು. ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್‌ಗೆ ಸೇಪಡೆಗೊಂಡ 50ಕ್ಕೂ ಹೆಚ್ಚು ಯುವಕರನ್ನು ಪಕ್ಷದ ಬಾವುಟ ನೀಡಿ ಸ್ವಾಗತಿಸಲಾಯಿತು.
ಯುವಜನತಾದಳದ ಜಿಲ್ಲಾಧ್ಯಕ್ಷ ವಿನಯ್ ಕೋಟೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಧ್ಯಕ್ಷ ಡಿ.ಆರ್. ಕುಶ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಡಿ.ರಮೇಶ್, ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್.ದೇವರಾಜ್ ಅರಸ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ನಿಸಾರ್ ಅಹಮದ್, ಪ.ಜಾತಿ, ಪ.ವರ್ಗ ವಿಭಾಗದ ಜಿಲ್ಲಾಧ್ಯಕ್ಷ ಆರ್.ದೇವಿಪ್ರಸಾದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.