ಕಾಡುಕುರಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ಗ್ರಾ.ಪಂ ಚುನಾವಣಾ ಅಭ್ಯರ್ಥಿಗಳು
Team Udayavani, Dec 20, 2020, 7:57 PM IST
ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ಚುನಾವಣಾ ಪ್ರಚಾರಕ್ಕೆ ಹೋದವರು ಗೇಟಿಗೆ ಸಿಕ್ಕಿ ನರಳಾಡುತ್ತಿದ್ದ ಕಾಡುಕುರಿಯನ್ನು ರಕ್ಷಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ನೆಲ್ಲಿಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ನೆಲ್ಲಿಕೆರೆ ಗ್ರಾಮದ ಕಿರಣ್ ಮೋನಿಸ್ ಹಾಗೂ ರತ್ನಾಕರ್ ಎಂಬುವರು ಪ್ರಚಾರಕ್ಕೆಂದು ತೆರಳುವಾಗ ಕಾಡುಕುರಿಯೊಂದು ಕೂಗುತ್ತಿರುವ ಶಬ್ಧ ಕೇಳಿಸಿತ್ತು. ಕೂಡಲೇ ಇಬ್ಬರು ಅಭ್ಯರ್ಥಿಗಳು ಪ್ರಚಾರವನ್ನು ಬಿಟ್ಟು ಕಾಡುಕುರಿಯನ್ನು ಹುಡುಕಿಕೊಂಡು ಹೋಗಿ ಅದನ್ನ ಗೇಟಿನಿಂದ ಬಿಡಿಸಿ ರಕ್ಷಿಸಿದ್ದಾರೆ.
ದೇಹದ ಅರ್ಧಭಾಗ ಗೇಟಿನ ಮಧ್ಯೆ ಸಿಲುಕಿ ಕಾಡುಕುರಿ ನರಳಾಡುತಿತ್ತು. ಸ್ಥಳಕ್ಕೆ ಬಂದ ಚುನಾವಣಾ ಅಭ್ಯರ್ಥಿಗಳು, ಪ್ರಾಣಾಪಾಯದಲ್ಲಿದ್ದ ಕುರಿಯನ್ನ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಈ ಕಾಡುಕುರಿ ಸಂತತಿ ಅವನತಿಯ ಅಂಚಿನಲ್ಲಿರೋ ಪ್ರಾಣಿ ಎಂದೇ ಗುರುತಿಸಲ್ಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.