ರೈತರ ಹಿತಕ್ಕಾಗಿ ಎಪಿಎಂಸಿ ಮಾರುಕಟ್ಟೆ ಕಾಯ್ದೆ ಜಾರಿ


Team Udayavani, Jun 3, 2020, 6:50 AM IST

ರೈತರ ಹಿತಕ್ಕಾಗಿ ಎಪಿಎಂಸಿ ಮಾರುಕಟ್ಟೆ ಕಾಯ್ದೆ ಜಾರಿ

ಚಿಕ್ಕಮಗಳೂರು: ರಾಜ್ಯದಲ್ಲಿ ರೈತ ಬೆಳೆದ ಉತ್ಪನ್ನಗಳಿಗೆ ನಿಗದಿತ ಬೆಂಬಲ ಬೆಲೆ ಸಿಗಬೇಕು ಹಾಗೂ ಮಧ್ಯವರ್ತಿಗಳ ಸಂಪರ್ಕವಿಲ್ಲದೆ ರೈತರೇ ನೇರವಾಗಿ ಮಾರುಕಟ್ಟೆಯಲ್ಲಿ ವ್ಯವಹರಿಸುವ ಉದ್ದೇಶದಿಂದ ಎಪಿಎಂಸಿ ಮಾರುಕಟ್ಟೆ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

ಮಂಗಳವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಕೃಷಿ ಉತ್ಪನ್ನಗಳ ಬೆಲೆ ಹಾಗೂ ದಾಸ್ತಾನು  ಮಳಿಗೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಹಾಗೂ ಮಾರಾಟ ಮಾಡಲು ಪೂರ್ಣ ಸ್ವಾತಂತ್ರ್ಯ ಸಿಗಬೇಕು. ಉತ್ತಮ ಬೆಲೆ ಸಿಗುವ ಯಾವುದೇ ಭಾಗದಲ್ಲಿ ನಿಬಂಧನೆಗಳಿಲ್ಲದೇ ಮಾರಾಟ ಮಾಡುವ ಮೂಲಕ ರೈತರಿಗೆ ನೇರ ಲಾಭ ದೊರೆಯುವಂತೆ ಮಾಡುವ  ಉದ್ದೇಶದಿಂದ ಎಪಿಎಂಸಿ ಕಾಯ್ದೆ ರೂಪಿಸಲಾಗುತ್ತಿದೆ. ಕೊರೊನಾ ಕಾರಣದಿಂದಾಗಿ ಜಾರಿಗೊಳಿಸುವುದು ತಡವಾಗಿದೆ ಎಂದರು. ರಾಜ್ಯದ ಎಪಿಎಂಸಿ ಬೋರ್ಡ್ ಗೆ ಪರವಾನಗಿ ನೀಡುವ ಅಧಿಕಾರವನ್ನು ನೀಡಿದ್ದು, ಇಲ್ಲಿ ಯಾವುದೇ ರೈತರಿಗೆ ತೊಂದರೆ ನೀಡುವ ಉದ್ದೇಶವಿಲ್ಲ ಎಂದ ಅವರು, ರೈತರ ಹಿತದೃಷ್ಟಿಯಿಂದ ಕಾಯ್ದೆಗಳನ್ನು ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಜಿಲ್ಲೆಯಲ್ಲಿ ರೈತರ ಉತ್ಪನ್ನಗಳ ಹಿತದೃಷ್ಟಿಯಿಂದ ಶೀತ ಸಂಗ್ರಹಣ ದಾಸ್ತಾನು ಘಟಕಗಳನ್ನು (ಕೋಲ್ಡ್‌ ಸ್ಟೋರೇಜ್‌) ಸ್ಥಾಪಿಸುವಂತೆ ಕೇಳಿಕೊಂಡಿದ್ದು ಈ ಬಗ್ಗೆ ಕ್ರಮ ವಹಿಸಲಾಗುವುದು. ರಾಜ್ಯದಲ್ಲಿ ಯಾವುದೇ ಕೃಷಿ ಉತ್ಪನ್ನ ಸಾಗಾಟಕ್ಕೆ ನಿರ್ಬಂಧವಿಲ್ಲ. ಎಲ್ಲಾ ಭಾಗದಿಂದಲೂ ಕೃಷಿ ಉತ್ಪನ್ನಗಳು ಆಮದು ಮತ್ತು ರಫ್ತು ಆಗುತ್ತಿವೆ. ರಾಜ್ಯದ ಕೆಲವೊಂದು ಡಿಸಿಸಿ ಬ್ಯಾಂಕ್‌ಗಳಲ್ಲಿ ರೈತರಿಗೆ ಸಾಲ ನೀಡುವ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ತಂಡ ರಚಿಸಿ ಸೂಕ್ತ ತನಿಖೆ ನಡೆಸಲಾಗುವುದು. ಜಿಲ್ಲೆಗೆ ಒಬ್ಬರಂತೆ ಡೆಪ್ಯುಟಿ ಆಡಿಟರ್‌ ನೇಮಿಸಿ ರೈತರ ಹಿತ ಕಾಯಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮಾತನಾಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರುಕಟ್ಟೆ ಕಾಯ್ದೆ ಜಾರಿಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಜನ ವಿರೋಧಿ ಕಾಯ್ದೆ ರೂಪಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದರು. ರೈತರು ಹಾಗೂ ವ್ಯಾಪಾರಿಗಳೊಂದಿಗೆ ನೇರ ಸಂಪರ್ಕ ಇರಬೇಕು.ಮಧ್ಯವರ್ತಿಗಳ ಹಾವಳಿ ತಡೆಯಬೇಕು. ರೈತ ಬೆಳೆದ ಬೆಳೆಗೆ ಸೂಕ್ತ ನಿಗದಿತ ಬೆಂಬಲ ಬೆಲೆ ಸಿಗಬೇಕು ಎನ್ನುವ ಉದ್ದೇಶದಿಂದ ಖಾಸಗಿ ವ್ಯಕ್ತಿಗಳ ಸಹಕಾರದಿಂದ ಈ ಕಾಯ್ದೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದರು.

ಬಳಿಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಹೇಂದ್ರ, ಎ.ಪಿ.ಎಂ.ಸಿ. ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.