ಎನ್‌ಎಸ್‌ಯುಐ ಜತೆ ಗದ್ದಲ: ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆ

Team Udayavani, Jan 12, 2017, 3:45 AM IST

suicide-hanging.jpg

ಶೃಂಗೇರಿ: ಯೋಧರ ನಮನ ಕಾರ್ಯಕ್ರಮ ಆಯೋಜನೆ ಸಮಯದಲ್ಲಿ ಉಂಟಾದ ವಿವಾದದಿಂದ ದಾಖಲಾದ ಪ್ರಕರಣದಲ್ಲಿ ತನ್ನ ಹೆಸರು ಇದ್ದಿದ್ದರಿಂದ ಬೇಸತ್ತು ಎಬಿವಿಪಿ ಕಾರ್ಯಕರ್ತನಾಗಿರುವ ಬಿಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಎನ್‌ಎಸ್‌ಯುಐನ ಕೆಲ ಕಾರ್ಯಕರ್ತರು, ಕಾಲೇಜಿನ ಪ್ರಾಚಾರ್ಯರು, ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಲೂಕಿನ ಮೆಣಸೆ ಗ್ರಾಪಂನ ಕಿಕ್ರೆ ಗ್ರಾಮದ ಕೊಂಡಗೆರೆಯ ಎಂ.ಕೆ. ಅಭಿಷೇಕ್‌ (21) ಎಂಬಾತನೇ ಆತ್ಮಹತ್ಯೆಗೆ ಶರಣಾದವ. ಶ್ರೀ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದ ಈತ ಎಬಿವಿಪಿ ಕಾರ್ಯಕರ್ತನಾಗಿದ್ದ. ಮನೆ ಸಮೀಪದ ಕಾಡಿನಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಈತನ ಶವ ಪತ್ತೆಯಾಗಿದೆ.

ಕಾಲೇಜಿನಲ್ಲಿ ಇತ್ತೀಚೆಗೆ ಯೋಧ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಚಕ್ರವರ್ತಿ ಸೂಲಿಬೆಲೆ ಮುಖ್ಯ ಭಾಷಣ ಮಾಡಬೇಕಿತ್ತು. ಇದಕ್ಕೆ ಎನ್‌ಎಸ್‌ಯುಐ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನೂ ನಡೆಸಿತ್ತು. ಕಾರ್ಯಕ್ರಮ ನಡೆದಿದ್ದರೂ ಸೂಲಿಬೆಲೆ ಪಾಲ್ಗೊಂಡಿರಲಿಲ್ಲ. ಈ ಘಟನೆ ಬಳಿಕ 2 ಸಂಘಟನೆಗಳ ಮಧ್ಯೆ ಸಣ್ಣದಾಗಿ ಘರ್ಷಣೆಯೂ ಉಂಟಾಗಿ ಎಬಿವಿಪಿ ಕಾರ್ಯಕರ್ತರಾದ ಅಭಿಷೇಕ್‌, ಅನಿರುದ್ಧ, ಕೌಶಿಕ್‌, ಕಾರ್ತಿಕ್‌ ಅರ್ಜುನ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದರಿಂದ ಮನನೊಂದು ಅಭಿಷೇಕ್‌, ಕಾಲೇಜಿನಲ್ಲಿ ನಡೆದ ಕೆಲ ಘಟನೆಗಳಿಂದ ಮನ ನೊಂದಿದ್ದೇನೆ. ತನ್ನ ಹೆಸರು ಪ್ರಕರಣದಲ್ಲಿ ಸೇರಿದೆ. ಇದರಿಂದ ಗೌರವಸ್ಥ ಕುಟುಂಬಕ್ಕೆ ನಾನು ಕೆಟ್ಟ ಹೆಸರು ತಂದಂತಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್‌ನೋಟ್‌ ಬರೆದು ತನ್ನ ಕೊಠಡಿಯಲ್ಲಿಟ್ಟು ಕಾಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಕರಣ ದಾಖಲು: ಅಭಿಷೇಕ್‌ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಎನ್‌ಎಸ್‌ಯುಐನ ಅಂಜನ್‌, ಅಶ್ವಥ್‌, ಕಾಲೇಜಿನ ಪ್ರಾಚಾರ್ಯರು, ಆಡಳಿತ ಮಂಡಳಿ ವಿರುದ್ಧ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ರಾಜ್ಯಾದ್ಯಂತ ಇಂದು ಎಬಿವಿಪಿ ಹೋರಾಟ
ಬೆಂಗಳೂರು:
ಚಿಕ್ಕಮಗಳೂರಿನ ಶೃಂಗೇರಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿ ಅಭಿಷೇಕ್‌ ಆತ್ಮಹತ್ಯೆ ಖಂಡಿಸಿ ಗುರುವಾರ ರಾಜ್ಯಾದ್ಯಂತ ಹೋರಾಟಕ್ಕೆ ಎಬಿವಿಪಿ ಕರೆ ನೀಡಿದೆ. 

ಇದು ದೇಶಭಕ್ತರ ಕಾರ್ಯಕ್ರಮ ನಡೆಸುವ ವಿದ್ಯಾರ್ಥಿಗಳಿಗೆ ಸರ್ಕಾರ ಕೊಟ್ಟ ಆತ್ಮಹತ್ಯೆ ಭಾಗ್ಯ ಎಂದು ಆರೋಪಿಸಿರುವ ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ರಾಜೇಶ್‌ ಗುರಾಣಿ, ಈ ಘಟನೆಯನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಈಚೆಗೆ ಶೃಂಗೇರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಹುತಾತ್ಮ ಯೋಧರ ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಇದಕ್ಕೆ ಎನ್‌ಎಸ್‌ಯುಐ ವಿದ್ಯಾರ್ಥಿಗಳು ಅಡ್ಡಿಪಡಿಸಿದ್ದರು. ಸರ್ಕಾರದ ಪ್ರಭಾವವನ್ನು ಬಳಸಿಕೊಂಡು ಪೊಲೀಸ್‌ ಠಾಣೆಯಲ್ಲಿ ಎಬಿವಿಪಿ ಕಾರ್ಯಕರ್ತರ ವಿರುದ್ಧ ಕೇಸನ್ನು ಎನ್‌ಎಸ್‌ಯುಐ ಕಾರ್ಯಕರ್ತರು ದಾಖಲಿಸಿದ್ದರು. ಇದರಿಂದ ಮಾನಸಿಕ ಖನ್ನತೆಗೊಳಗಾದ ಅಭಿಷೇಕ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.