ಗುಣಮಟ್ಟದ ಇಳುವರಿ ತೆಗೆಯುವಲ್ಲಿ ರೈತರು ವಿಫಲ
Team Udayavani, Aug 31, 2017, 2:37 PM IST
ಬಾಳೆಹೊನ್ನೂರು: ಕಾಳು ಮೆಣಸು ಬೆಳೆಗಾರರು ಉತ್ಪಾದನೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದರೂ ಗುಣಮಟ್ಟದ ಹೆಚ್ಚಿನ ಇಳುವರಿ ತೆಗೆಯುವಲ್ಲಿ ವಿಫಲರಾಗುತಿದ್ದಾರೆ, ಅಲ್ಲದೆ ಮೂಲಭೂತ ಅಂಶವಾದ ಮಣ್ಣು ಪರೀಕ್ಷೆ, ನೀರು ನಿರ್ವಹಣೆ, ನೂತನ ತಾಂತ್ರಿಕತೆಗಳನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ಸಂಪನ್ಮೂಲ ವ್ಯಕ್ತಿ ಡಾ|ಎಂ.ನಾರಾಯಣ ತಿಳಿಸಿದರು.
ಅವರು ಬಾಳೆಹೊನ್ನೂರಿನ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ ಹಾಗೂ ಬೆಂಗಳೂರು ಮಲ್ಟಿಪ್ಲೆಕ್ಸ್ ಸಮೂಹ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮೀಣ ಭಾಗದ ರೈತರಿಗಾಗಿ ಅಯೋಜಿಸಿದ್ದ ಕಾಳು ಮೆಣಸಿನ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದರು. ಕಾಳು ಮೆಣಸಿನ ಬಳ್ಳಿಯ ಬೆಳವಣಿಗೆ, ಹೂ ಗೊಂಚಲುಗಳ ಉತ್ಪತ್ತಿ, ಗುಣಮಟ್ಟದ ಉತ್ತಮ ಇಳುವರಿ ಬರಲು ಸಹಾಯವಾಗಬಲ್ಲ ವಿಶೇಷ ಉತ್ಪನ್ನವನ್ನು ತಯಾರಿಸಿ ಹಲವು ಕೃಷಿ ಪರಿಸರಗಳಲ್ಲಿ ಪ್ರಾಯೋಗಿಕವಾಗಿ ಪರೀಕ್ಷೆ ಮಾಡಿದೆ. ಉತ್ತಮ ಫಲಿತಾಂಶ ಕಂಡು ರೈತರ
ಪ್ರಶಂಸೆಗೆ ಪಾತ್ರವಾದ ನಂತರ “ಮಲ್ಟಿಪ್ಲೆಕ್ಸ್ ಸ್ಪೆಷಲ್’ ಎಂಬ ಹೆಸರಿನ ಸಮತೋಲನ ಪೋಷಕಾಂಶಗಳ ಮಿಶ್ರಣ ಬಳಸಿ ಕಾಳು ಮೆಣಸಿನ ಬೆಳೆಗಳ ನಿರ್ವಹಣೆ ಹಾಗೂ ಇಳುವರಿ ಪಡೆಯುವ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.
ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗೌರ್ನರ್ ಜಿ.ಎಸ್.ಮಹಾಬಲರಾವ್ ಕಾಳು ಮೆಣಸಿನ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಉತ್ತಮ ಇಳುವರಿ ಪಡೆಯುವುದರ ಮುಖಾಂತರ ರೈತರು ತಮ್ಮ
ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಿದೆ ಎಂದರು.
ರೋಟರಿ ಜೋನಲ್ ಲೆಪ್ಟಿನೆಂಟ್ ಕೆ.ಟಿ.ವೆಂಕಟೇಶ್ ಪ್ರಾಸ್ತಾವಿಕ ಮಾತನಾಡಿದರು. ರೋಟರಿ ಅಧ್ಯಕ್ಷ ಕೆ.ಆರ್.ಪ್ರದೀಪ್ ಪಟೇಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ ಕೃಷಿಕರಾದ ಬಿ.ಎಂ.ಶಿವಣ್ಣಗೌಡ, ಎಂ.ಎಲ್.ಮಂಜೇಶ್, ಟಿ.ಸುರೇಶ್, ಎಸ್.ಜಿ.ಕೃಷ್ಣಮೂರ್ತಿ, ರಮೇಶ್, ವಿಲಾಸ್ ಕುಡ್ವ, ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಟಿ.ಎಂ. ಉಮೇಶ್, ವಿಲಿಯಂಡೇಸಾ ಸೇರಿದಂತೆ ಸುತ್ತಮುತ್ತಲ ಕೃಷಿಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.