ಹೆಚ್ಚಿನ ಪರಿಹಾರಕ್ಕೆ ಅರಣ್ಯ ವಾಸಿಗಳ ಆಗ್ರಹ
Team Udayavani, Dec 21, 2019, 2:43 PM IST
ಚಿಕ್ಕಮಗಳೂರು: ಮಸಗಲಿ ಅರಣ್ಯ ಭೂಮಿಯಿಂದ ಒಕ್ಕಲೆಬ್ಬಿಸುತ್ತಿರುವ ಕುಟುಂಬಗಳಿಗೆ ನೀಡುತ್ತಿರುವ ಪರಿಹಾರ ಕವಡೆ ಕಾಸಿನದ್ದಾಗಿದೆ. ಹಾಗಾಗಿ, ವೈಜ್ಞಾನಿಕ ಆಧಾರದಲ್ಲಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮಸಗಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದರು.
ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯನ್ನು ಶುಕ್ರವಾರ ಭೇಟಿ ಮಾಡಿದ ಹಲವಾರು ಗ್ರಾಮಸ್ಥರು, ಈಗ ನೀಡಲು ಉದ್ದೇಶಿಸಿರುವ ತಲಾ 5 ಲಕ್ಷ ರೂ. ಪರಿಹಾರ ನಮಗೆ ಬೇಡ. ಅರಣ್ಯ ಭೂಮಿಯಿಂದ ಜನರನ್ನು ತೆರವುಗೊಳಿಸುವಾಗ ಇತರೆ ಕಡೆ ಯಾವ ಮಾನದಂಡ ಆಧರಿಸಿ ಪರಿಹಾರ ನೀಡಲಾಗಿದೆಯೋ, ಅದೇ ಮಾದರಿಯಲ್ಲಿ ನಮಗೆ ಪರಹಾರ ನೀಡಬೇಕೆಂದು ಆಗ್ರಹಿಸಿದರು.
ಮಸಗಲಿ ಗ್ರಾಮದಲ್ಲಿ ಒಟ್ಟು 146ಕ್ಕೂ ಹೆಚ್ಚು ಕುಟುಂಬಗಳಿದ್ದು, ಹೆಚ್ಚು ಜಮೀನು ಇರುವವರಿಗೆ 5 ಲಕ್ಷ ರೂ. ಪರಿಹಾರ ನೀಡಲು ಉದ್ದೇಶಿಸಲಾಗಿದೆ. 10 ಗುಂಟೆ, 2, 3 ಎಕರೆ ಇರುವವರಿಗೆ ಯಾವುದೇ ಪರಿಹಾರವಿಲ್ಲ. ಈಗ 76 ಕುಟುಂಬಗಳು 5 ಲಕ್ಷ ರೂ. ಪರಿಹಾರ ಪಡೆಯಲು ಅರ್ಹರು ಎಂದು ಗುರುತಿಸಿದ್ದರೂ ಅದು ಅವರ ಜಮೀನಿಗೆ ಸರಿದೂಗುವ ಪರಿಹಾರವಲ್ಲ ಎಂದು ಆರೋಪಿಸಿದರು. ಅಲ್ಲಿ ತಲೆತಲಾಂತರಗಳಿಂದ ವಾಸಿಸಿದ್ದ 109ಕ್ಕೂ ಹೆಚ್ಚು ಕುಟುಂಬಗಳು ಪರಿಹಾರವಿಲ್ಲದೇ ಎಲ್ಲಿಗೆ ಹೋಗಬೇಕು? ಅವರಿಗೆ ಸರ್ಕಾರದಿಂದ 4 ಗುಂಟೆ ಜಾಗ ನೀಡಿ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಇದಕ್ಕೆ ಯಾರ ಒಪ್ಪಿಗೆಯೂ ಇಲ್ಲ. 10 ರಿಂದ 20 ಎಕರೆ ಜಮೀನು ಮಾಡಿಕೊಂಡು ಕಂದಾಯ ದಾಖಲೆ ಹೊಂದಿದವರಿದ್ದೇವೆ. ಕೇವಲ 5 ಲಕ್ಷ ರೂ. ಪರಿಹಾರವನ್ನು ಅದು ಯಾವ ಆಧಾರದಲ್ಲಿ ನಿಗದಿಪಡಿಸಿದ್ದಾರೆ ಎಂಬುದು ತಿಳಿದಿಲ್ಲ.
ಈ ಹಿನ್ನೆಲೆಯಲ್ಲಿ ವೈಜ್ಞಾನಿಕ ಆಧಾರದಲ್ಲಿ ನಮಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್, ಸಿಪಿಐ ಮುಖಂಡೆ ರಾಧಾ ಸುಂದರೇಶ್, ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
MUST WATCH
ಹೊಸ ಸೇರ್ಪಡೆ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೆ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.