ಕಾಡಾನೆಗಳ ಕಾಟ: ರೈತರಿಗೆ ಸಂಕಟ


Team Udayavani, Oct 6, 2018, 5:30 PM IST

chiikk.jpg

ಮೂಡಿಗೆರೆ: ತಾಲೂಕಿನ ಗುತ್ತಿಹಳ್ಳಿ ಮೂಲರಳ್ಳಿ ಹೊಸಕೆರೆ ಭೆ„ರಾಪುರ ಭಾಗದಲ್ಲಿ ಪ್ರತಿದಿನ ಕಾಡಾನೆ ದಾಳಿ ಇಡುತ್ತಿದ್ದು
, ಇದರಿಂದ ಕಾμ ಬೆಳೆಗಾರರು ಕಂಗಾಲಾಗಿದ್ದಾರೆ. ಮೂಲರಳ್ಳಿ ಭಾಗದಲ್ಲಿ ಗದ್ದೆ ಕೃಷಿ ಮಾಡಿರುವ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ರಾತ್ರಿಯಿಡಿ ತಮ್ಮ ಜಮೀನಿನಲ್ಲಿ ಬೀಡುಬಿಟ್ಟು ಆನೆಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವೊಮ್ಮೆ ಆನೆಗಳು ಪಟಾಕಿ ಸಿಡಿಸಿದ ಶಬ್ಧಕ್ಕೆ ರೊಚ್ಚಿಗೆದ್ದು ರೈತರ ಮೇಲೆಯೇ ದಾಳಿ ಮಾಡಿದ ಪ್ರಸಂಗಗಳೂ ನಡೆದಿವೆ. ಆದರೂ ರೈತರು ತಮ್ಮ ಬೆಳೆ ಉಳಿಸಿಕೊಳ್ಳುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

ಆದರೆ ಇವರಿಗೆ ಅರಣ್ಯ ಇಲಾಖೆಯಿಂದ ಯಾವುದೇ ಸಹಕಾರ ದೊರೆಯುತ್ತಿಲ್ಲ, ಅರಣ್ಯ ಇಲಾಖೆಗೆ ದೂರು
ನೀಡಿದರೆ ಆನೆ ದಾಳಿ ಮಾಡಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬರುತ್ತಾರೆಯೇ ಹೊರತು ರಾತ್ರಿ
ಸಮಯದಲ್ಲಿ ದಾಳಿ ಮಾಡುವ ಆನೆಗಳನ್ನು ಕಾಡಿಗಟ್ಟುವ ಕೆಲಸ ಮಾಡುತ್ತಿಲ್ಲ.

ಆನೆ ಹಾವಳಿಯಿಂದ ಬೇಸತ್ತ ರೈತರು ಸುಮಾರು 70ಎಕರೆಗೂ ಹೆಚ್ಚಿನ ಗದ್ದೆಯನ್ನು ಕೃಷಿ ಮಾಡದೆ ಹಾಳು ಬಿಟ್ಟಿದ್ದಾರೆ, ಗದ್ದೆ ಕೃಷಿ ಮಾಡಿರುವ ಕೆಲವರು ತಮ್ಮ ಬೆಳೆ ಉಳಿಸಿಕೊಳ್ಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಕೆಲ ದಿನಗಳಿಂದ ಪ್ರತಿರಾತ್ರಿ ದಾಳಿಯಿಡುತ್ತಿರುವ ಮೂರು ಗಂಡಾನೆಗಳು ಕಾμ, ಬಾಳೆ, ಗದ್ದೆಗಳನ್ನು ನಾಶಪಡಿಸುತ್ತಿವೆ. ಗುರುವಾರ ರಾತ್ರಿ ಹರೀಶ್‌ ಎಂಬುವವರ ಬಾಳೆ ತೋಟ ಮತ್ತು ಗದ್ದೆಗಳನ್ನು ನಾಶಪಡಿಸಿರುವ ಆನೆಗಳು ಗುತ್ತಿ ಭಾಗದಲ್ಲೂ ದಾಂಧಲೆ ನಡೆಸಿವೆ. ಅರಣ್ಯ ಇಲಾಖೆಗೆ ತಿಳಿಸಿದರೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆನೆಗಳನ್ನು ಓಡಿಸಲು ಪಟಾಕಿ ಕೇಳಿದರೆ 10 ಪಟಾಕಿಗಳಿರುವ ಒಂದು ಪ್ಯಾಕ್‌ ಕೊಟ್ಟು ಸುಮ್ಮನಾಗುತ್ತಾರೆ. ನಾವೇ ದುಡ್ಡು ಕೊಟ್ಟು ಪಟಾಕಿ ತಂದು ಆನೆ ಓಡಿಸುವ ಕೆಲಸ ಮಾಡುತ್ತಿದ್ದೇವೆ ಎನ್ನುತ್ತಾರೆ ಸ್ಥಳೀಯ ರೈತರು.

ನಾವು ಮನೆ ಬಿಟ್ಟು ಗದ್ದೆಗಳಲ್ಲೇ ವಾಸ್ತವ್ಯ ಹೂಡಿ ಆನೆಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದೇವೆ. ನಾವು ಮನೆ ಬಿಟ್ಟು ಆನೆ ಕಾಯಲು ಹೋದಾಗ ಮನೆಯವರೆಲ್ಲಾ ನಿದ್ರೆಗೆಟ್ಟು ನಮ್ಮನ್ನು ಎದುರುನೋಡುವ ಕೆಲಸ ಮಾಡುತ್ತಾರೆ. ರಾತ್ರಿ ಹೊತ್ತು ಬರುವ ಆನೆಗಳನ್ನು ಪಟಾಕಿ ಸಿಡಿಸಿ ಓಡಿಸಬಹುದು. ಆದರೆ ಬೆಳಗ್ಗಿನ ಜಾವ ದಾಳಿಯಿಡುವ ಆನೆಗಳಿಗೆ ಪಟಾಕಿ ಸಿಡಿಸಿದರೆ ಅವು ರೊಚ್ಚಿಗೆದ್ದು ನಮ್ಮ ಮೇಲೆಯೇ ದಾಳಿಯಿಡುತ್ತವೆ. ನಾವು ಜೀವ ಕೈಯ್ಯಲ್ಲಿ ಹಿಡಿದು ಬದುಕುವ ಪರಿಸ್ಥಿತಿ
ಬಂದೊದಗಿದೆ. ದಯವಿಟ್ಟು ಸಂಬಂಧಪಟ್ಟ ಅರಣ್ಯಾಧಿಕಾರಿಗಳು ಇತ್ತ ಗಮನ ಹರಿಸಿ ಆನೆಗಳನ್ನು ಸ್ಥಳಾಂತರ
ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮೂಲರಹಳ್ಳಿಯ ಹರೀಶ್‌ ಆಗ್ರಹಿಸಿದ್ದಾರೆ.

ಈ ಬಗ್ಗೆ ಎಸಿಎಫ್‌ ಮುದ್ದಣ್ಣ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ನಾವು ಆನೆಯ ಹಾವಳಿಯಿರುವ ಗ್ರಾಮಗಳಲ್ಲಿ ಆನೆಗಳನ್ನು ಓಡಿಸಲು ಪಟಾಕಿ ಕೊಟ್ಟರುತ್ತೇವೆ. ಅಲ್ಲದೆ ಆನೆಗಳನ್ನು ಸ್ಥಳಾಂತರ ಮಾಡಿದರೂ ಸಹಾ ಅದು ಪುನಹ: ಇಲ್ಲಿಗೇ ಬರುತ್ತವೆ. ಇದನ್ನು ಹಿಡಿದು ದೂರಕ್ಕೆ ಸಾಗಿಸಲು ಸರ್ಕಾರದ ಆದೇಶ, ಅನುಮತಿ ಬೇಕು. ಇದರ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳುಹಿಸಿದ್ದೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.