![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 12, 2023, 6:04 PM IST
ಕಡೂರು : ತಾಯಿ ಮತ್ತು ಮಗಳು ಪಂಚಾಯಿತಿಯೊಂದರ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಸ್ಥಾನ ಗಿಟ್ಟಿಸಿಕೊಂಡಿರುವ ಸ್ವಾರಸ್ಯಕರ ಘಟನೆ ಕಡೂರು ತಾಲೂಕಿನ ಗರ್ಜೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ಎರಡನೇ ಅವಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಇದರ ಜತೆಗೆ ಗೆಲುವು ಸಾಧಿಸಿದ ಪಂಚಾಯಿತಿಯ ಒಟ್ಟು7 ಜನ ಸದಸ್ಯರಲ್ಲಿ ಮೊದಲಿನಿಂದಲೂ 3 ಮತ್ತು 4 ಜನ ಸದಸ್ಯರ ಎರಡು ಗುಂಪುಗಳಿದ್ದವು. ತಾಯಿ ನೇತ್ರಾವತಿ ಮತ್ತು ಮಗಳು ಸ್ನೇಹ ಬೆಂಬಲದಿಂದ ನಾಲ್ಕು ಜನರ ಗುಂಪಿನ ಎನ್.ಆರ್.ರಂಜಿತಾ ಮತ್ತು ಎಂ.ಎಲ್.ಹರೀಶ್ ಮೊದಲ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.ಇದೀಗ ರಂಜಿತಾ ಮತ್ತು ಪ್ರಕಾಶ್,ನೇತ್ರಾವತಿ ಮತ್ತು ಸ್ನೇಹ ಅವರಿಗೆ ಬೆಂಬಲ ಸೂಚಿಸಿದರು. ಇದರಿಂದಾಗಿ ತಾಯಿ ಮಗಳು ಅಧಿಕಾರಕ್ಕೇರಿದರು. ಬದಲಾದ ಮೀಸಲಾತಿ ಮತ್ತು 4 ಸದಸ್ಯರ ನಡುವಿನ ಒಗ್ಗಟ್ಟು ಚುನಾವಣೆಯಲ್ಲಿ ತಾಯಿ ಮಗಳು ಗೆಲುವು ಸಾಧಿಸಲು ಸಹಕಾರಿಯಾಗಿದೆ.
ಎರಡನೇ ಅವಧಿಗೆ ಗರ್ಜೆ ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ನಡೆದ ಸಂದರ್ಭ ಅಧ್ಯಕ್ಷ ಸ್ಥಾನಕ್ಕೆ ಸ್ನೇಹ ಮತ್ತು ಜಿ.ಮಲ್ಲಿಕಾರ್ಜುನ್ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಎನ್.ನೇತ್ರಾವತಿ ಮತ್ತು ಎಂ.ಜ್ಯೋತಿ ನಡುವೆ ಪೈಪೋಟಿ ಏರ್ಪಟ್ಟಿತ್ತು. ಮಗಳು ಸ್ನೇಹ ಮತ್ತು ತಾಯಿ ನೇತ್ರಾವತಿ ತಲಾ 4 ಮತಗಳನ್ನು ಪಡೆದರೆ,ಪ್ರತಿರ್ಸ್ಪಗಳಾದ ಮಲ್ಲಿಕಾರ್ಜುನ್ ಮತ್ತು ಜ್ಯೋತಿ ತಲಾ ಮೂರು ಮತಗಳನ್ನು ಪಡೆದು ಸೋತರೆ. ಸ್ನೇಹ ಮತ್ತು ನೇತ್ರಾವತಿ ತಲಾ ಒಂದು ಮತಗಳ ಅಂತರದಿಂದ ಗೆಲುವು ಸಾಧಿಸಿ ಅಧ್ಯಕ್ಷ ಮತ್ತು ಉಪಾಧ್ಯಾಕ್ಷ ಸ್ಥಾನಕ್ಕೆ ಆಯ್ಕೆಯಾದರು.ಸದಸ್ಯರಾದ ಜಿ.ಬಿ.ಹರೀಶ್ ಕುಮಾರ್ ಇದ್ದರು.
ಮಗಳು ಸ್ನೇಹ ಮತ್ತು ತಾಯಿ ನೇತ್ರಾವತಿ ಗರ್ಜೆ ಗ್ರಾಮದವರು.ಒಂದೇ ಮನೆಯಲ್ಲೇ ವಾಸ.ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮಗಳು ಸ್ನೇಹ ಜಿ.ಮಾದಾಪುರ ಗ್ರಾಮದಿಂದ ಮತ್ತು ತಾಯಿ ಗರ್ಜೆಯಿಂದ ಗೆಲುವು ಸಾಸಿ ಒಂದೇ ಅವಯಲ್ಲಿ ಒಂದೇ ಮನೆಯಿಂದ ಇಬ್ಬರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು.ಇದೀಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಸ್ನೇಹ ಮತ್ತು ನೇತ್ರಾವತಿಗೆ ಒಲಿದು ಬಂದಿರುವುದರಿಂದ ಒಂದೇ ಮನೆಗೆ ಎರಡು ಹುದ್ದೆಗಳು ಸಿಕ್ಕಂತಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.