ಹಾಸನ ಟಿಕೆಟ್ ವಿಚಾರದಲ್ಲಿ ಗೊಂದಲ ಸೃಷ್ಟಿ : ಎಚ್‌ಡಿಕೆ
Team Udayavani, Feb 27, 2023, 6:55 AM IST
ಚಿಕ್ಕಮಗಳೂರು: ಹಾಸನ ಕ್ಷೇತ್ರ ಟಿಕೆಟ್ ವಿಚಾರದಲ್ಲಿ ಉಂಟಾಗಿರುವ ಗೊಂದಲದಿಂದ ಬಿಜೆಪಿ ಲಾಭ ಪಡೆದುಕೊಳ್ಳಲು ಮುಂದಾಗಿದೆ. ಇದರಿಂದ ಜೆಡಿಎಸ್‌ಗೆ ಆಘಾತವಾಗಲೂಬಹುದು.
ಈ ವಿಚಾರದ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಭಿಪ್ರಾಯ ಕೇಳಲೇಬೇಕು. ನನ್ನಲ್ಲಿ ಯಾವುದೇ ಗೊಂದಲವಿಲ್ಲ. ಕೆಲವರು ಗೊಂದಲ ಸೃಷ್ಟಿಸಿದ್ದಾರೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಕೊಪ್ಪ ತಾಲೂಕು ಹರಂದೂರು ಗ್ರಾಮದಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಾಸನ ಕ್ಷೇತ್ರ ಟಿಕೆಟ್ ಗೊಂದಲ ನಿವಾರಣೆ ಮಾಡಿ ಜನರಲ್ಲಿರುವ ತಪ್ಪು ಅಭಿಪ್ರಾಯ ದೂರ ಮಾಡಲು ಸಮಾನಮನಸ್ಕ ಮುಖಂಡರು, ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಪಕ್ಷದ ವರಿಷ್ಠರು ಸಭೆಯನ್ನು ರದ್ದು ಮಾಡಿರುವ ಮಾಹಿತಿ ಸಿಕ್ಕಿದೆ ಎಂದರು.
ಹಾಸನದಲ್ಲಿ ಭವಾನಿಯೇ ಅಭ್ಯರ್ಥಿ ಎಂದು ಅಲ್ಲಿಯ ಜೆಡಿಎಸ್ ಮುಖಂಡ ಕರೀ ಗೌಡರು ಹೇಳಿದ್ದಾರೆ. ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ. ಕರೀಗೌಡರು ಯಾವ ಉದ್ದೇಶದಿಂದ ಹಾಗೆ ಹೇಳುತ್ತಿದ್ದಾರೆ ಗೊತ್ತಿಲ್ಲ. ಅಭ್ಯರ್ಥಿ ಯಾರಾಗಬೇಕೆಂಬುದನ್ನು ಕಾರ್ಯಕರ್ತರು ಹೇಳಬೇಕು. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸಭೆ ಕರೆದು ಚರ್ಚಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.