ಕೇಂದ್ರ-ರಾಜ್ಯದಲ್ಲಿ ಜನಪರ ಸರ್ಕಾರ
ಹೆಬ್ಬೂರು ರೈಲ್ವೆ ಕೆಳ ಸೇತುವೆ ಕಾಮಗಾರಿ ಪರಿಶೀಲನೆ
Team Udayavani, Jun 27, 2020, 9:28 AM IST
ಅಜ್ಜಂಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಮತ್ತು ಬಿ.ಎಸ್.ವೈ. ನಾಯಕತ್ವದ ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶ, ಬಡವರು ಹಾಗೂ ರೈತರ(ಗಾವ್ -ಗರೀಬ್-ಕಿಸಾನ್)ಪರವಾಗಿವೆ. ಈ ಮೂರೂ ವರ್ಗದವರ ಪರವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.
ಪಟ್ಟಣದ ಬಳಿಯ ಹೆಬ್ಬೂರು ರೈಲ್ವೆ ಕೆಳ ಸೇತುವೆ ನಿರ್ಮಾಣ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ ಅವರು ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ವಾಣಿವಿಲಾಸ ಸಾಗರ ಡ್ಯಾಂಗೆ ನೀರು ಹರಿಸಲು ಹೆಬ್ಬೂರು ಬಳಿಯ ರೈಲ್ವೆ ಮಾರ್ಗಕ್ಕೆ ಸುರಂಗ ನಿರ್ಮಾಣ ಅತ್ಯಗತ್ಯವಾಗಿತ್ತು. ಈ ಕಾರ್ಯ 8 ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಈಚೆಗೆ ಇಲಾಖೆಯಿಂದ ಅನುಮತಿ ನೀಡಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಇದರಿಂದ ವಿವಿಧ ಜಿಲ್ಲೆಗಳ 6 ಲಕ್ಷ ಎಕರೆ ಕೃಷಿಭೂಮಿಗೆ ನೀರು ಕೊಂಡೊಯ್ಯಲು ಅನುಕೂಲ ಆಗಲಿದೆ. ಲಕ್ಷಾಂತರ ರೈತರಿಗೆ ನೆರವಾಗಲಿದೆ ಎಂದರು.
ಸುರಂಗ ಮಾರ್ಗ ನಿರ್ಮಾಣ 31 ದಿನಗಳಲ್ಲಿ ಪೂರ್ಣಗೊಂಡಿದೆ. ಶೀಘ್ರ ಕಾಮಗಾರಿ ಪೂರ್ಣಗೊಳ್ಳಲು ಶ್ರಮಿಸಿದ ರೈಲ್ವೆ, ಜಲಸಂಪನ್ಮೂಲ, ಭದ್ರಾ ಮೇಲ್ದಂಡೆ ಯೋಜನೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಹೆಬ್ಬೂರು ಬಳಿಯ ರೈಲ್ವೆ ಮಾರ್ಗದಲ್ಲಿ ಅಂಡರ್ ಪಾಸಿಂಗ್ ನಿರ್ಮಾಣದಿಂದ ರೈತರಿಗೆ ಅನುಕೂಲ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ದೇಶಾದ್ಯಂತ ಇರುವ ಅಂಡರ್ ಪಾಸಿಂಗ್‌ನಲ್ಲಿಯೂ ಈ ಸಮಸ್ಯೆ ಆಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ನಡೆದಿದೆ ಎಂದು ಉತ್ತರಿಸಿದರು. ಸುರಂಗ ಮಾರ್ಗ ನಿರ್ಮಾಣ ವೇಳೆ ಹೆಚ್ಚುವರಿ ಹಳಿ ಅಳವಡಿಸಲಾಗಿದೆ. ಇದರಿಂದ ಗ್ರಾಮದ 30 ಮನೆಯೊಳಕ್ಕೆ ಮಳೆ ನೀರು ಹರಿದು ಸಮಸ್ಯೆಯುಂಟಾಗಿದೆ. ರೈಲ್ವೆ ಮಾರ್ಗದಂಚಿನಲ್ಲಿ ಚರಂಡಿ ನಿರ್ಮಿಸಿ, ಪರಿಹಾರ ಕಲ್ಪಿಸಿ ಎಂದು ಮುಖಂಡ ಹೆಬ್ಬೂರು ನಾಗೇಂದ್ರ, ಸಚಿವರಿಗೆ ಮನವಿ ಮಾಡಿದರು.
ಸಂಸದ ಸಿದ್ದೇಶ್ವರ್, ಮೈಸೂರು ಎಡಿಆರ್ ಎಂ.ಅಪರ್ಣಾ ಗಾರ್ಗ, ನೈರುತ್ಯ ರೈಲ್ವೆ ವ್ಯವಸ್ಥಾಪಕ ವಿಜಯ್‌ಕುಮಾರ್ ಸಿಂಗ್, ಇಲಾಖೆಯ ಜಗದೀಶ್, ಭದ್ರಾ ಮೇಲ್ದಂಡೆ ಯೋಜನೆ ಇಂಜಿನಿಯರ್ ಸುರೇಶ್, ರಾಕೇಶ್, ಲಮಣಿ, ಜಗದೀಶ್, ಗುತ್ತಿಗೆದಾರ ವೆಂಕಟರಾವ್, ಉಪವಿಭಾಗಾಧಿ ಕಾರಿ ರೇಣುಕಾ ಪ್ರಸಾದ್, ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ, ಪಿಎಸ್‌ಐ ಬಸವರಾಜು ಮತ್ತಿತರರಿದ್ದರು.
ನಾನು ನರೇಂದ್ರ ಮೋದಿ , ಯಡಿಯೂರಪ್ಪ ಅವರಲ್ಲಿ ವಿಶ್ವಾಸ ಇರಿಸಿದ್ದೇನೆ. ಕ್ಷೇತ್ರದ ಜನ ನನ್ನ ಮೇಲೆ ನಂಬಿಕೆಯಿಟ್ಟು ಚುನಾಯಿಸಿದ್ದಾರೆ. ಅವರ ಋಣ ತೀರಿಸುವ ಕೆಲಸ ನನ್ನದು. ಸಂಸದನಾದ ಬಳಿಕ ಹತ್ತಾರು ಬಾರಿ ಭದ್ರಾ ಕಾಮಗಾರಿ ಸ್ಥಳ ವೀಕ್ಷಿಸಿದ್ದೇನೆ. ಅಧಿಕಾರಿಗಳು, ಸಚಿವರನ್ನು ಭೇಟಿ ಮಾಡಿದ್ದೇನೆ. ಕಾಮಗಾರಿ ಚುರುಕುಗೊಳಿಸಲು ಗುತ್ತಿಗೆದಾರರ ಮೇಲೆ ಒತ್ತಡ ಹೇರಿದ್ದೇನೆ. ಎಲ್ಲವೂ ಅಂದುಕೊಂಡಂತೆ ನಡೆದರೆ 2 ವರ್ಷಗಳಲ್ಲಿ ಭದ್ರಾ ನೀರು ವಾಣಿವಿಲಾಸ ಸಾಗರ ಸೇರಲಿದೆ. -ನಾರಾಯಣಸ್ವಾಮಿ, ಚಿತ್ರದುರ್ಗ ಸಂಸದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.