ರೈತರ ಸಾಲ ಮನ್ನಾಕ್ಕೆ ಒತ್ತಾಯ

Team Udayavani, Jul 4, 2017, 11:46 AM IST

CHIKMAGLURU-5.jpg

ಚಿಕ್ಕಮಗಳೂರು: ಬರಗಾಲದಿಂದ ಬಳಲುತ್ತಿರುವ ರೈತರು ಮತ್ತು ಎಲ್ಲ ಬೆಳೆಗಾರರ ಸಾಲವನ್ನು ಸಂಪೂರ್ಣ ಮನ್ನಾ
ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬೆಳೆಗಾರರ ಒಕ್ಕೂಟ, ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ನಗರದ ಲೀಡ್‌ ಬ್ಯಾಂಕ್‌ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬ್ಯಾಂಕ್‌ ಎದುರು ಕೆಲಕಾಲ ಧರಣಿ ನಡೆಸಿ
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಬಿ.ಎಸ್‌. ಜಯರಾಮ್‌, ಕಳೆದ ನಾಲ್ಕು ವರ್ಷಗಳ ಸತತ ಬರಗಾಲದಿಂದ ರೈತರು ಮತ್ತು ಎಲ್ಲ ಬೆಳೆಗಾರರು ಕಂಗೆಟ್ಟಿದ್ದಾರೆ. ಎಲ್ಲ ಬೆಳೆಗಳೂ ನಾಶವಾಗಿ ಬ್ಯಾಂಕಿನಿಂದ ಪಡೆದ ಸಾಲ ತೀರಿಸಲಾಗದೆ ಮರ್ಯಾದೆಗೆ
ಅಂಜಿ ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಉಪಾದ್ಯಕ್ಷ ಮಂಜುನಾಥ್‌ ಮಾತನಾಡಿ, ರೈತರ ದುಡಿಮೆಯ ಫಲವಾಗಿ
ಐಷಾರಾಮಿಯಾಗಿ ಬದುಕುತ್ತಿರುವ ಉದ್ದಿಮೆದಾರರ ಸಾಲವನ್ನು ಮನ್ನಾ ಮಾಡುತ್ತಿರುವ ಕೇಂದ್ರ ಸರ್ಕಾರ
ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ರೈತರತ್ತ ತಿರುಗಿ ನೋಡುತ್ತಿಲ್ಲ ಎಂದು ದೂರಿದರು.
ಕೆಜಿಎಫ್‌ ಸಂಘಟನಾ ಕಾರ್ಯದರ್ಶಿ ಡಿ.ಎಂ. ವಿಜಯ್‌ ಮಾತನಾಡಿ, ಕಳೆದ ವರ್ಷ ಬೆಳೆ ವಿಮೆಯಡಿ ಪ್ರತಿ ರೈತರಿಂದ 12 ಸಾವಿರ ರೂ. ಪಡೆದಿರುವ ಕೇಂದ್ರ ಸರ್ಕಾರ ಇದುವರೆಗೂ ಬೆಳೆ ನಷ್ಟಕ್ಕೆ ಯಾವುದೇ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು. 

ಕೇಂದ್ರ ಸರ್ಕಾರ ರೈತರ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ಮತ್ತು ರಾಜಕಾರಣ ಮಾಡುವುದನ್ನು ಬಿಡಬೇಕು.
ಈಗಾಗಲೇ ಐವತ್ತು ಸಾವಿರ ರೂ. ಸಾಲ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ಮಾದರಿಯಲ್ಲಿ ಕೃಷಿಕರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. 

ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಪ್ರಶಾಂತ್‌ ಎಂ. ದೇಸಾಯಿ ಅವರಿಗೆ ಮನವಿ ಸಲ್ಲಿಸಲಾಯಿತು, ರೈತರ
ಸಮಸ್ಯೆಗಳನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಭರವಸೆ ದೊರೆತ ಹಿನ್ನೆಲೆಯಲ್ಲಿ ಪ್ರತಿಭಟನೆ
ಹಿಂಪಡೆಯಲಾಯಿತು.

ಕೆಜಿಎಫ್‌ ಉಪಾಧ್ಯಕ್ಷ ರತೀಶ್‌, ಆಲ್ದೂರು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಸಿ.ಎ. ಸುರೇಶ್‌, ಲಿಂಗಪ್ಪಗೌಡ,
ಮಹೇಶ್‌, ರೈತ ಸಂಘ, ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎ. ಮಂಜುನಾಥ್‌, ಮಹಿಳಾ ಘಟಕದ
ಅಧ್ಯಕ್ಷೆ ಹಾಲಮ್ಮ, ರಾಜ್ಯ ಉಪಾಧ್ಯಕ್ಷೆ ವನಶ್ರೀ, ಮುಖಂಡ ಕೆ.ಕೆ. ಕೃಷ್ಣೇಗೌಡ, ಜಿಲ್ಲಾಧ್ಯಕ್ಷ ಎಂ.ಸಿ. ಬಸವರಾಜ್‌
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.